ಮುರುಡೇಶ್ವರ : ಸಮುದ್ರಕ್ಕೆ ಇಳಿದಿದ್ದ ನಾಲ್ವರು ವಿದ್ಯಾರ್ಥಿಗಳು ನಾಪತ್ತೆ

ಕಾರವಾರ : ಸಮುದ್ರದಲ್ಲಿ ಈಜಲು ಇಳಿದಿದ್ದ ಓರ್ವ ವಿದ್ಯಾರ್ಥಿನಿ ಮೃತಪಟ್ಟು ಮೂವರು ಪ್ರವಾಸಿ ವಿದ್ಯಾರ್ಥಿಗಳು ನಾಪತ್ತೆಯಾಗಿದ್ದುಘಟನೆ ಮಂಗಳವಾರ ಮುರುಡೇಶ್ವರ ಕಡಲ ತೀರದಲ್ಲಿ ಮಂಗಳವಾರ ನಡೆದಿದೆ ಎಂದು ವರದಿಯಾಗಿದೆ.
ಮಂಗಳವಾರ (ಡಿಸೆಂಬರ್ 10) ಸಂಜೆ ಮುರುಡೇಶ್ವರ ಕಡಲ ತೀರದಲ್ಲಿ ಸಮುದ್ರ ದಂಡೆಯ ಸಮೀಪದ ನೀರಿನಲ್ಲಿ ಆಟವಾಡುತ್ತಿದ್ದ 54 ವಿದ್ಯಾರ್ಥಿಗಳ ಪೈಕಿ ನಾಲ್ವರು ಸಮುದ್ರದಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ. ಅವರಲ್ಲಿ ಓರ್ವ ವಿದ್ಯಾರ್ಥಿನಿ ಶವ ಪತ್ತೆಯಾಗಿದ್ದು, ಅವಳನ್ನು ಕೋಲಾರ ಮೂಲದ ಶ್ರಾವಂತಿ (15) ಎಂದು ಗುರುತಿಸಲಾಗಿದೆ.

ಉಳಿದ ಮೂವರು ವಿದ್ಯಾರ್ಥಿಗಳು ನಾಪತ್ತೆಯಾಗಿದ್ದು ಅವರಿಗಾಗಿ ಶೋಧ ಕಾರ್ಯ ನಡೆದಿದೆ. ನೀರಿನಲ್ಲಿ ಮುಳುಗುತ್ತಿದ್ದ ಮೂವರು ವಿದ್ಯಾರ್ಥಿನಿಯರಾದ ಯಶೋಧ, ವೀಕ್ಷಣಾ, ಲಿಪಿಕಾ ಎನ್ನುವರನ್ನು ರಕ್ಷಣೆ ಮಾಡಲಾಗಿದ್ದು, ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕೋಲಾರದ ಮುಳಬಾಗಿಲು ಮೂಲದ 54 ವಿದ್ಯಾರ್ಥಿಗಳು ಮುರುಡೇಶ್ವರ ಪ್ರವಾಸಕ್ಕೆ ಆಗಮಿಸಿದ್ದರು. ಅವರು ಸಮುದ್ರದಲ್ಲಿ ಆಡುತ್ತಿದ್ದ ವೇಳೆ ವಿದ್ಯಾರ್ಥಿಗಳು ಸಮುದ್ರದ ಅಲೆಗೆ ಕೊಚ್ಚಿಕೊಂಡು ಹೋಗಿದ್ದಾರೆ ಎಂದು ಹೇಳಲಾಗಿದೆ. ಮಂಗಳವಾರ ಸಂಜೆ ವೇಳೆ ಈಜುವಾಗ ಘಟನೆ ನಡೆದಿದೆ. ಮುರುಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ನಾಪತ್ತೆಯಾದವರ ಶೋಧ ಕಾರ್ಯಚರಣೆ ಕೈಗೊಳ್ಳಲಾಗಿದೆ.

ಪ್ರಮುಖ ಸುದ್ದಿ :-   ಕಡೂರು| ದುಷ್ಕರ್ಮಿಗಳಿಂದ ಹಸುವಿನ ಕೆಚ್ಚಲು ಕತ್ತರಿಸಿ ಕ್ರೌರ್ಯ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement