ಜೈಲಿನಿಂದ ಹೊರಬಂದ ನಟ ಅಲ್ಲು ಅರ್ಜುನ

ಹೈದರಾಬಾದ್‌: ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಬೆಳಿಗ್ಗೆ ಬಂಧನಕ್ಕೊಳಗಾಗಿದ್ದ ಟಾಲಿವುಡ್‌ ನಟ ಅಲ್ಲು ಅರ್ಜುನ್‌ (Allu Arjun) ಅವರಿಗೆ ತೆಲಂಗಾಣ ಹೈಕೋರ್ಟ್‌ ಮಧ್ಯಂತರ ಜಾಮೀನಿ ನೀಡಿದ ನಂತರ ಶನಿವಾರ ಅವರು ಜೈಲಿನಿಂದ ಹೊರ ಬಂದಿದ್ದಾರೆ. ಒಂದು ರಾತ್ರಿ ಜೈಲಿನಲ್ಲಿ ಕಳೆದ ನಂತರ ಶನಿವಾರ ಬೆಳಿಗ್ಗೆ ಅಲ್ಲು ಅರ್ಜುನ್‌ ಬಿಡುಗಡೆಯಾಗಿದ್ದಾರೆ. ಈ ವೇಳೆ ತಂದೆ ಅಲ್ಲು ಅರವಿಂದ ಮತ್ತು ಮಾವ ಕಂಚಾರ್ಲ ಚಂದ್ರಶೇಖರ ರೆಡ್ಡಿ ಇದ್ದರು. ಬಿಡುಗಡೆದ ನಂತರ ಅವರು ನೇರವಾಗಿ ತಮ್ಮ ನಿವಾಸಕ್ಕೆ ತೆರಳಿದ್ದು, ಅಲ್ಲಿ ಅವರ ತಾಯಿ, ಪತ್ನಿ ಮತ್ತು ಮಕ್ಕಳು ಸೇರಿದಂತೆ ಕುಟುಂಬಸ್ಥರು ಅವರನ್ನು ಬರಮಾಡಿಕೊಂಡಿದ್ದಾರೆ.
ಬಿಡುಗಡೆಯಾದ ನಂತರ ಮಾತನಾಡಿದ ಅಲ್ಲು ಅರ್ಜುನ್‌ ಅವರು, ನಾನು ಕಾನೂನು ಪಾಲನೆ ಮಾಡುವ ನಾಗರಿಕ. ಕಾನೂನು ಗೌರವಿಸುತ್ತೇನೆ. ತನಿಖೆಗೆ ಸಹರಿಸುತ್ತೇನೆ ಎಂದು ಹೇಳಿದ್ದಾರೆ. 20 ವರ್ಷಗಳಿಂದ ನಾನು ನನ್ನ ನನ್ನ ಸಿನಿಮಾಗಳನ್ನು ನೋಡಲು ಚಿತ್ರಮಂದಿರಕ್ಕೆ ಹೋಗುತ್ತೇನೆ. ಆದರೆ ಇಂತಹ ದುರ್ಘಟನೆ ಎಂದೂ ಸಂಭವಿಸಿರಲಿಲ್ಲ. ಈ ದುರ್ಘಟನೆ ಬಗ್ಗೆ ನಾನು ಆ ಕುಟುಂಬಸ್ಥರಲ್ಲಿ ಕ್ಷಮೆಯಾಚಿಸುತ್ತೇನೆ ಎಂದು ಹೇಳಿದ್ದಾರೆ.

ಡಿಸೆಂಬರ್‌ 4ರಂದು ಹೈದರಾಬಾದ್‌ನಲ್ಲಿ ನಡೆದ ‘ಪುಷ್ಪ 2’ ಚಿತ್ರದ ಪ್ರೀಮಿಯರ್‌ ಶೋ ವೇಳೆ ಕಾಲ್ತುಳಿತ ಸಂಭವಿಸಿ ಮಹಿಳೆಯೊಬ್ಬರು ಮೃತಪಟ್ಟ ಪ್ರಕರಣದಲ್ಲಿ ಅಲ್ಲು ಅರ್ಜುನ್‌ ಅವರನ್ನು ಚಿಕ್ಕಡಪಲ್ಲಿ ಪೊಲೀಸರು ಶುಕ್ರವಾರ ಬೆಳಿಗ್ಗೆ ವಶಕ್ಕೆ ಪಡೆದಿದ್ದರು. ಮಧ್ಯಾಹ್ನ ನಾಂಪಲ್ಲಿ ಕೋರ್ಟ್‌ ಅಲ್ಲು ಅರ್ಜನ್‌ಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿತ್ತು. ನಂತರ ತೆಲಂಗಾಣ ಹೈಕೋರ್ಟ್‌ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು.
ಮೃತ ರೇವತಿ ಅವರ ಪತಿ ಭಾಸ್ಕರ ನೀಡಿದ ದೂರಿನ ಮೇರೆಗೆ ಪೊಲೀಸರು ಅಲ್ಲು ಅರ್ಜುನ್‌ ಅವರನ್ನು ವಶಕ್ಕೆ ಪಡೆದಿದ್ದರು. ಈಗ ಭಾಸ್ಕರ್‌ ದೂರು ಹಿಂಪಡೆಯುವುದಾಗಿ ತಿಳಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಭಾಸ್ಕರ ಅವರುಈ ಪ್ರಕರಣದಲ್ಲಿ ಅಲ್ಲು ಅರ್ಜುನ್‌ ನಿರಪರಾಧಿ. ಅಲ್ಲು ಅರ್ಜುನ್‌ ಅವರನ್ನು ಬಂಧಿಸುತ್ತಾರೆ ಎಂಬುದು ಗೊತ್ತಿರಲಿಲ್ಲ. ಕಾಲ್ತುಳಿತದಿಂದ ಪತ್ನಿ ಮರಣ ಹೊಂದಿದ ಘಟನೆಗೂ ಅವರಿಗೂ ಯಾವುದೇ ಸಂಬಂಧವಿಲ್ಲ. ದೂರನ್ನು ಹಿಂಪಡೆಯಲು ನಾನು ಸಿದ್ಧ ಎಂದು ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಚಿನ್ನ ಕಳ್ಳಸಾಗಣೆ ಪ್ರಕರಣ : ಕಸ್ಟಡಿಯಲ್ಲಿ ನನಗೆ ಚಿತ್ರಹಿಂಸೆ, 10-15 ಬಾರಿ ಕಪಾಳಮೋಕ್ಷ ; ರನ್ಯಾ ರಾವ್ ಆರೋಪ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement