ಮಂಗಳವಾರ ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ಸೇನಾ ಟ್ರಕ್ ರಸ್ತೆಯಿಂದ ಸ್ಕಿಡ್ ಆಗಿ 300 ಅಡಿ ಕಮರಿಗೆ ಬಿದ್ದು ಐವರು ಸೈನಿಕರು ಸಾವಿಗೀಡಾಗಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸೇನಾ ವಾಹನವು ಜಿಲ್ಲೆಯ ಬನೋಯ್‌ಗೆ ತೆರಳುತ್ತಿದ್ದಾಗ ಘರೋವಾ ಪ್ರದೇಶದಲ್ಲಿ ಈ ಅಪಘಾತ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪೂಂಚ್ ಜಿಲ್ಲೆಯ ಮೆಂಧರ್ ಉಪವಿಭಾಗದ ಮಾನ್‌ಕೋಟ್ ಸೆಕ್ಟರ್‌ನ ಬಲ್ನೋಯಿ ಪ್ರದೇಶದಲ್ಲಿ ಭಾರತೀಯ ಸೇನೆಯ ವಾಹನವು ಪೋಸ್ಟ್ ಕಡೆಗೆ ಹೋಗುತ್ತಿದ್ದಾಗ ದಾರಿಯಲ್ಲಿ ವಾಹನದ ನಿಯಂತ್ರಣ ಕಳೆದುಕೊಂಡು ಅಪಘಾತ ಸಂಭವಿಸಿದೆ. ಈ ವಾಹನದಲ್ಲಿ ಒಟ್ಟು 18 ಯೋಧರಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಗಾಯಾಳುಗಳಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಪರಿಹಾರ ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿವೆ. ಮಾನ್‌ಕೋಟ್ ಪೊಲೀಸ್ ಠಾಣೆ ಮತ್ತು ಮೆಂಧರ್ ಪೊಲೀಸ್ ಠಾಣೆ ವ್ಯಾಪ್ತಿಯ ಎಲ್‌ಒಸಿ ಬಳಿ ಈ ಘಟನೆ ನಡೆದಿದೆ.
ನಿಮ್ಮ ಕಾಮೆಂಟ್ ಬರೆಯಿರಿ