ಚೆನ್ನೈ: ಚೆನ್ನೈ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನೊಬ್ಬನಿಗೆ 1.7 ಕೆಜಿ 24 ಕ್ಯಾರೆಟ್ ಚಿನ್ನವನ್ನು ಕಳ್ಳಸಾಗಣೆ ಮಾಡಲು ಸಹಾಯ ಮಾಡಿದ್ದಕ್ಕಾಗಿ ಏರ್ ಇಂಡಿಯಾದ ಕ್ಯಾಬಿನ್ ಸಿಬ್ಬಂದಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.
ಭಾನುವಾರ ದುಬೈನಿಂದ ಏರ್ ಇಂಡಿಯಾ ವಿಮಾನದಲ್ಲಿ ಚೆನ್ನೈಗೆ ಆಗಮಿಸಿದಾಗ ಕ್ಯಾಬಿನ್ ಸಿಬ್ಬಂದಿ ಮತ್ತು ಪ್ರಯಾಣಿಕನನ್ನು ಅಧಿಕಾರಿಗಳು ತಡೆದರು. ವಿಮಾನದೊಳಗೆ ಕ್ಯಾಬಿನ್ ಸಿಬ್ಬಂದಿಗೆ ಚಿನ್ನವನ್ನು ಹಸ್ತಾಂತರಿಸಿರುವುದನ್ನು ಪ್ರಯಾಣಿಕ ಒಪ್ಪಿಕೊಂಡಿದ್ದಾನೆ ಎಂದು ಕಸ್ಟಮ್ಸ್ ಇಲಾಖೆ ಹೇಳಿಕೆಯಲ್ಲಿ ತಿಳಿಸಿದೆ.
ಕ್ಯಾಬಿನ್ ಸಿಬ್ಬಂದಿಗೆ ಚಿನ್ನವನ್ನು ಹಸ್ತಾಂತರಿಸಿದ ನಂತರ ಅದನ್ನು ವಿಮಾನ ನಿಲ್ದಾಣದ ಹೊರಗೆ ಆ ಪ್ರಯಾಣಿಕನಿಗೆ ತಲುಪಿಸಬೇಕೆಂಬುದು ಅವರು ಕಂಡುಕೊಂಡ ವಿಧಾನವಾಗಿದೆ” ಎಂದು ಕಸ್ಟಮ್ಸ್ ಅಧಿಕಾರಿ ಹೇಳಿದ್ದಾರೆ. .”ಶೋಧನೆ ನಡೆಸಿದ ನಂತರ ಕ್ಯಾಬಿನ್ ಸಿಬ್ಬಂದಿಯ ಒಳ ಉಡುಪುಗಳಲ್ಲಿ ಬಚ್ಚಿಟ್ಟಿದ್ದ ಚಿನ್ನ ಪತ್ತೆಯಾಗಿದೆ” ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಬ್ಬರನ್ನೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಈ ಬಗ್ಗೆ ಏರ್ ಇಂಡಿಯಾ ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ನಿಮ್ಮ ಕಾಮೆಂಟ್ ಬರೆಯಿರಿ