ಕುವೈತ್: ಎರಡು ದಿನಗಳ ಕಾಲ ಕುವೈತ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಮೊದಲ ದಿನವಾದ ಶನಿವಾರ ಭಾರತದ ಎರಡು ಅಪ್ರತಿಮ ಮಹಾಕಾವ್ಯಗಳಾದ ಮಹಾಭಾರತ ಮತ್ತು ರಾಮಾಯಣವನ್ನು ಅರೇಬಿಕ್ ಭಾಷೆಗೆ ಅನುವಾದಿಸಿ ಪ್ರಕಟಿಸಿದ ಇಬ್ಬರು ಕುವೈತ್ ಪ್ರಜೆಗಳನ್ನು ಭೇಟಿ ಮಾಡಿದ್ದಾರೆ.
ಲೇಖಕರನ್ನು ಭೇಟಿ ಮಾಡಿದ ಪ್ರಧಾನಿ ಮೋದಿ ಎರಡು ಮಹಾಕಾವ್ಯಗಳ ಅರೇಬಿಕ್ ಆವೃತ್ತಿಗಳಿಗೆ ಸಹಿ ಹಾಕಿದ್ದಾರೆ.
“ರಾಮಾಯಣ ಮತ್ತು ಮಹಾಭಾರತದ ಅರೇಬಿಕ್ ಭಾಷಾಂತರಗಳನ್ನು ನೋಡಲು ಸಂತೋಷವಾಗುತ್ತಿದೆ. ನಾನು ಅಬ್ದುಲ್ಲಾ ಅಲ್-ಬರೂನ್ ಮತ್ತು ಅಬ್ದುಲ್ ಲತೀಫ್ ಅಲ್-ನೆಸೆಫ್ ಅವರ ಅನುವಾದ ಮತ್ತು ಪ್ರಕಟಣೆಯಲ್ಲಿ ಅವರ ಪ್ರಯತ್ನಗಳಿಗಾಗಿ ಅಭಿನಂದಿಸುತ್ತೇನೆ ಎಂದು ಹೇಳಿದ್ದಾರೆ.
ಅವರ ಈ ಕ್ರಮವು ಜಾಗತಿಕವಾಗಿ ಭಾರತೀಯ ಸಂಸ್ಕೃತಿಯ ಜನಪ್ರಿಯತೆಯನ್ನು ಎತ್ತಿ ತೋರಿಸುತ್ತದೆ ಎಂದು ಪ್ರಧಾನಿ ಮೋದಿ ಅವರು ಎಕ್ಸ್ ನಲ್ಲಿ ಮಾಡಿದ ಪೋಸ್ಟ್ ನಲ್ಲಿ ಬರೆದಿದ್ದಾರೆ.
‘ರಾಮಾಯಣ’ ಮತ್ತು ‘ಮಹಾಭಾರತ’ದ ಪುಸ್ತಕವನ್ನು ಕುವೈತ್‌ನಲ್ಲಿ ಪ್ರಧಾನಿ ಮೋದಿ ಹಿಡಿದುಕೊಂಡಿರುವ ಫೋಟೋ ಭಾರೀ ವೈರಲ್ ಆಗುತ್ತಿದೆ.
ಕುವೈತ್‌ನ ಅಮೀರ್, ಶೇಖ್ ಮಿಶಾಲ್ ಅಲ್ ಅಹ್ಮದ್ ಅಲ್ ಜಬೇರ್ ಅಲ್ ಸಬ್ಹಾ ಅವರ ಆಹ್ವಾನದ ಮೇರೆಗೆ ಪ್ರಧಾನಿ ಮೋದಿ ಕುವೈತ್‌ಗೆ ತೆರಳಿದ್ದಾರೆ. ಇದು 43 ವರ್ಷಗಳ ನಂತರ ಗಲ್ಫ್ ರಾಷ್ಟ್ರಕ್ಕೆ ಭಾರತದ ಪ್ರಧಾನಿಯೊಬ್ಬರು ಮೊದಲ ಬಾರಿ ಭೇಟಿ ನೀಡುತ್ತಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ