ಬೆಂಗಳೂರು : ಸಿದ್ದಗಂಗಾ ಮಠದ ಡಾ. ಶಿವಕುಮಾರಸ್ವಾಮಿ ಪುತ್ಥಳಿ ವಿರೂಪಗೊಳಿಸಿದ್ದ ಆರೋಪಿಯನ್ನು ಗಿರಿನಗರ ಪೊಲೀಸರು ಬಂಧಿಸಿದ್ದಾರೆ.
ರಾಜ್ ಶಿವು ಎಂಬಾತ ಬಂಧಿತ ಆರೋಪಿಯಾಗಿದ್ದಾನೆ. ಗಿರಿನಗರದ ಬಳಿಯ ವೀರಭದ್ರನಗರ ಬಸ್ ನಿಲ್ದಾಣದ ಬಳಿ ನ.30 ರಂದು ರಾತ್ರಿ ಪುತ್ಥಳಿಗೆ ಹಾನಿ ಮಾಡಿದ್ದ ಎಂದು ಹೇಳಲಾಗಿದೆ.
ಶಿವಕುಮಾರ ಸ್ವಾಮೀಜಿ ಮೂರ್ತಿ ಒಡೆಯುವಂತೆ ಕನಸನಲ್ಲಿ ಬಂದು ಏಸು ಹೇಳಿದ್ದ. ಇದಕ್ಕೆ ಮೂರ್ತಿ ವಿರೂಪಗೊಳಿಸಿದ್ದೇನೆ ಎಂಬುದಾಗಿ ಅಸಂಬದ್ಧ ಹೇಳಿಕೆ ನೀಡಿದ್ದಾನೆ ಎನ್ನಲಾಗಿದೆ.
ಏಳು ವರ್ಷಗಳ ಹಿಂದೆ ರಾಜ್ ಶಿವು ಹಿಂದೂ ಧರ್ಮ ತೊರೆದು ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿದ್ದ. ನಂತರ ಈತ ಹಿಂದೂ ದೇವತೆಗಳು, ಹಿಂದೂ ಸಂತರು, ಸನ್ಯಾಸಿಗಳ ಬಗ್ಗೆ ಅವಹೇಳನ ಮಾಡುತ್ತಿದ್ದ. . ಕ್ರೈಸ್ತ ಧರ್ಮದ ಪ್ರಚಾರ ಮಾಡಲು ಭಿತ್ತಿಪತ್ರ ಹಂಚುತ್ತಿದ್ದ. ಪತ್ರದಲ್ಲಿನ ಕೋಡ್ ಸ್ಕ್ಯಾನ್ ಮಾಡಿದ್ರೆ ಬೈಬಲ್ ಸಿಗುವಂತೆ ಭಿತ್ತಿಪತ್ರ ಹಂಚುತ್ತಿದ್ದ ಬ್ಯಾಡರಹಳ್ಳಿ ವ್ಯಾಪ್ತಿಯಲ್ಲಿ ವಾಸವಿದ್ದ ಆತ ಶಿವಕುಮಾರ ಸ್ವಾಮೀಜಿ ಮೂರ್ತಿಗೆ ಹಾನಿ ಮಾಡಲು ಸಂಚು ರೂಪಿಸಿದ್ದ. ನ.30ರಂದು ರಾತ್ರಿ ಸುತ್ತಿಗೆ ಸಮೇತ ಬಂದ ಈತ ಯಾರು ಇಲ್ಲದ ವೇಳೆ ಪುತ್ಥಳಿ ವಿರೂಪಗೊಳಿಸಿ ಪರಾರಿಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ