ಸಿ.ಟಿ. ರವಿ ಪ್ರಕರಣ | ಕರ್ತವ್ಯ ಲೋಪದ ಆರೋಪ ; ಖಾನಾಪುರ ಠಾಣೆಯ ಸಿಪಿಐ ಸಸ್ಪೆಂಡ್‌

ಬೆಳಗಾವಿ: ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿ ಪ್ರಕರಣದಲ್ಲಿ (CT Ravi Case) ಮೊದಲ ತಲೆದಂಡವಾಗಿದೆ. ಕರ್ತವ್ಯ ಲೋಪ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಖಾನಾಪುರ ಠಾಣೆಯ ಸಿಪಿಐ ಮಂಜುನಾಥ ನಾಯಕ್ ಅವರನ್ನು ಅಮಾನತು ಮಾಡಲಾಗಿದೆ ಎಂದು ತಿಳಿದುಬಂದಿದೆ.
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ ವಿರುದ್ಧ ಅಶ್ಲೀಲ ಪದ ಬಳಕೆ ಆರೋಪದಲ್ಲಿ ಸಿ.ಟಿ ರವಿ ಅವರನ್ನು ಬಂಧಿಸಿದ ನಂತರ ಖಾನಾಪುರ ಪೊಲೀಸ್‌ ಠಾಣೆಗೆ ಕರೆತರಲಾಗಿತ್ತು. ಈ ವೇಳೆ ಬಿಜೆಪಿ ನಾಯಕರಿಗೆ ಖಾನಾಪುರ ಪೊಲೀಸ್ ಠಾಣೆ ಒಳಗೆ ಬರಲು ಅವಕಾಶ ನೀಡಿದ ಹಿನ್ನೆಲೆಯಲ್ಲಿ ಸಿಪಿಐ ಮಂಜುನಾಥ ನಾಯಕ್ ಅವರನ್ನು ಅಮಾನತು ಮಾಡಿ ಬೆಳಗಾವಿ ಉತ್ತರ ವಲಯದ ಐಜಿಪಿ ವಿಕಾಸಕುಮಾರ ಅವರು ಆದೇಶಿಸಿದ್ದಾರೆ.
ಡಿಸೆಂಬರ್​ 19ರಂದು ಸಿ.ಟಿ.ರವಿ ಅವರನ್ನು ಬಂಧಿಸಿದ ನಂತರ ಹಿರೇಬಾಗೇವಾಡಿ ಠಾಣೆಯಿಂದ ಖಾನಾಪುರ ಠಾಣೆಗೆ ಕರೆದುಕೊಂಡು ಬರಲಾಗಿತ್ತು. ಅವರಿಗೆ ಸೂಕ್ತ ಭದ್ರತೆ ನೀಡುವಂತೆ ಸೂಚಿಸಲಾಗಿತ್ತು. ಆಪಾದಿತರನ್ನು (ಸಿಟಿ ರವಿ) ಹೊರತುಪಡಿಸಿ ಠಾಣೆಯ ಒಳಗೆ ಯಾರನ್ನೂ ಒಳಕ್ಕೆ ಬೀಡದಂತೆ ಆದೇಶಿಸಲಾಗಿತ್ತು.

ಆದರೆ, ಸಿಪಿಐ ಮಂಜುನಾಥ್ ನಾಯಕ್ ಸೂಕ್ತ ಬಂದೋಬಸ್ತ್ ಮಾಡಿಲ್ಲ. ರಾಜಕೀಯ ಮುಖಂಡರು ಖಾನಾಪುರ ಠಾಣೆ ಒಳಗೆ ನುಗ್ಗಿದ್ದರು. ಇದರಿಂದ ಠಾಣೆಯೊಳಗೆ ಗದ್ದಲದ ವಾತಾವರಣ ನಿರ್ಮಾಣವಾಗಿತ್ತು. ಮೇಲಧಿಕಾರಿಗಳ ಆದೇಶ ಉಲ್ಲಂಘಿಸಿ ಕರ್ತವ್ಯ ಲೋಪ ಎಸಗಿದ ಹಿನ್ನೆಲೆಯಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತಿನಲ್ಲಿಟ್ಟು ಆದೇಶ ಹೊರಡಿಸಲಾಗಿದೆ.
ಸಿಪಿಐ ಅಮಾನತು ಖಂಡಿಸಿ ಗುರುವಾರ ಖಾನಾಪುರ ಬಂದ್
ಬಿಜೆಪಿ ಶಾಸಕ ಸಿ.ಟಿ.ರವಿ ಬಂಧನ ಪ್ರಕರಣಕ್ಕೆ ಸಂಬಂಧಿಸಿ ಖಾನಾಪುರ ಠಾಣೆಯ ಸಿಪಿಐ ಮಂಜುನಾಥ ಅವರನ್ನು ಅಮಾನತು ಮಾಡಿದ್ದನ್ನು ಖಂಡಿಸಿ ವಿವಿಧ ಸಂಘಟನೆಗಳು ಡಿ.26 ರಂದು ಖಾನಾಪುರ ಬಂದ್ ಗೆ ಕರೆ ನೀಡಿವೆ. ಅಮಾನತು ಖಂಡಿಸಿ ಡಿ.26 ರಂದು ಕನ್ನಡಪರ ಸಂಘಟನೆಗಳು ಖಾನಾಪುರ ಬಂದ್ ಗೆ ಕರೆ ನೀಡಿವೆ. ಬಂದ್ ಕರೆಗೆ ಬಿಜೆಪಿ-ಜೆಡಿಎಸ್ ಪಕ್ಷಗಳು ಸಹ ಬೆಂಬಲ ಘೋಷಿಸಿವೆ.

ಪ್ರಮುಖ ಸುದ್ದಿ :-   ವೀಡಿಯೊ..| ಆಡಳಿತ ಸಂಪೂರ್ಣ ವಿಫಲ ; ಬಿ.ಆರ್.​ ಪಾಟೀಲ ಬೆನ್ನಲ್ಲೇ ತಮ್ಮ ಸರ್ಕಾರದ ವಿರುದ್ಧವೇ ಸಿಡಿದೆದ್ದ ಮತ್ತೊಬ್ಬ ಕಾಂಗ್ರೆಸ್ ಶಾಸಕ ; ರಾಜೀನಾಮೆ ಮಾತು

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement