ಬಿಜೆಪಿಯ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ಆಸ್ಪತ್ರೆಗೆ ದಾಖಲು

ನವದೆಹಲಿ: ಬಿಜೆಪಿ ಹಿರಿಯ ನಾಯಕ ಎಲ್‌.ಕೆ. ಅಡ್ವಾಣಿ ಅವರನ್ನು ನವದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಯ ಅಧಿಕಾರಿಗಳ ಪ್ರಕಾರ, ಪ್ರಸ್ತುತ ಅವರ ಸ್ಥಿತಿ ಸ್ಥಿರವಾಗಿದೆ, ಆದರೆ ಅವರು ನಿಗಾದಲ್ಲಿದ್ದಾರೆ.
ವರದಿ ಪ್ರಕಾರ, 96 ವರ್ಷ ವಯಸ್ಸಿನ ಅಡ್ವಾಣಿ ಅವರನ್ನು ಆಸ್ಪತ್ರೆಯ ನರವಿಜ್ಞಾನ ವಿಭಾಗದಲ್ಲಿ ಹಿರಿಯ ಮಟ್ಟದ ಸಲಹೆಗಾರರಾಗಿರುವ ಡಾ ವಿನೀತ ಸೂರಿ ಅವರ ಆರೈಕೆ ಮತ್ತು ನಿಗಾದಲ್ಲಿ ಇರಿಸಲಾಗಿದೆ. ಆರೋಗ್ಯದ ದೃಷ್ಟಿಯಿಂದ ಅವರನ್ನು ಎರಡು ದಿನಗಳ ಹಿಂದೆ ಅಪೋಲೋಗೆ ಕರೆತರಲಾಗಿತ್ತು. ಅವರ ಅನಾರೋಗ್ಯ ಮತ್ತು ಆಸ್ಪತ್ರೆಗೆ ದಾಖಲಾಗಿರುವ ಕಾರಣ ಇನ್ನೂ ಸ್ಪಷ್ಟವಾಗಿಲ್ಲ.

ಬಿಜೆಪಿಯ ಮುಖ್ಯ ವಕ್ತಾರ ಕೆ ಕೃಷ್ಣ ಸಾಗರ ರಾವ್ ಅವರು ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ ಅಡ್ವಾಣಿ ಅವರು ಚೇತರಿಸಿಕೊಳ್ಳಲಿ ಎಂದು ಶುಭ ಹಾರೈಸಿದ್ದಾರೆ.
ನವೆಂಬರ್ 8, 1927 ರಂದು ಕರಾಚಿಯಲ್ಲಿ ಜನಿಸಿದ ಅಡ್ವಾಣಿ, 14 ನೇ ವಯಸ್ಸಿನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸದಸ್ಯರಾದರು. ಅವರು 1951 ರಲ್ಲಿ ಭಾರತೀಯ ಜನಸಂಘಕ್ಕೆ ಸೇರಿದರು.
ಮೊರಾರ್ಜಿ ದೇಸಾಯಿ ನೇತೃತ್ವದ ಜನತಾ ಸರ್ಕಾರದ ಆಳ್ವಿಕೆಯಲ್ಲಿ, ಅವರು ವಾರ್ತಾ ಮತ್ತು ಪ್ರಸಾರ ಖಾತೆ ಸಚಿವರಾಗಿ ನೇಮಕಗೊಂಡರು. 1990 ರ ದಶಕದಲ್ಲಿ ಬಿಜೆಪಿಯನ್ನು ಪ್ರಮುಖ ರಾಜಕೀಯ ಶಕ್ತಿಯನ್ನಾಗಿ ಮಾಡಿದ ಖ್ಯಾತಿ ಅಡ್ವಾಣಿ ಅವರದ್ದು. ಅವರು ಮೂರು ಬಾರಿ ಪಕ್ಷದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ ಮತ್ತು ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಸರ್ಕಾರದಲ್ಲಿ ಗೃಹ ಮಂತ್ರಿ ಮತ್ತು ಉಪಪ್ರಧಾನಿಯಾಗಿಯೂ ಸೇವೆ ಸಲ್ಲಿಸಿದ್ದಾರೆ.

ಪ್ರಮುಖ ಸುದ್ದಿ :-   ಆಪರೇಷನ್ ಸಿಂಧೂರ | ಅಮೃತಸರದ ಗೋಲ್ಡನ್​ ಟೆಂಪಲ್ ಮೇಲೆ ದಾಳಿಗೆ ಯತ್ನಿಸಿದ್ದ ಪಾಕಿಸ್ತಾನ; ದಾಳಿ ವಿಫಲಗೊಳಿಸಿದ ಭಾರತೀಯ ಸೇನೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement