ಹೈದರಾಬಾದ್: ಡಿಸೆಂಬರ್ 23ರಿಂದ ಮೂರು ದಿನ ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಆಂಧ್ರಪ್ರದೇಶ ಕರಾವಳಿಯ ಪಶ್ಚಿಮ ಬಂಗಾಳ ಕೊಲ್ಲಿಯ ಮೇಲಿನ ವಾಯುಭಾರ ಕುಸಿತ ಆಗಿರುವ ಕಾರಣ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಡಿಸೆಂಬರ್ 23ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆಯಿದೆ.
ಡಿಸೆಂಬರ್ 24ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ನಗರ ಮತ್ತು ನೆರೆಹೊರೆಯ ಪ್ರದೇಶಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ.


ನಿಮ್ಮ ಕಾಮೆಂಟ್ ಬರೆಯಿರಿ