ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇನ್ನೂ 4-5 ದಿನ ಮಳೆ ; ಮುನ್ಸೂಚನೆ

ಬೆಂಗಳೂರು ; ಫೆಂಗಲ್ ಚಂಡಮಾರುತದ ದುರ್ಬಲವಾಗುತ್ತಿದೆ, ಆದರೆ ಕರ್ನಾಟಕದಲ್ಲಿ ಅದರ ಪ್ರಭಾವದಿಂದ ಮಳೆ ಬೀಳುತ್ತಿದೆ. ಕರ್ನಾಟಕದ ಹಲವಾರು ಜಿಲ್ಲೆಗಳಲ್ಲಿ ಡಿಸೆಂಬರ್ 9ರವರೆಗೂ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ. ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಬೀದರ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲು ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.
ವರದಿ ಪ್ರಕಾರ, ದಕ್ಷಿಣ ಕನ್ನಡದ ಮುಲ್ಕಿಯಲ್ಲಿ ಅತೀ ಹೆಚ್ಚು 26 ಸೆಂ.ಮೀ. ಮಳೆಯಾಗಿದೆ. ಮಂಗಳೂರಿನಲ್ಲಿ 19, ಪಣಂಬೂರು 18, ಕಾರ್ಕಳ 15, ಉಡುಪಿ 14, ಕೋಟ 13, ಭಾಗಮಂಡಲ, ಮದ್ದೂರು ಹಾಗೂ ಬೆಳ್ಳೂರಿನಲ್ಲಿ ತಲಾ 9, ಹುಣಸೂರು, ನಾಪೋಕ್ಲು ತಲಾ 6, ಪುತ್ತೂರು, ಮಾಣಿ, ಸುಳ್ಯ, ಸರಗೂರು ಮಂಡ್ಯದಲ್ಲಿ ತಲಾ 5 ಸೆಂ.ಮೀ. ಮಳೆಯಾಗಿದೆ.

ಪ್ರಮುಖ ಸುದ್ದಿ :-   ಒಡೆಸಾ ಬಂದರಿನಲ್ಲಿ ವಾಣಿಜ್ಯ ಹಡಗಿನ ಮೇಲೆ ಕ್ಷಿಪಣಿ ದಾಳಿ: ನಾಲ್ವರು ಭಾರತೀಯರು ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

4.7 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement