ಬೆಳಗಾವಿ : 6 ತಿಂಗಳಲ್ಲಿ 29 ಬಾಣಂತಿಯರು, 322 ಶಿಶುಗಳು ಸಾವು

ಬೆಳಗಾವಿ : ಬೆಳಗಾವಿ ಜಿಲ್ಲೆಯಲ್ಲಿ ಕಳೆದ ಆರು ತಿಂಗಳ ಅವಧಿಯಲ್ಲಿ 29 ಬಾಣಂತಿಯರು ಮತ್ತು 322 ನವಜಾತ ಶಿಶುಗಳು ಮೃತಪಟ್ಟಿದ್ದು,
ಬೆಳಗಾವಿಯ ಜಿಲ್ಲಾ ಆಸ್ಪತ್ರೆಯಲ್ಲಿ 111 ಹೆಚ್ಚು ಶಿಶುಗಳು ಮೃತಪಟ್ಟಿರುವುದು ಬೆಳಕಿಗೆ ಬಂದಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪ್ರಭಾರ ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಶಂಕರಪ್ಪ ಗಡೇದ ಅವರು, ಈ ವರ್ಷದ ಏಪ್ರಿಲ್ ನಿಂದ ಅಕ್ಟೋಬರ್ ಅವಧಿಯಲ್ಲಿ ಈ ಸಾವು ಸಂಭವಿಸಿದೆ. ರಕ್ತಸ್ರಾವದಿಂದ ಹೆಚ್ಚಿನ ಬಾಣಂತಿಯರು ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ.
ಜಿಲ್ಲಾ ಅಧೀಕ್ಷಕ ಡಾ.ವಿಠ್ಠಲ ಶಿಂದೆ ಮಾತನಾಡಿ, ಬೆಳಗಾವಿ ಜಿಲ್ಲೆಯಲ್ಲಿ ಆರು ತಿಂಗಳ ಅವಧಿಯಲ್ಲಿ 322 ನವಜಾತ ಶಿಶುಗಳು ಮರಣ ಹೊಂದಿವೆ. ಇವುಗಳಿಗೆ ಅಪೌಷ್ಟಿಕತೆ, ಕಡಿಮೆ ತೂಕ, ನ್ಯೂಮೋನಿಯಾ ಮುಂತಾದವುಳು ಕಾರಣವಾಗಿವೆ. ಮೃತಪಟ್ಟ ಶಿಶುಗಳಲ್ಲಿ ಬೇರೆ ಬೇರೆ ತೊಂದರೆಯಿಂದ ಹೊರಗಿನಿಂದ ತುರ್ತು ಚಿಕಿತ್ಸೆಗೆ ಬೆಳಗಾವಿ ಆಸ್ಪತ್ರೆಗೆ ದಾಖಲಾದ ಶಿಶುಗಳು ಹೆಚ್ಚಿನ ಪ್ರಮಾಣದಲ್ಲಿ ಮೃತಪಟ್ಟಿವೆ. ಆದರೆ ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಮರಣ ಪ್ರಮಾಣ ಕಡಿಮೆ ಇದೆ ಎಂದು ತಿಳಿಸಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement