ಯಾರೋ ಹೇಳಿದಾಕ್ಷಣ ವಿಜೇಯೆಂದ್ರ ಬದಲಾವಣೆ ಮಾಡಲು ಆಗದು : ರಾಧಾಮೋಹನ ಅಗರ್ವಾಲ್

ಬೆಂಗಳೂರು : ರಾಜ್ಯ ಬಿಜೆಪಿಯಲ್ಲಿ ಯಾವುದೇ ಬಣ ರಾಜಕೀಯ ಕಂಡುಬಂದಿಲ್ಲ. ಅಲ್ಲದೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಸದ್ಯಕ್ಕೆ ಬದಲಾವಣೆ ಮಾಡುವ ಯಾವುದೇ ವಿಚಾರ ಇಲ್ಲ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ರಾಧಾಮೋಹನದಾಸ ಅಗರ್ವಾಲ್ ಹೇಳಿದ್ದಾರೆ.
ಶನಿವಾರ ಬೆಂಗಳೂರಿನ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆ ನಡೆದ ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಅವರು, ಸದ್ಯ ವಿಜಯೇಂದ್ರ ಸರಿ ಎಂದು ಹೈಕಾಂಡ್‌ಗೆ ಅನಿಸಿದೆ. ಹೀಗಾಗಿ ಅವರಿಗೆ ನಾಯಕತ್ವ ನೀಡಲಾಗಿದೆ, ಯೃೋ ಹೇಳಿದರೆಂದು ಅವರನ್ನು ಬದಲಾವಣೆ ಮಾಡಲು ಸಾಧ್ಯವಿಲ್ಲ. ಈ ಬಗ್ಗೆ ಹೈಕಮಾಂಡ್‌ ನಿರ್ಧಾರ ಮಾಡುತ್ತದೆ ಎಂದು ಸ್ಪಷ್ಟಪಡಿಸಿದರು.
ನಾಯಕತ್ವ ಬದಲಾಯಿಸುವ ಅಧಿಕಾರ ಪಕ್ಷದ ಕಾರ್ಯಕರ್ತರಿಗೆ ಹಾಗೂ ಹೈಕಮಾಂಡ್ ಅವರಿಗೆ ಮಾತ್ರ ಇದೆ. ಹೈಕಮಾಂಡ್‌ ಅದಕ್ಕೆ ಯಾವಾಗ ಮಾಡಬೇಕು ಎಂದು ಅನಿಸುತ್ತದೆಯೋ ಆಗ ನಿರ್ಧಾರ ಕೈಗೊಳ್ಳುತ್ತದೆ. ಈಗ ಅಂತಹ ಯಾವುದೇ ವಿಚಾರ ಇಲ್ಲ ಎಂದು ಹೇಳಿದರು.
ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ. ಅದಕ್ಕೆ ಯತ್ನಾಳ ಇನ್ನೂ ಉತ್ತರ ನೀಡಿಲ್ಲ. ಅವರ ಉತ್ತರ ನೋಡಿಕೊಂಡು ಹೈಕಮಾಂಡ್‌ ನಿರ್ಧರಿಸಲಿದೆ.

ಪ್ರಮುಖ ಸುದ್ದಿ :-   ಕರ್ನಾಟಕದ 12 ಜಿಲ್ಲೆಗಳಲ್ಲಿ ಜೂ.15ರ ವರೆಗೆ ಜೋರಾದ ಮಳೆ ಮುನ್ಸೂಚನೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement