ಮುರುಡೇಶ್ವರ ; ಸಮುದ್ರ ಪಾಲಾಗಿದ್ದ ಮೂವರು ವಿದ್ಯಾರ್ಥಿನಿಯರ ಮೃತದೇಹ ಪತ್ತೆ

ಕಾರವಾರ:ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರದಲ್ಲಿ ಸಮುದ್ರ ಪಾಲಾಗಿದ್ದ ಮೂವರು ವಿದ್ಯಾರ್ಥಿನಿಯರ ಮೃತದೇಹ ಪತ್ತೆಯಾಗಿವೆ. ಕರಾವಳಿ ಕಾವಲುಪಡೆ ತಂಡ ಮೃತದೇಹಗಳನ್ನು ಹುಡುಕಿ ತಂದಿವೆ.
ಮೃತ ವಿದ್ಯಾರ್ಥಿನಿಯರನ್ನು ದೀಕ್ಷಾ (15), ಲಾವಣ್ಯ (15) ಹಾಗೂ ವಂದನಾ (15) ಎಂದು ಗುರುತಿಸಲಾಗಿದೆ. ಮುರುಡೇಶ್ವರದ ನವೀನ ಬೀಚ್ ರೆಸಾರ್ಟ್ ಬಳಿಯ ಸಮುದ್ರದಲ್ಲಿ ಎರಡು ಮೃತದೇಹ ಹಾಗೂ ಸಮುದ್ರದ ಅಳಿವೆಯಲ್ಲಿ ಒಂದು ಮೃತದೇಹ ಪತ್ತೆಯಾಗಿದೆ ಎಂದು ಹೇಳಲಾಗಿದೆ. ಮೃತದೇಹವನ್ನು ಬೋಟ್ ಮೂಲಕ ದಡಕ್ಕೆ ತರಲಾಯಿತು.
ಕೋಲಾರ ಮುಳಬಾಗಿಲಿನ ಕೊತ್ತೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು ಪ್ರವಾಸಕ್ಕೆ ಬಂದಿದ್ದರು. ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಸೇರಿ ಒಟ್ಟು 54 ಮಂದಿ ಪ್ರವಾಸಕ್ಕೆ ಬಂದಿದ್ದರು.
ಈ ವೇಳೆ ಮಂಗಳವಾರ ಮುರುಡೇಶ್ವರಕ್ಕೆ ಬಂದು ಸಮುದ್ರದಲ್ಲಿ ಇಳಿದಿದ್ದಾಗ ಏಳು ವಿದ್ಯಾರ್ಥಿನಿಯರು ನೀರು ಪಾಲಾಗಿದ್ದರು. ಆ ಪೈಕಿ ಮೂವರನ್ನು ಲೈಫ್ ಗಾರ್ಡ್ಸ್ ಸಿಬ್ಬಂದಿ ರಕ್ಷಣೆ ಮಾಡಿದ್ದರು. ಆದರೆ ಸಮುದ್ರದ ಅಲೆಗೆ ಕೊಚ್ಚಿ ಹೋಗಿದ್ದ ಶ್ರಾವಂತಿ ಎಂಬ ವಿದ್ಯಾರ್ಥಿನಿಯ ಮೃತದೇಹ ಮಂಗಳವಾರ ಸಂಜೆಯೇ ಪತ್ತೆಯಾಗಿತ್ತು. ಉಳಿದ ಮೂವರು ವಿದ್ಯಾರ್ಥಿಗಳಿಗಾಗಿ ಇಂದು ಬುಧವಾರ ಹುಡುಕಾಟ ನಡೆದಿತ್ತು. ಶೋಧ ಕಾರ್ಯಾಚರಣೆಯ ನಂತರ ಕರಾವಳಿ ಕಾವಲುಪಡೆ ತಂಡ ಮೃತ ದೇಹಗಳನ್ನು ಪತ್ತೆ ಮಾಡಿದೆ.

ಪ್ರಮುಖ ಸುದ್ದಿ :-   ಕಡೂರು| ದುಷ್ಕರ್ಮಿಗಳಿಂದ ಹಸುವಿನ ಕೆಚ್ಚಲು ಕತ್ತರಿಸಿ ಕ್ರೌರ್ಯ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement