ಆಕ್ಷೇಪಾರ್ಹ ಪದ ಬಳಕೆ ಆರೋಪ: ಸಿ.ಟಿ. ರವಿ ಬಂಧನ

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ ಅವರ ವಿರುದ್ಧ ಆಕ್ಷೇಪಾರ್ಹ ಪದ ಬಳಕೆ ಮಾಡಿದ ಆರೋಪದ ಮೇಲೆ ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಬೆಳಗಾವಿಯ ಹಿರೇಬಾಗೇವಾಡಿ ಪೊಲೀಸರು, ಸುವರ್ಣಸೌಧದಲ್ಲೇ ಸಿಟಿ ರವಿ ಅವರನ್ನು ಬಂಧಿಸಿ ಠಾಣೆಗೆ ಕರೆದೊಯ್ದಿದ್ದಾರೆ.
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಸಿ.ಟಿ.ರವಿ ಅವರು ತನ್ನವಿರುದ್ಧ ಅಶ್ಲೀಲ ಪದ ಬಳಸಿ ನಿಂದಿಸಿದ್ದಾರೆ ಎಂದು ದೂರು ನೀಡಿದ್ದರು. ನಂತರ ಸಿ.ಟಿ. ರವಿ ವಿರುದ್ಧ ಎಫ್​​ಐಆರ್ ದಾಖಲಾಗಿತ್ತು. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಮ್ಮದೇ ಲೆಟರ್‌ಹೆಡ್ ಮೇಲೆ ಹಿರೇಬಾಗೇವಾಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಹೀಗಾಗಿ ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಸಿಟಿ ರವಿ ವಿರುದ್ಧ ಬಿಎನ್‌ಎಸ್ ಕಾಯ್ದೆ 75 ಮತ್ತು 79ಅಡಿಯಲ್ಲಿ ಎಫ್​ಐಆರ್ ದಾಖಲಾಗಿದೆ.

https://x.com/i/status/1869745218452697473

ಪೊಲೀಸರು ಸುವರ್ಣಸೌಧದಿಂದ ಸಿಟಿ ರವಿ ಅವರನ್ನು ಎತ್ತಿಕೊಂಡು ಬಂದು ವಾಹನದಲ್ಲಿ ಕೂರಿಸಿಕೊಂಡು ಹೋಗಿದ್ದಾರೆ. ಸಿ.ಟಿ.ರವಿ ಅವರನ್ನು ವಶಕ್ಕೆ ಪಡೆದ ನಂತರ ಅವರನ್ನು ಹಿರೇಬಾಗೇವಾಡಿ ಠಾಣೆಗೆ ಕರೆದೊಯ್ದರು. ಅಲ್ಲಿ ಅಪಾರ ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಜಮಾವಣೆಗೊಂಡ ಮಾಹಿತಿ ತಿಳಿಸಿದ ನಂತರ ಮುನ್ನೆಚ್ಚರಿಕೆಯ ಕ್ರಮವಾಗಿ ಅವರನ್ನು ತಕ್ಷಣ ಖಾನಾಪುರ ಠಾಣೆಗೆ ಕರೆದೊಯ್ಯಲಾಯಿತು.
ರಾಜ್ಯಸಭೆಯಲ್ಲಿ ಅಮಿತ್‌ ಶಾ ಹೇಳಿಕೆ ಖಂಡಿಸಿ ವಿಧಾನ ಪರಿಷತ್‌ನಲ್ಲಿ ಇಂದು ಗುರುವಾರ ಕಾಂಗ್ರೆಸ್‌ ಸದಸ್ಯರು ಪ್ರತಿಭಟನೆ ನಡೆಸಿದರು. ಈ ವೇಳೆ ಬಿಜೆಪಿ ಮತ್ತು ಕಾಂಗ್ರೆಸ್‌ ಸದಸ್ಯರ ಮಧ್ಯೆ ಮಾತಿನ ಚಕಮಕಿ ನಡೆಯವಾಗ ನನ್ನ ವಿರುದ್ಧ ಸಿಟಿ ರವಿ ಅಸಂವಿಧಾನಿಕ ಪದವನ್ನು ಬಳಸಿದ್ದಾರೆ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಗಂಭೀರ ಮಾಡಿದ್ದರು. ಇದರಿಂದ ಸದನದಲ್ಲಿ ಭಾರೀ ಕೋಲಾಹಲ ಸೃಷ್ಟಿಯಾಗಿತ್ತು.

ಪ್ರಮುಖ ಸುದ್ದಿ :-   ಏರ್ ಇಂಡಿಯಾ ವಿಮಾನದಲ್ಲಿ 7 ಮಂದಿ ಅಸ್ವಸ್ಥ

4.6 / 5. 5

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement