ಟಿವಿ ರಿಮೋಟ್ ; ಅಜ್ಜಿ ಬೈದಿದ್ದಕ್ಕೆ ಬಾಲಕಿ ಆತ್ಮಹತ್ಯೆ

ಶಿವಮೊಗ್ಗ: ಟಿವಿ ರಿಮೋಟ್ ಕೊಡಲಿಲ್ಲ ಎಂಬ ಕಾರಣಕ್ಕೆ ಇಲಿ ಪಾಷಾಣ ಸೇವಿಸಿ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಭದ್ರಾವತಿ ತಾಲೂಕಿನ ಸೂಳೆಬೈಲಿನಲ್ಲಿ ಎಂಬಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಮೃತ ಬಾಲಕಿಯನ್ನು ಭದ್ರಾವತಿ ತಾಲೂಕಿನ ಕಲ್ಲಿಹಾಳ ಗ್ರಾಮದ ಸಹನಾ (16) ಎಂದು ಗುರುತಿಸಲಾಗಿದೆ. ಟಿವಿ ರಿಮೋಟ್‍ಗಾಗಿ ಮಕ್ಕಳ ನಡುವೆ ಗಲಾಟೆ ನಡೆಯುತ್ತಿತ್ತು. ಈ ವೇಳೆ ಮೊಮ್ಮಗಳಿಗೆ ಅಜ್ಜಿ ಬೈದಿದ್ದಾರೆ. ಇದರಿಂದ ಮನನೊಂದು ಬಾಲಕಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎನ್ನಲಾಗಿದೆ. ಈ ಸಂಬಂಧ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

5 / 5. 2

ಶೇರ್ ಮಾಡಿ :
ಪ್ರಮುಖ ಸುದ್ದಿ :-   ವಾಯು ವಿಹಾರಕ್ಕೆ ಹೋಗಿದ್ದ ಕಾರವಾರ ನಗರಸಭೆ ಮಾಜಿ ಸದಸ್ಯನ ಹತ್ಯೆ

ನಿಮ್ಮ ಕಾಮೆಂಟ್ ಬರೆಯಿರಿ

advertisement