ಬೆಳಗಾವಿ : ಶಾಲೆಗಳಿಗೆ ಎರಡು ದಿನ ರಜೆ ಘೋಷಣೆ

ಬೆಳಗಾವಿ: ನಗರದಲ್ಲಿ ನಡೆಯಲಿರುವ ಗಾಂಧಿ‌ ಭಾರತ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬೆಳಗಾವಿ ನಗರ ಮತ್ತು ಗ್ರಾಮೀಣ ವಲಯದ ಸರ್ಕಾರಿ, ಅನುದಾನಿತ‌ ಹಾಗೂ ಅನುದಾನರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಡಿ.26 ಹಾಗೂ 27 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ.
ಡಿ.26ರಿಂದ ಎರಡು ದಿನಗಳ ಕಾಲ ಗಾಂಧಿ‌ ಭಾರತ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬೆಳಗಾವಿ ನಗರ ಗ್ರಾಮೀಣ ಪ್ರದೇಶಗಳ ಸರ್ಕಾರಿ, ಅನುದಾನಿತ‌ ಹಾಗೂ ಅನುದಾನರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಹಾಗೂ ಬೆಳಗಾವಿ ನಗರ ಮತ್ತು ಗ್ರಾಮೀಣ ಯೋಜನೆಯ ಅಂಗನವಾಡಿ ಕೇಂದ್ರಗಳಿಗೂ ರಜೆ ಘೋಷಣೆ ಮಾಡಲಾಗಿದೆ.

5 / 5. 2

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಿಲ್ಲಿಸಿದ್ದ ಇಂಡಿಗೋ ವಿಮಾನಕ್ಕೆ ಡಿಕ್ಕಿ ಹೊಡೆದ ಟೆಂಪೋ ಟ್ರಾವೆಲರ್...!

ನಿಮ್ಮ ಕಾಮೆಂಟ್ ಬರೆಯಿರಿ

advertisement