ಬೆಂಗಳೂರು : ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ಸೇನಾ ವಾಹನ 300 ಅಡಿ ಕಂದಕಕ್ಕೆ ಸೇನಾ ಬಿದ್ದು ಸಂಭವಿಸಿದ ದುರಂತದಲ್ಲಿ ಕರ್ನಾಟದ ಮೂವರು ಸೈನಿಕರು ಮೃತಪಟ್ಟಿದ್ದಾರೆ.
ಮಂಗಳವಾರ ಸಂಜೆ 5:30ರ ಸುಮಾರಿಗೆ 300 ಅಡಿ ಕಂದಕಕ್ಕೆ ಸೇನಾ ವಾಹನ ಬಿದ್ದು ಮರಾಠಾ ರೆಜಿಮೆಂಟ್‌ನ (Maratha Light Infantry) ಐವರು ಮೃತಪಟ್ಟಿದ್ದರು. ಅವರಲ್ಲಿ ಮೂವರು ಕರ್ನಾಟಕದವರಾಗಿದ್ದಾರೆ. ಸೇನಾ ವಾಹನವು ಜಿಲ್ಲೆಯ ಬನೋಯ್‌ಗೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿತ್ತು
ಮೃತರನ್ನು ಬೆಳಗಾವಿ ಪಂತ ಬಾಳೇಕುಂದ್ರಿ ದಯಾನಂದ ತಿರಕನ್ನವರ, ಮುಧೋಳದ ಮಹಾಲಿಂಗಪುರದ ಮಹೇಶ ಮರಿಗೊಂಡ ಹಾಗೂ ಕುಂದಾಪುರ ಬೀಜಾಡಿಯ ಅನೂಪ ಎಂದು ಗುರುತಿಸಲಾಗಿದೆ. ಮಹೇಶ ನಾಗಪ್ಪ ಮಾರಿಗೊಂಡ (25) ರಬಕವಿ ಬನಹಟ್ಟಿ ತಾಲ್ಲೂಕಿನ ಮಹಾಲಿಂಗಪುರ ನಿವಾಸಿಯಾಗಿದ್ದರು. ಮಹೇಶ 7 ವರ್ಷಗಳಿಂದ ಸೇನೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಯೋಧ ಅನೂಪ್ ಕಳೆದ 13 ವರ್ಷಗಳಿಂದ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು.
ನಿಮ್ಮ ಕಾಮೆಂಟ್ ಬರೆಯಿರಿ