ಟೆಕ್ಕಿ ಅತುಲ್​ ಸುಭಾಷ​ ಆತ್ಮಹತ್ಯೆ ಪ್ರಕರಣ : ಪತ್ನಿ ಸೇರಿ ಮೂವರ ಬಂಧನ

ಬೆಂಗಳೂರು : ಟೆಕ್ಕಿ ಅತುಲ್ ಸುಭಾಷ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಪತ್ನಿ, ಆಕೆಯ ತಾಯಿ ಮತ್ತು ಸಹೋದರನನ್ನು ಬೆಂಗಳೂರು ಪೊಲೀಸರು ಭಾನುವಾರ ಬಂಧಿಸಿದ್ದಾರೆ.
34 ವರ್ಷದ ಸಾಫ್ಟ್‌ವೇರ್ ಇಂಜಿನಿಯರ್ ಅತುಲ್‌ ಸುಭಾಷ ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ 24 ಪುಟಗಳ ಟಿಪ್ಪಣಿ ಬರೆದಿಟ್ಟು, ಮತ್ತು ವೀಡಿಯೊವೊಂದನ್ನು ಮಾಡಿ ತನ್ನ ಸಾವಿಗೆ ತನ್ನ ಪತ್ನಿ ಮತ್ತು ಆಕೆಯ ಕುಟುಂಬಸ್ಥರು ಕಿರುಕುಳ ನೀಡಿದ್ದು ಕಾರಣ ಎಂದು ಆರೋಪಿಸಿದ್ದಾರೆ.
ಅತುಲ್‌ ಅವರ ಪತ್ನಿ ನಿಕಿತಾ ಸಿಂಘಾನಿಯಾ ಅವರನ್ನು ಗುರುಗ್ರಾಮದಲ್ಲಿ ಬಂಧಿಸಲಾಗಿದ್ದು, ಅವರ ತಾಯಿ ನಿಶಾ ಸಿಂಘಾನಿಯಾ ಮತ್ತು ಸಹೋದರ ಅನುರಾಗ ಸಿಂಘಾನಿಯಾ ಅವರನ್ನು ಉತ್ತರ ಪ್ರದೇಶದ ಪ್ರಯಾಗರಾಜದಲ್ಲಿ ಬಂಧಿಸಲಾಗಿದೆ. ಬೆಂಗಳೂರು ನಗರ ಪೊಲೀಸರು ನಿಕಿತಾ ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣ ದಾಖಲಿಸಿದ ನಂತರ ಅವರನ್ನು ಬಂಧಿಸಲಾಗಿದೆ.

ಆರೋಪಿಗಳು ಅಲಹಾಬಾದ್ ಹೈಕೋರ್ಟ್‌ನಲ್ಲಿ ನಿರೀಕ್ಷಣಾ ಜಾಮೀನು ಕೋರಿದ್ದರು. ಶುಕ್ರವಾರ ನೀಡಿದ ಪೊಲೀಸ್ ಸಮನ್ಸ್‌ನ ನಂತರ ನಿಕಿತಾ, ಆಕೆಯ ತಾಯಿ, ಸಹೋದರ ಮತ್ತು ಚಿಕ್ಕಪ್ಪ ಸುಶೀಲ ಸಿಂಘಾನಿಯಾ ಅವರು ಅರ್ಜಿಗಳನ್ನು ಸಲ್ಲಿಸಿದ್ದರು. ಪೊಲೀಸರು ಸಮನ್ಸ್‌ನಲ್ಲಿ ನಿಕಿತಾ ಅವರು ಮೂರು ದಿನಗಳೊಳಗೆ ತಮ್ಮ ಮುಂದೆ ಹಾಜರಾಗುವಂತೆ ಸೂಚಿಸಿದ್ದಾರೆ.
ಅತುಲ್‌ ಸಭಾಷ ಅವರ ಆತ್ಮಹತ್ಯೆಯ ತನಿಖೆಯ ಮಧ್ಯೆ ನಿಶಾ ಸಿಂಘಾನಿಯಾ ಮತ್ತು ಅವರ ಮಗ ಅನುರಾಗ ಗುರುವಾರ ಉತ್ತರ ಪ್ರದೇಶದ ಜಾನ್‌ಪುರದಲ್ಲಿರುವ ತಮ್ಮ ಮನೆಯಿಂದ ಪಲಾಯನ ಮಾಡಿದ್ದರು ಎಂದು ವರದಿಯಾಗಿತ್ತು.
ಬಿಹಾರ ಮೂಲದ ಅತುಲ್ ಸುಭಾಷ ಅವರು ತಮ್ಮ ಆತ್ಮಹತ್ಯೆ ಪತ್ರದಲ್ಲಿ ಬೆಂಗಳೂರಿನ ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು, ವೈವಾಹಿಕ ಕಲಹಗಳು ಮತ್ತು ಅವರ ಪತ್ನಿ ಮತ್ತು ಅವರ ಕುಟುಂಬದವರು ದಾಖಲಿಸಿದ ಹಲವಾರು ಪ್ರಕರಣಗಳಿಂದಾಗಿ ಭಾವನಾತ್ಮಕವಾಗಿ ಹಲವಾರು ವರ್ಷಗಳಿಂದ ಬಳಲುತ್ತಿದ್ದೆ ಎಂದು ವಿವರಿಸಿದ್ದಾರೆ.
ಅವರು ತಮ್ಮ ಪತ್ನಿ ತನ್ನ ವಿರುದ್ಧ ಸುಳ್ಳು ಪ್ರಕರಣಗಳನ್ನು ದಾಖಲಿಸಿದ್ದಾಳೆ ಮತ್ತು ತನಗೆ ಮತ್ತು ತಮ್ಮ ನಾಲ್ಕು ವರ್ಷದ ಮಗನಿಗೆ ತಿಂಗಳಿಗೆ 2 ಲಕ್ಷ ರೂ. ನಿರ್ಹಣಾ ವೆಚ್ಚ ನೀಡುವಂತೆ ಕೋರಿದ್ದಳು. 2020 ರ ಆರಂಭದಿಂದಲೂ ಅವರ ಪತ್ನಿ, ಅತ್ತೆ ಮತ್ತು ತಮ್ಮ ಮಾವ ಹಣ ಮತ್ತು ಅದ್ದೂರಿ ಉಡುಗೊರೆಗಳನ್ನು ನೀಡುವಂತೆ ಒತ್ತಡ ಹೇರುತ್ತಿದ್ದರು ಎಂದು ಅವರು ಆರೋಪಿಸಿದ್ದಾರೆ.

ಪ್ರಮುಖ ಸುದ್ದಿ :-   ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಿಲ್ಲಿಸಿದ್ದ ಇಂಡಿಗೋ ವಿಮಾನಕ್ಕೆ ಡಿಕ್ಕಿ ಹೊಡೆದ ಟೆಂಪೋ ಟ್ರಾವೆಲರ್...!

ಉತ್ತರ ಪ್ರದೇಶದ ಕೌಟುಂಬಿಕ ನ್ಯಾಯಾಲಯದ ನ್ಯಾಯಾಧೀಶರ ವಿರುದ್ಧವೂ ಗಂಭೀರ ಆರೋಪ ಮಾಡಿದ ಅವರು, ನ್ಯಾಯಾಲಯದ ವಿಚಾರಣೆಗಾಗಿ ಪದೇ ಪದೇ ಉತ್ತರ ಪ್ರದೇಶಕ್ಕೆ ತೆರಳುವುದರಿಂದ ತೀವ್ರ ಒತ್ತಡಕ್ಕೆ ಒಳಗಾಗಿದ್ದೆ ಎಂದು ಹೇಳಿದ್ದಾರೆ.
ಈ ಘಟನೆಯ ಬಗ್ಗೆ ರಾಷ್ಟ್ರವ್ಯಾಪಿ ಆಕ್ರೋಶದ ನಡುವೆ, ನಿಕಿತಾ ಅವರ 2022 ರ ಪೊಲೀಸ್ ದೂರಿನ ವಿವರಗಳು ಹೊರಬಂದಿವೆ, ಆಕೆಯ ಪತಿಯ ವಿರುದ್ಧ ವರದಕ್ಷಿಣೆಗಾಗಿ ಕಿರುಕುಳ ಮತ್ತು ಹಲ್ಲೆ ನಡೆಸಿದ ಆರೋಪ ಮಾಡಲಾಗಿದೆ. ತನ್ನ ಮದುವೆಯ ನಂತರ ಸುಭಾಷ ವರದಕ್ಷಿಣೆಯಾಗಿ ಇನ್ನೂ 10 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದರು ಎಂದು ದೂರಿನಲ್ಲಿ ನಿಕಿತಾ ಆರೋಪಿಸಿದ್ದಾರೆ.
ನಿಕಿತಾ ಮತ್ತು ಅತುಲ್‌ ಸುಭಾಷ 2019 ರಲ್ಲಿ ವಿವಾಹವಾದರು. ಸುಭಾಷ ಬೆಂಗಳೂರಿನಲ್ಲಿ ನೆಲೆಸಿದ್ದರೆ, ನಿಕಿತಾ ದೆಹಲಿಯಲ್ಲಿ ತಮ್ಮ ಮಗನೊಂದಿಗೆ ವಾಸಿಸುತ್ತಿದ್ದರು, ಅಲ್ಲಿ ಅವರು ಬಹುರಾಷ್ಟ್ರೀಯ ಐಟಿ ಸಂಸ್ಥೆಯಲ್ಲಿ ಕೆಲಸ ಮಾಡಡುತ್ತಿದ್ದರು.

5 / 5. 1

ಪ್ರಮುಖ ಸುದ್ದಿ :-   ಪ್ಲೀಸ್ ಪಾಸ್ ಮಾಡಿ, ನನ್ನ ಲವ್ ನಿಮ್ಮ ಕೈಯಲ್ಲಿದೆ : ಎಸ್‌ಎಸ್‌ಎಲ್‌ಸಿ ಉತ್ತರ ಪತ್ರಿಕೆಯಲ್ಲಿ 500 ರೂ. ಇಟ್ಟು ವಿದ್ಯಾರ್ಥಿಯ ವಿಚಿತ್ರ ಮನವಿ...!

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement