ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ ವಿರುದ್ಧ ಸಿ.ಟಿ. ರವಿ ಅಶ್ಲೀಲ ಪದ ಬಳಕೆ ಆರೋಪ ಪ್ರಕರಣದ ತನಿಖೆ ಸಿಐಡಿ ಹೆಗಲಿಗೆ

ಹುಬ್ಬಳ್ಳಿ: ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿದ್ದಾರೆ ಎಂಬ ಆರೋಪಿತ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ ತಿಳಿಸಿದ್ದಾರೆ.
ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸಿ.ಟಿ. ರವಿ ಅವರು ಅಶ್ಲೀಲ ಪದ ಬಳಸಿದ್ದಾರೆ ಎಂದು ಕೆಲವರು ಹೇಳುತ್ತಿದ್ದಾರೆ. ಇನ್ನು ಕೆಲವರು ಇಲ್ಲ ಎನ್ನುತ್ತಿದ್ದಾರೆ. ಹೀಗಾಗಿ ಪ್ರಕರಣದ ಸತ್ಯಾಸತ್ಯತೆ ತಿಳಿಯಲು ಸಿಐಡಿ ತನಿಖೆಗೆ ಆದೇಶ ಮಾಡಿದ್ದೇನೆ. ಸಭಾಪತಿಯವರು ತಮ್ಮ ಕೆಲಸ ಮಾಡಿದ್ದಾರೆ. ಪೊಲೀಸರು ತನಿಖೆ ಮಾಡಬೇಕು ಎಂದರು.

ಸಿಐಡಿ ತನಿಖೆ ನಡೆಸುವ ಹಂತದಲ್ಲಿ ತಾವು ಏನನ್ನೂ ಹೇಳಲು ಬಯಸುವುದಿಲ್ಲ. ತನಿಖೆಯಲ್ಲಿ ಸತ್ಯಾಸತ್ಯತೆಯ ಪರಿಶೀಲನೆ ನಡೆಯಲಿದೆ.ಸಿ.ಟಿ.ರವಿ ತಾವು ಆ ರೀತಿ ಹೇಳಿಲ್ಲ ಎಂದು ಹೇಳಿದ್ದಾರೆ. ವಿಧಾನ ಪರಿಷತ್ ಸಭಾಂಗಣದಲ್ಲಿದ್ದ ಕೆಲವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಾಚ್ಯ ಶಬ್ದ ಬಳಸಿರುವುದು ನಿಜ ಎಂದು ಹೇಳುತ್ತಿದ್ದಾರೆ. ಇವೆಲ್ಲವನ್ನೂ ಸಿಐಡಿ ಪೊಲೀಸರು ಪರಿಶೀಲನೆ ನಡೆಸುತ್ತಾರೆ ಎಂದರು.
ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ತಮ ಕೆಲಸವನ್ನು ತಾವು ಮಾಡಿದ್ದಾರೆ. ಹಾಗಾಗಿ ಪ್ರಕರಣವನ್ನು ಮುಗಿದ ಅಧ್ಯಾಯ ಎಂದು ಹೇಳಿರಬಹುದು. ಆದರೆ ಪೊಲೀಸರು ಅವರ ಕರ್ತವ್ಯ ನಿಭಾಯಿಸಲಿದ್ದಾರೆ ಎಂದರು.

ಪ್ರಮುಖ ಸುದ್ದಿ :-   ಚಿತ್ರದುರ್ಗ | ಬಡಿದಾಡಿಕೊಂಡ ಪಿಎಸ್‌ಐ-ಬಿಜೆಪಿ ಮುಖಂಡ ; ವೀಡಿಯೊ ವೈರಲ್‌

ಸಿ.ಟಿ.ರವಿ ನೀಡಿರುವ ದೂರು ಆಧರಿಸಿ ಐದು ದಿನಗಳ ಬಳಿಕ ಎಫ್ಐಆರ್ ದಾಖಲಿಸಲು, ಸವಿಸ್ತಾರವಾದ ವಿಚಾರಣೆ ನಡೆಸಬೇಕಿತ್ತು. ಸಭಾಪತಿ ಅವರ ಗಮನಕ್ಕೆ ತರಬೇಕಿತ್ತು. ಪೊಲೀಸರು ಅದನ್ನೆಲ್ಲಾ ಮಾಡಿದ ಬಳಿಕ ಪ್ರಕರಣ ದಾಖಲಿಸಿದ್ದಾರೆ ಎಂದರು.
ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಮ್ಮನ್ನು ಅಸಮರ್ಥ ಗೃಹ ಸಚಿವರು ಎಂದಿರುವುಕ್ಕೆ ಪ್ರತಿಕ್ರಿಯಿಸಿದ ಅವರು, ಕೇಂದ್ರ ಸಚಿವರಿಗೆ ನನ್ನ ಸಾಮರ್ಥ್ಯ ಗೊತ್ತಿಲ್ಲ, ಒಂದು ವೇಳೆ ನಾನು ಪ್ರಹ್ಲಾದ ಜೋಶಿ ಅಸಮರ್ಥರು ಎಂದರೆ ಅದು ಸಮಂಜಸವಾಗುತ್ತದೆಯೇ ಎಂದು ಪ್ರಶ್ನಿಸಿದರು.

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement