
ಹೊನ್ನಾವರ : ಕುಮಟಾ-ಹೊನ್ನಾವರ ವಿಧಾನಸಭಾ ಕ್ಷೇತ್ರದ ಶಾಸಕ ದಿನಕರ ಶೆಟ್ಟಿ ಅವರ ಕಾರಿನ ಹಿಂಬದಿಗೆ ಬೈಕೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಹೊನ್ನಾವರದ ರಾಷ್ಟ್ರೀಯ ಹೆದ್ದಾರಿ 66ರ ಕರ್ಕಿ ನಾಕಾ ಬಳಿ ನಡೆದಿದೆ ಎಂದು ವರದಿಯಾಗಿದೆ.
ಗಾಯಗೊಂಡ ವ್ಯಕ್ತಿಯನ್ನು ಹಳದಿಪುರದ ನಿವಾಸಿ ನಾಗಪ್ಪ ಗೌಡ (60) ಎಂದು ಗುರುತಿಸಲಾಗಿದೆ. ಶಾಸಕ ದಿನಕರ ಶೆಟ್ಟಿಯವರು ಹೊನ್ನಾವರದ ಕರ್ಕಿ ನಾಕಾ ಬಳಿ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ್ದರು, ಈ ವೇಳೆ ಕಾರ್ಯಕ್ರಮ ಮುಗಿಸಿ ಹಿಂತಿರುಗುತ್ತಿದ್ದಾಗ ಕಾರು- ಬೈಕ್ ನಡುವೆ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರನ ತಲೆಗೆ ಗಂಭೀರ ಗಾಯವಾಗಿದೆ ಎಂದು ಹೇಳಲಾಗಿದೆ.
ಕೂಡಲೇ ಶಾಸಕ ದಿನಕರ ಶೆಟ್ಟಿ ಗಾಯಗೊಂಡ ವ್ಯಕ್ತಿಯನ್ನು ತಮ್ಮ ಕಾರಿನಲ್ಲಿ ಹೊನ್ನಾವರದ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಹೊನ್ನಾವರ ತಾಲೂಕಾಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ರೆಗಾಗಿ ಮಣಿಪಾಲ್ ಆಸ್ಪತ್ರೆಗೆ ಒಯ್ಯಲಾಗಿದೆ. ಘಟನಾ ಸ್ಥಳಕ್ಕೆ ಹೊನ್ನಾವರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.



ನಿಮ್ಮ ಕಾಮೆಂಟ್ ಬರೆಯಿರಿ