ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್​ ಮಧ್ಯಂತರ ಜಾಮೀನು ಅವಧಿ ವಿಸ್ತರಣೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್, ಮತ್ತಿತರರ ಜಾಮೀನು ಅರ್ಜಿ ವಿಚಾರಣೆ ಪೂರ್ಣಗೊಳಿಸಿದ ಹೈಕೋರ್ಟ್ ತೀರ್ಪು ಕಾಯ್ದಿರಿಸಿದೆ. ಇದೇ ವೇಳೆ, ದರ್ಶನ್​ಗೆ ಚಿಕಿತ್ಸೆ ಪಡೆಯಲು ಮಂಜೂರು ಮಾಡಿದ್ದ ಮಧ್ಯಂತರ ಜಾಮೀನು ಆದೇಶವನ್ನು ವಿಸ್ತರಿಸಿದೆ.
ಬೆನ್ನು ನೋವಿನಿಂದ ಬಳಲುತ್ತಿರುವ ನಟ ದರ್ಶನ್ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮುಂದಿನ ದಿನಾಂಕದವರೆಗೂ ಮಧ್ಯಂತರ ಜಾಮೀನು ವಿಸ್ತರಣೆ ಮಾಡಿ ಹೈಕೋರ್ಟ್ ಆದೇಶ ನೀಡಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್, ಮತ್ತಿತರ ಆರೋಪಿಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿಶ್ವಜಿತ​ ಶೆಟ್ಟಿ ಅವರಿದ್ದ ನ್ಯಾಯಪೀಠವು ಈ ಸಂಬಂಧದ ಆದೇಶವನ್ನು ಕಾಯ್ದಿರಿಸಿತು. ವಿಚಾರಣೆ ವೇಳೆ ದರ್ಶನ್​ ಪರ ವಾದ ಮಂಡಿಸಿದ ಹಿರಿಯ ವಕೀಲ ಸಿ.ವಿ. ನಾಗೇಶ ಅವರು​, ದರ್ಶನ್​ ಆರೋಗ್ಯ ಮತ್ತು ಚಿಕಿತ್ಸೆ ಕುರಿತಂತೆ 5 ವೈದ್ಯಕೀಯ ಪ್ರಮಾಣ ಪತ್ರವನ್ನು ನ್ಯಾಯಪೀಠಕ್ಕೆ ಸಲ್ಲಿಸಿ ಶಸ್ತ್ರ ಚಿಕಿತ್ಸೆ ಕುರಿತು ವಿವರಿಸಿದರು.
ಎಸ್ ಪಿಪಿ ಪ್ರಸನ್ನ ಕುಮಾರ್ ಕೂಡ ಪ್ರತಿವಾದ ಮಂಡಿಸಿದರು. ಸುದೀರ್ಘ ವಾದ, ಪ್ರತಿವಾದ ಆಲಿಸಿದ ನ್ಯಾಯಾಧೀಶರು ದಿನಾಂಕ ಘೋಷಿಸದೆ ತೀರ್ಪು ಕಾಯ್ದಿರಿಸಿದ್ದಾರೆ. ಜೊತೆಗೆ​ ಆದೇಶ ಬರುವವರೆಗೂ ನಟ ದರ್ಶನ್ ವೈದ್ಯಕೀಯ ಜಾಮೀನು ಅವಧಿ ವಿಸ್ತರಿಸಿ ಆದೇಶಿಸಿದ್ದಾರೆ.

ಪ್ರಮುಖ ಸುದ್ದಿ :-   ಏರ್ ಇಂಡಿಯಾ ವಿಮಾನದಲ್ಲಿ 7 ಮಂದಿ ಅಸ್ವಸ್ಥ

4 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement