ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ತಾಳೇಕೆರೆ ಗ್ರಾಮದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಶನಿವಾರ (ಡಿ. 21) ಚಾಲಕನ ನಿಯಂತ್ರಣ ತಪ್ಪಿ ಲಾರಿ ಕಾರಿನ ಮೇಲೆ ಪಲ್ಟಿಯಾಗಿದ್ದು, ಕಾರಿನಲ್ಲಿದ್ದ ಇಬ್ಬರು ಮಕ್ಕಳು ಸೇರಿದಂತೆ ಒಟ್ಟು 6 ಮಂದಿ ಸಾವಿಗೀಡಾಗಿದ್ದಾರೆ.
ಅ ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಎಸ್.ಪಿ. ಸಿ.ಕೆ.ಬಾಬಾ ಸೇರಿದಂತೆ ಇತರ ಅಧಿಕಾರಿಗಳು ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಸಾರ್ವಜನಿಕರ ನೆರವಿನಿಂದ, ಕ್ರೇನ್ ಮೂಲಕ ಕಾರಿನಲ್ಲಿ ಸಿಲುಕಿದ್ದ ಮೃತದೇಹಗಳನ್ನು ಹೊರತೆಗೆಯಲಾಯಿತು. ಸಂಪೂರ್ಣ ಅಪ್ಪಚ್ಚಿಯಾಗಿರುವ ಕಾರು ಬೆಂಗಳೂರು ರಿಜಿಸ್ಟ್ರೇಷನ್ ಹೊಂದಿದ್ದು, ಮೃತರೆಲ್ಲ ಒಂದೇ ಕುಟುಂಬದವರು ಎನ್ನಲಾಗಿದೆ. ಚಂದ್ರಮ್ ಏಗಪ್ಪಗೋಳ(46), ಪತ್ನಿ ಧೋರಾಬಾಯಿ(40), ಪುತ್ರ ಗ್ಯಾನ್(16), ಪುತ್ರಿಯರಾದ ದೀಕ್ಷಾ(10), ಆರ್ಯ(6) ಚಂದ್ರಮ್ ಏಗಪ್ಪಗೋಳ ಸಹೋದರನ ಪತ್ನಿ ವಿಜಯಲಕ್ಷ್ಮೀ(35) ಮೃತಪಟ್ಟವರು ಎಂದು ಹೇಳಲಾಗಿದೆ.
ಲಾರಿ ತುಮಕೂರಿನಿಂದ ಬೆಂಗಳೂರಿಗೆ ಬರುತ್ತಿತ್ತು. ಮುಂದೆ ಬಂದ ಕಾರಿಗೆ ಡಿಕ್ಕಿಯಾಗುವುದನ್ನ ತಪ್ಪಿಸಲು ಚಾಲಕ ಲಾರಿಯನ್ನು ಒಮ್ಮೆಲೆ ತಿರುಗಿಸಲು ಹೋಗಿ ಪರಿಣಾಮ ಪಲ್ಟಿಯಾಗಿ ಕಾರಿನ ಮೇಲೆ ಬಿದ್ದಿದೆ ಎಂದು ಹೇಳಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ