ಕೋಲಾರ : ಮೂರು ಬೈಕ್‌ ಗಳಿಗೆ ಬೊಲೆರೋ ಡಿಕ್ಕಿ ; ನಾಲ್ವರು ಸಾವು

ಕೋಲಾರ: ಬೊಲೆರೋ ವಾಹನ ಮೂರು ಬೈಕ್‌ಗಳಿಗೆ ಡಿಕ್ಕಿಯಾಗಿ ಸ್ಥಳದಲ್ಲೇ ನಾಲ್ವರು ಸಾವಿಗೀಡಾದ ಘಟನೆ (Road Accident) ಜಿಲ್ಲೆಯ ಮುಳಬಾಗಿಲು ತಾಲೂಕಿನ ಎನ್. ವಡ್ಡಹಳ್ಳಿ-ಗುಡಿಪಲ್ಲಿ ಮುಖ್ಯ ರಸ್ತೆಯಲ್ಲಿ ಬುಧವಾರ ನಡೆದಿದೆ ಎಂದು ವರದಿಯಾಗಿದೆ.
ಬೊಲೆರೋ ವಾಹನ ಗುಡಿಪಲ್ಲಿ ಮುಖ್ಯ ರಸ್ತೆಯ ಬಳಿ 3 ದ್ವಿಚಕ್ರ ವಾನಗಳಿಗೆ ಡಿಕ್ಕಿ ಹೊಡೆದ ನಂತರ ಪಲ್ಟಿಯಾಗಿದೆ. ವೆಂಕಟರಾಮಪ್ಪ (45), ವೆಂಕಟರಾಮಪ್ಪ ಅವರ ಪತ್ನಿ ಅಲುವೇಲಮ್ಮ (30) ಸೇರಿ ನಾಲ್ವರು ಮೃತಪಟ್ಟಿದ್ದಾರೆ. ಬುಲೆರೊ ವಾಹನದಲ್ಲಿದ್ದ ಓರ್ವ ವ್ಯಕ್ತಿ ಹಾಗೂ ಬೈಕ್‌ನಲ್ಲಿದ್ದ ಓರ್ವ ಮಹಿಳೆ ಗಾಯಗೊಂಡಿದ್ದಾರೆ ಎಂದು ಹೇಳಲಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೂಲಿ ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದಾಗ ಈ ದುರಂತ ನಡೆದಿದೆ ಎನ್ನಲಾಗಿದೆ. ಬೈಕ್‌ಗಳಿಗೆ ಡಿಕ್ಕಿಯಾದ ಬಳಿಕ ಬೊಲೆರೋ ರಸ್ತೆಬದಿಗೆ ಉರುಳಿದೆ. ನಂಗಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

2 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement