ನವದೆಹಲಿ: ಹೆಸರಾಂತ ತಬಲಾ ವಾದಕ ಜಾಕಿರ್ ಹುಸೇನ್ ಅವರು ಅಮೆರಿಕದ ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ.
ಅವರ ಕುಟುಂಬದ ಪ್ರಕಾರ, ಅವರು ಪ್ರಸ್ತುತ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಿಗೆ ಹೃದಯ ಸಂಬಂಧಿ ತೊಂದರೆಗಳು ಎಉದರಾದ ನಂತರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರನ್ನು ತುರ್ತು ನಿಗಾ ಘಟಕದಲ್ಲಿ ಇರಿಸಲಾಗಿದೆ ಎಂದು ವರದಿಯಾಗಿದೆ.
ಖ್ಯಾತ ಕೊಳಲು ವಾದಕ ಮತ್ತು ಜಾಕಿರ್ ಹುಸೇನ್ ಅವರ ಆಪ್ತ ಸ್ನೇಹಿತ ರಾಕೇಶ್ ಚೌರಾಸಿಯಾ ಅವರು ತಮ್ಮ ಸ್ನೇಹಿತನ ಸ್ಥಿತಿಯ ಬಗ್ಗೆ ಸುದ್ದಿ ಸಂಸ್ಥೆ ಪಿಟಿಐಗೆ ಭಾನುವಾರ ಮಾಹಿತಿ ನೀಡಿದ್ದಾರೆ. ಅವರು ಅಸ್ವಸ್ಥರಾಗಿದ್ದಾರೆ ಮತ್ತು ಇದೀಗ ಐಸಿಯುಗೆ ದಾಖಲಾಗಿದ್ದಾರೆ ಎಂದು ಅವರು ಹೇಳಿದ್ದಾರೆ.
ಹುಸೇನ್ ಅವರ ಹತ್ತಿರದ ಮೂಲಗಳ ಪ್ರಕಾರ, 73 ವರ್ಷ ವಯಸ್ಸಿನ ಜಾಕಿರ್ ಹುಸೇನ್ ರಕ್ತದೊತ್ತಡದ ಸಮಸ್ಯೆಗಳನ್ನು ಹೊಂದಿದ್ದಾರೆ. ‘ಕಳೆದ ವಾರದಿಂದ ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಸ್ಯಾನ್ ಫ್ರಾನ್ಸಿಸ್ಕೋದ ಆಸ್ಪತ್ರೆಗೆ ದಾಖಲಿಸಲಾಗಿತ್ತು’ ಎಂದು ಮೂಲಗಳು ತಿಳಿಸಿವೆ.
ಹುಸೇನ್, ಭಾರತೀಯ ಶಾಸ್ತ್ರೀಯ ಸಂಗೀತದಲ್ಲಿ ತಬಲಾ ವಾದನದ ಮೂಲಕ ವಿಶ್ವಾದ್ಯಂತ ಹೆಸರುವಾಸಿಯಾಗಿದ್ದಾರೆ. ಅವರು ಭಾರತ ಮತ್ತು ವಿದೇಶಗಳಲ್ಲಿ ಅಭಿಮಾನಿಗಳನ್ನು ಹೊಂದಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ