ಉತ್ತರಾಖಂಡದಲ್ಲಿ 2025ರ ಜನವರಿಯಿಂದ ಏಕರೂಪ ನಾಗರಿಕ ಸಂಹಿತೆ ಜಾರಿಗೆ

ಡೆಹ್ರಾಡೂನ್‌ : 2025ರ ಜನವರಿಯಿಂದ ಉತ್ತರಾಖಂಡದಲ್ಲಿ ಏಕರೂಪ ನಾಗರಿಕ ಸಂಹಿತೆ (UCC) ಜಾರಿಯಾಗಲಿದೆ ಎಂದು ಮುಖ್ಯಮಂತ್ರಿ ಪುಷ್ಕರ ಸಿಂಗ್ ಧಾಮಿ ಪ್ರಕಟಿಸಿದ್ದಾರೆ.
ವರದಿಗಳ ಪ್ರಕಾರ, ಎಲ್ಲಾ ಸಿದ್ಧತೆಗಳು ಪೂರ್ಣಗೊಂಡಿವೆ ಮತ್ತು ಸ್ವಾತಂತ್ರ್ಯದ ನಂತರ ಉತ್ತರಾಖಂಡವು ಏಕರೂಪ ನಾಗರಿಕ ಸಂಹಿತೆ(UCC)ಯನ್ನು ಜಾರಿಗೆ ತರುವ ಮೊದಲ ರಾಜ್ಯವಾಗಲಿದೆ.
ಬುಧವಾರ (ಡಿಸೆಂಬರ್ 18) ಸೆಕ್ರೆಟರಿಯೇಟ್‌ನಲ್ಲಿ ನಡೆದ ಉತ್ತರಾಖಂಡ ಹೂಡಿಕೆ ಮತ್ತು ಮೂಲಸೌಕರ್ಯ ಅಭಿವೃದ್ಧಿ ಮಂಡಳಿ (ಯುಐಐಡಿಬಿ) ಸಭೆಯಲ್ಲಿ ಮುಖ್ಯಮಂತ್ರಿ ಧಾಮಿ, ರಾಜ್ಯ ಸರ್ಕಾರವು ಯುಸಿಸಿಯನ್ನು ಜಾರಿಗೆ ತರಲು ಎಲ್ಲಾ ಅಗತ್ಯ ಸಿದ್ಧತೆಗಳನ್ನು ಕೈಗೊಂಡಿದೆ ಎಂದು ಹೇಳಿದರು.

ಫೆಬ್ರುವರಿ 7, 2024 ರಂದು ರಾಜ್ಯ ಶಾಸಕಾಂಗ ಸಭೆಯು ಏಕರೂಪ ನಾಗರಿಕ ಸಂಹಿತೆ (UCC) ಮಸೂದೆಯನ್ನು ಅಂಗೀಕರಿಸಿತು.ನಿವೃತ್ತ ನ್ಯಾಯಮೂರ್ತಿ ರಂಜನಾ ಪ್ರಕಾಶ ದೇಸಾಯಿ ಅಧ್ಯಕ್ಷತೆಯಲ್ಲಿ ಐವರು ಸದಸ್ಯರ ತಜ್ಞರ ಸಮಿತಿ ರಚಿಸಲಾಗಿತ್ತು. ಸಮಿತಿಯ ಶಿಫಾರಸುಗಳ ಆಧಾರದ ಮೇಲೆ, ಏಕರೂಪ ನಾಗರಿಕ ಸಂಹಿತೆ ಮಸೂದೆ 2024 ಅನ್ನು ರಾಜ್ಯ ವಿಧಾನಸಭೆಯು ಫೆಬ್ರವರಿ 7, 2024 ರಂದು ಅಂಗೀಕರಿಸಿತು.
ನಂತರ, ಮಸೂದೆಯು ರಾಷ್ಟ್ರಪತಿಯವರ ಒಪ್ಪಿಗೆಯನ್ನು ಪಡೆಯಿತು ಮತ್ತು ಅದರ ಅಧಿಸೂಚನೆಯನ್ನು ಮಾರ್ಚ್ 12, 2024 ರಂದು ಹೊರಡಿಸಲಾಯಿತು. ಇದಕ್ಕೆ ಅನುಗುಣವಾಗಿ, ಏಕರೂಪ ನಾಗರಿಕ ಸಂಹಿತೆ, ಉತ್ತರಾಖಂಡ 2024 ಕಾಯಿದೆಯ ಅಡಿಯಲ್ಲಿ ನಿಯಮಗಳನ್ನು ಸಹ ಅಂತಿಮಗೊಳಿಸಲಾಗಿದೆ. ಇದು ಜನವರಿ 2025 ರಲ್ಲಿ ಅನುಷ್ಠಾನಗೊಳ್ಳಲಿದೆ.

ಏಕರೂಪ ನಾಗರಿಕ ಸಂಹಿತೆ (UCC) ನಿಬಂಧನೆಗಳನ್ನು ಕಾರ್ಯಗತಗೊಳಿಸಲು ನಿಯೋಜಿಸಲಾದ ಸಿಬ್ಬಂದಿಗೆ ಸರಿಯಾದ ತರಬೇತಿಯನ್ನು ನೀಡಲು ಮತ್ತು ಜಾರಿಗೆ ಬೇಕಾದ ಎಲ್ಲಾ ವ್ಯವಸ್ಥೆ ಮಾಡಲು ಮುಖ್ಯಮಂತ್ರಿ ಪುಷ್ಕರ್‌ ಸಿಂಗ್‌ ಧಾಮಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಸಾರ್ವಜನಿಕ ಅನುಕೂಲಕ್ಕಾಗಿ ಆನ್‌ಲೈನ್ ಸೇವೆಗಳನ್ನು ಹೆಚ್ಚಿಸಲು ಅವರು ಒತ್ತು ನೀಡಿದರು.
ಅಲ್ಲದೆ, ನೋಂದಣಿ ಮತ್ತು ಮೇಲ್ಮನವಿಗಳಂತಹ ಸರ್ವಿಸ್‌ಗಳಿಗೆ ಆನ್‌ಲೈನ್ ಪ್ರವೇಶ ಸಕ್ರಿಯಗೊಳಿಸಲು ನಿಗದಿಯಾದ ಪೋರ್ಟಲ್ ಮತ್ತು ಮೊಬೈಲ್ ಅಪ್ಲಿಕೇಶನ್ ಅನ್ನು ಅಭಿವೃದ್ಧಿಪಡಿಸಲಾಗಿದೆ. 2025ರ ಜನವರಿಯಲ್ಲಿ ರಾಜ್ಯ ಏಕರೂಪ ನಾಗರಿಕ ಸಂಹಿತೆ ಜಾರಿಗೆ ಬರಲಿದೆ ಎಂದು ಮುಖ್ಯಮಂತ್ರಿ ಧಾಮಿ ದೃಢಪಡಿಸಿದರು.

ಪ್ರಮುಖ ಸುದ್ದಿ :-   ವೀಡಿಯೊಗಳು...| ಪಾಕಿಸ್ತಾನದ 4 ವಾಯುನೆಲೆಗಳ ಭಾರತದ ದಾಳಿ, ಡ್ರೋನ್ ಉಡಾವಣಾ ಪ್ಯಾಡ್‌ ನಾಶ, ಪಾಕ್‌ 2 ಫೈಟರ್ ಜೆಟ್ ಹೊಡೆದುರುಳಿಸಿದ ಸೇನೆ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement