ರಾಹುಲ್‌ ಗಾಂಧಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ಆರೋಪ : ಶಾಸಕ ಯತ್ನಾಳ ವಿರುದ್ದದ ಎಫ್‌ ಐಆರ್‌ ರದ್ದುಪಡಿಸಿದ ಹೈಕೋರ್ಟ್‌

ಬೆಂಗಳೂರು : ಲೋಕಸಭೆ ವಿಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಅವಹೇಳನಾಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಬಿಜೆಪಿ ಮುಖಂಡ ಬಸನಗೌಡ ಪಾಟೀಲ ಯತ್ನಾಳ ವಿರುದ್ಧ ದಾಖಲಾಗಿರುವ ಎಫ್‌ಐಆರ್ ಅನ್ನು ಕರ್ನಾಟಕ ಹೈಕೋರ್ಟ್ ಗುರುವಾರ ರದ್ದುಪಡಿಸಿದೆ.
ವಿಜಯಪುರ ಶಾಸಕ ಯತ್ನಾಳ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಪುರಸ್ಕರಿಸಿತು. ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರಾದ ವೆಂಕಟೇಶ ದಳವಾಯಿ ಅವರು “ರಾಹುಲ್‌ಗಾಂಧಿ ವಿದೇಶದಲ್ಲಿ ಕೆಲವು ಹೇಳಿಕೆಗಳನ್ನು ನೀಡಿದ್ದರು. ಅದಕ್ಕೆ ಪ್ರತಿಕ್ರಿಯೆಯಾಗಿ ಯತ್ನಾಳ ಹೇಳಿಕೆ ನೀಡಿದ್ದಾರೆ. ಆದರೆ, ಪ್ರಕರಣ ಸಂಬಂಧ ದಾಖಲಾಗಿದ್ದ ಎಫ್‌ಐಆರ್‌ನಲ್ಲಿ ಆರೋಪದ ಸಂಬಂಧಿತವಾದ ಯಾವುದೇ ಅಂಶಗಳು ಇಲ್ಲ. ಯತ್ನಾಳ ಹೇಳಿಕೆಗೆ ಸಂಬಂಧಿಸಿದಂತೆ ಅಸಮಾಧಾನವಾಗಿದ್ದಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಬಹುದು ಎಂದು ವಾದಿಸಿದ್ದರು

ದೂರುದಾರರಾದ ಕಾಂಗ್ರೆಸ್‌ ಮುಖಂಡ ಮನೋಹರ ಪರ ವಕೀಲರಾದ ಸಂಕೇತ ಏಣಗಿ ಅವರು “ಆರೋಪಕ್ಕೆ ಸಂಬಂಧಿಸಿದಂತೆ ಎಲ್ಲ ಅಂಶಗಳನ್ನು ಎಫ್‌ಐಆರ್‌ನಲ್ಲಿ ವಿವರಿಸಿಲ್ಲ. ಆದರೆ, ಅರ್ಜಿದಾರರ ಹೇಳಿಕೆಗಳು ಮಹಿಳೆಯ ಘನತೆಗೆ ಧಕ್ಕೆ ಉಂಟು ಮಾಡುವಂಥವಾಗಿವೆ. ಸೋನಿಯಾ ಗಾಂಧಿ ಅವರ ಕುರಿತು ಸಹ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಯತ್ನಾಳ ಸಾಮಾನ್ಯ ವ್ಯಕ್ತಿಯಲ್ಲ. ಸುಶಿಕ್ಷತರಾಗಿದ್ದು, ಸಂಸದರು, ಶಾಸಕರು ಕೇಂದ್ರ ಸಚಿವರೂ ಆಗಿದ್ದರು. ಈ ರೀತಿಯ ಹೇಳಿಕೆ ನೀಡಿರುವುದರಿದ ತನಿಖೆ ನಡೆಯಬೇಕು” ಎಂದು ವಾದಿಸಿದ್ದರು.
“ಯತ್ನಾಳ ಮಹಿಳೆಯ ನಡತೆ ಬಗ್ಗೆ ಏನನ್ನಾದರೂ ಹೇಳಿಲ್ಲ. ಇದರಲ್ಲಿ ಧಾರ್ಮಿಕ ಭಾವನೆಗಳ್ನು ಪ್ರಚೋದಿಸುವ ಪ್ರಶ್ನೆ ಉದ್ಭವಿಸುವುದಿಲ್ಲ. ರಾಹುಲ್‌ ಗಾಂಧಿ ಒಬ್ಬ ರಾಜಕಾರಣಿಯಾಗಿ ದೇಶದ ಹೊರಭಾಗದಲ್ಲಿ ಭಾರತದ ವಿರುದ್ಧ ಅಸಂಬಂಧ ಹೇಳಿಕೆ ನೀಡಿದ್ದಕ್ಕೆ ಯತ್ನಾಳ ಅದಕ್ಕೆ ಪ್ರತಿಕ್ರಿಯಿಸಿದ್ದಾರೆ ಅಷ್ಟೆ” ಎಂದು ದಳವಾಯಿ ವಾದಿಸಿದ್ದರು.

ಪ್ರಮುಖ ಸುದ್ದಿ :-   ಗೃಹಲಕ್ಷ್ಮಿ ಯೋಜನೆ’ಗೆ ಸೌಲಭ್ಯ ಪಡೆಯಲು ಮತ್ತೊಮ್ಮೆ ಅರ್ಜಿ ಸಲ್ಲಿಸಬೇಕು

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement