ಖಾಸಗಿ ಆಸ್ಪತ್ರೆಯಲ್ಲಿ ಬೆಂಕಿ ಅವಘಡ ; ಮಗು ಸೇರಿ 7 ಮಂದಿ ಸಾವು

ಚೆನ್ನೈ : ತಮಿಳುನಾಡಿನ ದಿಂಡಿಗಲ್‌ನಲ್ಲಿರುವ ಪ್ರಮುಖ ಮೂಳೆಚಿಕಿತ್ಸೆಯ ಆಸ್ಪತ್ರೆಯಲ್ಲಿ ಬೆಂಕಿ ಕಾಣಿಸಿಕೊಂಡು ಕನಿಷ್ಠ ಏಳು ರೋಗಿಗಳು ಸಾವಿಗೀಡಾಗಿದ್ದಾರೆ ಮತ್ತು 20 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಮೃತರಲ್ಲಿ ಒಂದು ಮಗು ಮತ್ತು ಇಬ್ಬರು ಮಹಿಳೆಯರು ಸೇರಿದ್ದಾರೆ ಎನ್ನಲಾಗಿದೆ.
ಮೊದಲು ನೆಲ ಅಂತಸ್ತಿನ ರಿಸೆಪ್ಶನ್‌ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಇದಕ್ಕೆ ಶಾರ್ಟ್ ಸರ್ಕ್ಯೂಟ್ ಕಾರಣ ಎಂದು ಶಂಕಿಸಲಾಗಿದೆ. ಜ್ವಾಲೆಯು ಇತರ ಮಹಡಿಗಳಿಗೆ ವೇಗವಾಗಿ ಹರಡಿತು, ನಂತರ ಕಟ್ಟಡವನ್ನು ಆವರಿಸಿತು ಎಂದು ಹೇಳಲಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಪ್ರಕಾರ, ಆಸ್ಪತ್ರೆಯಲ್ಲಿ ತುಂಬಿದ ದಟ್ಟವಾದ ಹೊಗೆಯಿಂದ ಉಸಿರುಗಟ್ಟುವಿಕೆಗೆ ಹೆಚ್ಚಿನವರು ಸಾವಿಗೀಡಾಗಿದ್ದಾರೆ.

ರಿಸೆಪ್ಶನ್‌ ಪ್ರದೇಶದಲ್ಲಿ ಶಾರ್ಟ್ ಸರ್ಕ್ಯೂಟ್ ಬೆಂಕಿಗೆ ಕಾರಣ ಎಂದು ಪ್ರಾಥಮಿಕ ವರದಿಗಳು ಸೂಚಿಸುತ್ತವೆ. ರೋಗಿಗಳನ್ನು ಸುರಕ್ಷಿತ ಸೌಲಭ್ಯಗಳಿಗೆ ವರ್ಗಾಯಿಸಲು ಸರಿಸುಮಾರು 50 ಆಂಬ್ಯುಲೆನ್ಸ್‌ಗಳು ಆಗಮಿಸಿವೆ. ಕನಿಷ್ಠ 30 ರೋಗಿಗಳು ಚಿಕಿತ್ಸೆಗಾಗಿ ದಿಂಡುಗಲ್ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಅಗ್ನಿಶಾಮಕ ದಳದವರು ಸಿಬ್ಬಂದಿ ಬೆಂಕಿಯನ್ನು ಹತೋಟಿಗೆ ತರಲು ಒಂದು ಗಂಟೆಗೂ ಹೆಚ್ಚು ಕಾಲ ಹರಸಾಹಸಪಟ್ಟರು, ಒಳಗೆ ಸಿಲುಕಿರುವವರನ್ನು ಪತ್ತೆಹಚ್ಚಲು ಮತ್ತು ಸಹಾಯ ಮಾಡಲು ರಕ್ಷಣಾ ಕಾರ್ಯಾಚರಣೆ ಇನ್ನೂ ಮುಂದುವರೆದಿದೆ.

ಪ್ರಮುಖ ಸುದ್ದಿ :-   ವೀಡಿಯೊ...| ವಂದೇ ಭಾರತ ರೈಲಿನಲ್ಲಿ ಬಿಜೆಪಿ ಶಾಸಕನ ಜೊತೆ ತನ್ನ ಸೀಟು ಬದಲಾಯಿಸಿಕೊಳ್ಳಲು ಒಪ್ಪದ ಪ್ರಯಾಣಿಕನ ಮೇಲೆ ಹಲ್ಲೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement