ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರ್ನಾಟಕದ ಹಲವು ಜಿಲ್ಲೆಗಳಲ್ಲಿ 2 ದಿನ ಭಾರಿ ಮಳೆ ಮುನ್ಸೂಚನೆ ; ಹಳದಿ ಅಲರ್ಟ್‌ ಘೋಷಣೆ

ಬೆಂಗಳೂರು : ಆಗ್ನೇಯ ಬಂಗಾಳ ಕೊಲ್ಲಿ ಮತ್ತು ಪೂರ್ವ ಹಿಂದೂ ಮಹಾಸಾಗರ ವಲಯಗಳಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಹಾಗೂ ಚಂಡಮಾರುತದ ಪರಿಚಲನೆಗಳಿಂದಾಗಿ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಎರಡ್ಮೂರು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ
ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಮತ್ತು ಮಳೆನಾಡು ಜಿಲ್ಲೆಗಳಲ್ಲಿ ಡಿಸೆಂಬರ್ 12 ಮತ್ತು 13 ರಂದು ಗುಡುಗು ಸಿಡಿಲು ಸಹಿತವಾಗಿ ಅಲ್ಲಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಡಿಸೆಂಬರ್‌ 12ರಂದು ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ತುಮಕೂರು, ರಾಮನಗರ, ಚಿತ್ರದುರ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್‌ ನೀಡಲಾಗಿದೆ. ಬಳ್ಳಾರಿ, ಚಾಮರಾಜನಗರ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ, ವಿಜಯನಗರ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಡಿಸೆಂಬರ್ 13ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಿಸಲಾಗಿದೆ.
ಮೈಸೂರು, ಮಂಡ್ಯ, ಹಾಸನ, ದಾವಣಗೆರೆ, ಚಾಮರಾಜನಗರ, ಹಾವೇರಿ ಮುಂತಾದ ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

ಪ್ರಮುಖ ಸುದ್ದಿ :-   ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement