ಪ್ರವೀಣ ನೆಟ್ಟಾರು ಹತ್ಯೆ ಪ್ರಕರಣ: ದೆಹಲಿ ವಿಮಾನ ನಿಲ್ದಾಣದಲ್ಲಿ ಮತ್ತೋರ್ವ ಆರೋಪಿಯ ಬಂಧನ

ನವದೆಹಲಿ: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ನಿಷೇಧಿತ ಪಿಎಫ್‌ಐ (PFI) ಸಂಘಟನೆಯ ರಾಜ್ಯ ಕಾರ್ಯಕಾರಿ ಸದಸ್ಯನೊಬ್ಬನನ್ನು ರಾಷ್ಟ್ರೀಯ ತನಿಖಾ ದಳವು ಶುಕ್ರವಾರ ಇಲ್ಲಿನ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (IGI) ಬಂಧಿಸಿದೆ.
ಬಹ್ರೇನ್ ನಿಂದ ಬಂದಿಳಿದಾಗ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಂಧಿತನನ್ನು ಕೊಡಾಜೆ ನಿವಾಸಿ ಮೊಹಮ್ಮದ್ ಶರೀಫ್ ಎಂದು ಗುರುತಿಸಲಾಗಿದೆ. ಈತನ ಬಂಧನಕ್ಕಾಗಿ ಲುಕೌಟ್ ನೋಟಿಸ್ ಹೊರಡಿಸಲಾಗಿತ್ತು.

ಬಿಜೆಪಿ ಯುವ ಮೋರ್ಚಾ ಸದ್ಯರಾಗಿದ್ದ ಪ್ರವೀಣ ನೆಟ್ಟಾರು ಅವರನ್ನು ಜುಲೈ 22, 2022 ರಂದು ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಹತ್ಯೆ ಮಾಡಿದ್ದರು.ಆಗಸ್ಟ್ 4, 2022 ರಂದು ಈ ಪ್ರಕರಣದ ವಿಚಾರಣೆ ಕೈಗೆತ್ತಿಕೊಂಡಿದ್ದ ರಾಷ್ಟ್ರೀಯ ತನಿಖಾ ದಳ 23 ಆರೋಪಿಗಳನ್ನು ಜಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಿದೆ ಹಾಗೂ ಈವರೆಗೂ 20 ಮಂದಿಯನ್ನು ಬಂಧಿಸಿದೆ.

ಬಂಧಿತ ಮೊಹಮ್ಮದ್ ಶರೀಫ್ ಮಿತ್ತೂರಿನ ಕಮ್ಯೂನಿಟಿ ಹಾಲ್ ನಲ್ಲಿ ತಂಡದ ಸದಸ್ಯರಿಗೆ ಶಸಾಸ್ತ್ರ ತರಬೇತಿಯಲ್ಲಿ ಸಹ ಆರೋಪಿಗಳೊಂದಿಗೆ ಭಾಗಿಯಾಗಿದ್ದ ಎಂದು ಎನ್‌ಐಎ ಅಧಿಕಾರಿಗಳು ತಿಳಿಸಿದ್ದಾರೆ.
ಶೆರೀಫ್ ಅವರ ಸೂಚನೆಗಳು ಆರೋಪಿ ಮುಸ್ತಫಾ ಪೈಚಾರ್ ಮತ್ತು ಅವರ ತಂಡದಿಂದ ನೆಟ್ಟಾರು ಹತ್ಯೆಗೆ ಕಾರಣವಾಯಿತು ಎಂದು ಎನ್ಐಎ ಅಧಿಕಾರಿಗಳು ಬಹಿರಂಗಪಡಿಸಿದ್ದಾರೆ, ಇದು ಭಯೋತ್ಪಾದನೆ, ಕೋಮು ದ್ವೇಷ ಮತ್ತು ಸಾಮಾಜಿಕ ಅಶಾಂತಿಯನ್ನು ಪ್ರಚೋದಿಸುವ ಉದ್ದೇಶಪೂರ್ವಕ ಪ್ರಯತ್ನ ಎಂದು ವಿವರಿಸಲಾಗಿದೆ. ಉಳಿದ ಪರಾರಿಯಾದವರನ್ನು ಪತ್ತೆಹಚ್ಚಲು ಪ್ರಯತ್ನಗಳು ನಡೆಯುತ್ತಿವೆ ಎಂದು ಎನ್ಐಎ ತಿಳಿಸಿದೆ.

ಪ್ರಮುಖ ಸುದ್ದಿ :-   ಸಚಿವೆ ಹೆಬ್ಬಾಳ್ಕರ ವಿರುದ್ಧ ಅಶ್ಲೀಲ ಪದ ಬಳಕೆ: ಬಿಜೆಪಿ ಶಾಸಕ ಸಿ ಟಿ ರವಿ ವಿರುದ್ಧದ ವಿಚಾರಣೆಗೆ ಸುಪ್ರೀಂ ಕೋರ್ಟ್‌ ತಡೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement