ಹಿರಿಯ ರಾಜಕಾರಣಿ, ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಇನ್ನಿಲ್ಲ

ಬೆಂಗಳೂರು: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ವಿದೇಶಾಂಗ ಸಚಿವ ಎಸ್​ಎಂ ಕೃಷ್ಣ (SM Krishna) ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಇಂದು, ಮಂಗಳವಾರ (ಡಿಸೆಂಬರ್​ 10) ನಸುಕಿನ ಜಾವ 2:30ರ ಸುಮಾರಿಗೆ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಎಸ್​​ಎಂ ಕೃಷ್ಣರನ್ನು ಮೊದಲು ವೈದೇಹಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಬಳಿಕ ಶ್ವಾಸಕೋಶದ ಸೋಂಕು ಕಾಣಿಸಿಕೊಂಡ ಹಿನ್ನಲೆ ಮಣಿಪಾಲ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿತ್ತು. ಕರ್ನಾಟಕದ ಹಿರಿಯ ರಾಜಕಾರಣಿಗಳಲ್ಲೊಬ್ಬರಾದ ಕೃಷ್ಣ ಅವರು ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾಗಿದ್ದರು. ಕೇಂದ್ರ ವಿದೇಶಾಂಗ ಸಚಿವರಾಗಿ ಹಾಗೂ ಮಹಾರಾಷ್ಟ್ರ ರಾಜ್ಯದ ಮಾಜಿ ರಾಜ್ಯಪಾಲರಾಗಿ ಕಾರ್ಯನಿರ್ವಹಿಸಿದ್ದಾರೆ. 1964 ಏ.29ರಂದು ಶಿವಮೊಗ್ಗ ಜಿಲ್ಲೆ ಕುಡುಮಲ್ಲಿಗೆಯ ಚನ್ನಪ್ಪಗೌಡ ಮತ್ತು ಕಮಲಾಕ್ಷಮ್ಮ ದಂಪತಿಯ ಪುತ್ರಿ ಪ್ರೇಮಾ ಅವರೊಂದಿಗೆ ವಿವಾಹ. ಮಾಳವಿಕಾ ಹಾಗೂ ಶಾಂಭವಿ ಇಬ್ಬರು ಹೆಣ್ಣು ಮಕ್ಕಳಿದ್ದಾರೆ.

ಇಂದು, ಮಂಗಳವಾರ ಇಡೀ ದಿನ ಸದಾಶಿವನಗರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ನಾಳೆ ಮಧ್ಯಾಹ್ನ 1 ಗಂಟೆಯ ಬಳಿಕ ಅವರ ಊರಾದ ಮದ್ದೂರಿಗೆ ಪಾರ್ಥಿವ ಶರೀರವನ್ನು ಶಿಫ್ಟ್‌ ಮಾಡಲಾಗುತ್ತದೆ.
ಇವರು ಬಹುಕಾಲ ಕಾಂಗ್ರೆಸ್ ಪಕ್ಷದ ಸದಸ್ಯರಾಗಿದ್ದರು, ಬದಲಾದ ರಾಜಕೀಯ ಸನ್ನಿವೇಶಗಳ ಕಾರಣ ಮಾರ್ಚ್ 2017 ರಂದು ಭಾರತೀಯ ಜನತಾ ಪಕ್ಷವನ್ನು ಸೇರಿದ್ದರು. ಅವರು 1999 ರಿಂದ 2004 ರವರೆಗೆ ಕರ್ನಾಟಕದ 16 ನೇ ಮುಖ್ಯಮಂತ್ರಿಯಾಗಿದ್ದರು ಮತ್ತು 2004 ರಿಂದ 2008 ರವರೆಗೆ ಮಹಾರಾಷ್ಟ್ರದ 19ನೇ ರಾಜ್ಯಪಾಲರಾಗಿದ್ದರು . ಎಸ್.ಎಂ.ಕೃಷ್ಣ ಅವರು ಡಿಸೆಂಬರ್ 1989ರಿಂದ ಜನವರಿ 1993 ರವರೆಗೆ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಆಗಿ ಕಾರ್ಯನಿರ್ವಹಿಸಿದ್ದರು. 1971 ರಿಂದ ವಿವಿಧ ಸಮಯಗಳಲ್ಲಿ ಲೋಕಸಭೆ ಮತ್ತು ರಾಜ್ಯಸಭೆಯ ಸದಸ್ಯರಾಗಿದ್ದರು. ಇವರಿಗೆ 2023ರ ಸಾಲಿನ ಪದ್ಮವಿಭೂಷಣ ಪ್ರಶಸ್ತಿ ನೀಡಲಾಗಿತ್ತು.

ಪ್ರಮುಖ ಸುದ್ದಿ :-   ವೀಡಿಯೊ..| ಆಡಳಿತ ಸಂಪೂರ್ಣ ವಿಫಲ ; ಬಿ.ಆರ್.​ ಪಾಟೀಲ ಬೆನ್ನಲ್ಲೇ ತಮ್ಮ ಸರ್ಕಾರದ ವಿರುದ್ಧವೇ ಸಿಡಿದೆದ್ದ ಮತ್ತೊಬ್ಬ ಕಾಂಗ್ರೆಸ್ ಶಾಸಕ ; ರಾಜೀನಾಮೆ ಮಾತು

ಬೆಂಗಳೂರನ್ನು (Bengaluru) ʼಐಟಿ ಸಿಟಿʼ ʼಸಿಲಿಕಾನ್‌ ಸಿಟಿʼ (silicon city) ಆಗಿಸಲು ಎಸ್‌ಎಂ ಕೃಷ್ಣ ಸಾಕಷ್ಟು ಯೋಗದಾನ ನೀಡಿದ್ದಾರೆ. ಬೆಂಗಳೂರಿನಲ್ಲಿ ಐಟಿ ಹಬ್‌ ವಿಸ್ತೃತವಾಗಿ ಬೆಳೆಯುವುದಕ್ಕೆ ಅಂದು ಮುಖ್ಯಮಂತ್ರಿಯಾಗಿದ್ದ ಕೃಷ್ಣ ಅವರ ದೂರದೃಷ್ಟಿ ಹಾಗೂ ಅವರು ತೆಗೆದುಕೊಂಡ ಕ್ರಮಗಳು ಕಾರಣವಾಗಿವೆ.
1999ರ ಹೊತ್ತಿಗಾಗಲೇ ಬೆಂಗಳೂರಿಗೆ ಐಟಿ ಕಂಪನಿಗಳು ಕಾಲಿಡಲಾರಂಭಿಸಿದ್ದವು. 1999ರಿಂದ 2004ರ ಕೃಷ್ಣ ಆಡಳಿತದ ಅವಧಿ, ಇಲ್ಲಿ ಪ್ರಮುಖ ಐಟಿ ಕಂಪನಿಗಳ ಆಗಮನದ ಕಾಲವಾಗಿತ್ತು. ಈ ಕಂಪನಿಗಳು ಬೆಂಗಳೂರಿನಲ್ಲಿ ತಮ್ಮ ಶಾಖೆ ತೆರೆಯುವಂತೆ ಮಾಡಲು ಇವುಗಳಿಗೆ ರಿಯಾಯತಿ ದರದಲ್ಲಿ ಜಮೀನು, ನೀರು ಹಾಗೂ ವಿದ್ಯುತ್‌ ಖಾತ್ರಿಪಡಿಸಿದರು. ಮೂಲಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿದರು. ಕಂಪನಿಗಳ ಸ್ಥಾಪನೆಗೆ ಅಗತ್ಯವಾದ ಸರ್ಕಾರಿ ಕಡತ ಫೈಲಿಂಗ್‌ ವ್ಯವಸ್ಥೆಯನ್ನು ಸರಳಗೊಳಿಸಿದರು.

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement