ಮಾಜಿ ಪ್ರಧಾನಿ ಮನಮೋಹನ ಸಿಂಗ್‌ ಇನ್ನಿಲ್ಲ

ನವದೆಹಲಿ : ಎರಡು ಅವಧಿಗಳ ಕಾಲಕ್ಕೆ ದೇಶದ ಪ್ರಧಾನಿಯಾಗಿದ್ದ ಮನಮೋಹನ್‌ ಸಿಂಗ್‌ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ 92 ವರ್ಷದ ಮನಮೋಹನ್ ಸಿಂಗ್ ದೆಹಲಿಯ ಏಮ್ಸ್​ ಆಸ್ಪತ್ರೆಗೆ ದಾಖಲಾಗಿದ್ದರು, ಅವರು ಅಲ್ಲಿಯೇ ಕೊನೆಯುಸಿರೆಳೆದಿದ್ದಾರೆ.
ಕಳೆದ ಕೆಲವು ತಿಂಗಳುಗಳಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಮಾಜಿ ಪ್ರಧಾನಿ ಅವರು ಪತ್ನಿ ಗುರುಚರಣ್ ಸಿಂಗ್ ಮತ್ತು ಮೂವರು ಪುತ್ರಿಯರನ್ನು ಅಗಲಿದ್ದಾರೆ.
ತೀವ್ರವಾದ ದುಃಖದಿಂದ, 92 ವರ್ಷ ವಯಸ್ಸಿನ ಭಾರತದ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ನಿಧನವನ್ನು ನಾವು ತಿಳಿಸುತ್ತೇವೆ. ಅವರು ವಯೋಸಹಜ ತೊಂದರೆಗಳಿಗೆ ಚಿಕಿತ್ಸೆ ಪಡೆಯುತ್ತಿದ್ದರು ಮತ್ತು 26 ಡಿಸೆಂಬರ್ 2024 ರಂದು ಮನೆಯಲ್ಲಿ ಪ್ರಜ್ಞೆ ಕಳೆದುಕೊಂಡರು” ಎಂದು ಏಮ್ಸ್‌ (AIIMS) ಹೇಳಿದೆ. .
“ಮನೆಯಲ್ಲಿ ತಕ್ಷಣವೇ ಪುನರುಜ್ಜೀವನಗೊಳಿಸುವ ಕ್ರಮಗಳನ್ನು ಪ್ರಾರಂಭಿಸಲಾಯಿತು. ಅವರನ್ನು ರಾತ್ರಿ 8.06 ಕ್ಕೆ ನವದೆಹಲಿಯ ಏಮ್ಸ್‌ನ ವೈದ್ಯಕೀಯ ತುರ್ತು ಘಟಕಕ್ಕೆ ಕರೆತರಲಾಯಿತು. ಎಲ್ಲಾ ಪ್ರಯತ್ನಗಳ ಹೊರತಾಗಿಯೂ, ಅವರನ್ನು ಬದುಕಿಸಲು ಸಾಧ್ಯವಾಗಲಿಲ್ಲ ಮತ್ತು ರಾತ್ರಿ 9:51 ಕ್ಕೆ ಅವರು ನಿಧನರಾದರು ಎಂದು ಪ್ರಕಟಿಸಲಾಯಿತು” ಎಂದು ಏಮ್ಸ್‌ ತಿಳಿಸಿದೆ. ಎಕ್ಸ್‌ನಲ್ಲಿ ಪೋಸ್ಟ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನಾಯಕನ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಡಾ. ಮನಮೋಹನ್ ಸಿಂಗ್ ಜಿ ಮತ್ತು ನಾನು ಅವರು ಪ್ರಧಾನಿಯಾಗಿದ್ದಾಗ ಮತ್ತು ನಾನು ಗುಜರಾತ್ ಸಿಎಂ ಆಗಿದ್ದಾಗ ನಿಯಮಿತವಾಗಿ ಸಂವಹನ ನಡೆಸುತ್ತಿದ್ದೆವು. ಆಡಳಿತಕ್ಕೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ನಾವು ವ್ಯಾಪಕವಾದ ಚರ್ಚೆಗಳನ್ನು ನಡೆಸುತ್ತೇವೆ. ಅವರ ಬುದ್ಧಿವಂತಿಕೆ ಮತ್ತು ನಮ್ರತೆ ಯಾವಾಗಲೂ ಗೋಚರಿಸುತ್ತದೆ.
ಡಾ. ಸಿಂಗ್ ಅವರು ಪತ್ನಿ ಗುರುಚರಣ್ ಕೌರ್ ಮತ್ತು ಮೂವರು ಪುತ್ರಿಯರನ್ನು ಅಗಲಿದ್ದಾರೆ. 1991 ರಲ್ಲಿ ರಾಜ್ಯಸಭೆಗೆ ಪ್ರವೇಶ ಮಾಡುವ ತಮ್ಮ ರಾಜಕೀಯ ಜೀವನ ಆರಂಭಿಸಿದ್ದ ಮನಮೋಹನ ಸಿಂಗ್ ಅವರು, 2024ರ ಏಪ್ರಿಲ್​ನಲ್ಲಿ ಅವರ ರಾಜ್ಯಸಭೆ ಮುಕ್ತಾಯವಾಗಿತ್ತು. ಅವರು ಸಂಸತ್ತಿನ ಮೇಲ್ಮನೆಯಲ್ಲಿ 33 ವರ್ಷಗಳ ಕಾಲ ಇದ್ದರು.
ದೇಶದ ಆರ್ಥಿಕ ಸುಧಾರಣೆಗಳ ದಿಟ್ಟ ಹೆಜ್ಜೆ ಕೈಗೊಂಡಿದ್ದ ಅವರು 1991ರಿಂದ 1996ರವರೆಗೆ ನರಸಿಂಹ ರಾವ್ ಸಂಪುಟದಲ್ಲಿ ಹಣಕಾಸು ಸಚಿವರಾಗಿದ್ದರು. ಬಳಿಕ 2004 ರಿಂದ 2014ರವರೆಗೆ ದೇಶದ ಪ್ರಧಾನಿಯಾಗಿದ್ದರು.
ಮನಮೋಹನಸಿಂಗ್ ಅವರು 1932ರ ಸೆಪ್ಟೆಂಬರ್ 26ರಂದು ಅವಿಭಜಿತ ಭಾರತದ ಪಂಜಾಬ್ ಪ್ರಾಂತ್ಯದಲ್ಲಿ ಜನಿಸಿದ್ದರು. ಡಾ. ಸಿಂಗ್ ಇಂಗ್ಲೆಂಡ್ ನ ಕೇಂಬ್ರಿಜ್ ವಿಶ್ವವಿದ್ಯಾಲಯದಲ್ಲಿ 1957ರಲ್ಲಿ ಪ್ರಥಮ ದರ್ಜೆಯೊಂದಿಗೆ ಅರ್ಥಶಾಸ್ತ್ರದಲ್ಲಿ ಆನರ್ಸ್ ಪದವಿ ಪಡೆದರು. ನಂತರ ಅವರು 1962ರಲ್ಲಿ ಆಕ್ಸ್ ಫರ್ಡ್ ವಿಶ್ವವಿದ್ಯಾಲಯದ ನಫ್ ಫೀಲ್ಡ್ ಕಾಲೇಜಿನಿಂದ ಅರ್ಥಶಾಸ್ತ್ರದಲ್ಲಿ ಡಿ.ಫಿಲ್ ಗೌರವ ಪಡೆದರು.

ಪ್ರಮುಖ ಸುದ್ದಿ :-   ಹಮಾಸ್‌ ಜೊತೆ ನಂಟು ; ಅಮೆರಿಕದಲ್ಲಿ ಭಾರತದ ಸಂಶೋಧನಾ ವಿದ್ಯಾರ್ಥಿಯ ಬಂಧನ : ಶೀಘ್ರವೇ ಗಡೀಪಾರು

ಡಾ. ಮನಮೋಹನಸಿಂಗ್ ಅವರ ಶೈಕ್ಷಣಿಕ ಜ್ಞಾನ ಅವರು ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಹಾಗೂ ದೆಹಲಿಯ ಪ್ರತಿಷ್ಠಿತ ಆರ್ಥಿಕ ಶಾಲೆಯಲ್ಲಿ ಬೋಧಕರಾಗಿದ್ದರು. ಯು.ಎನ್.ಸಿ.ಟಿ.ಎ.ಡಿ. ಸಚಿವಾಲಯದಲ್ಲಿ ಅವರು ಕೆಲಕಾಲ ಸೇವೆ ಸಲ್ಲಿಸಿದ್ದರು. ಇದರ ಫಲವಾಗಿ 1987ರಿಂದ 1990ರ ವರೆಗೆ ಅವರನ್ನು ಜಿನೀವಾದಲ್ಲಿನ ದಕ್ಷಿಣ ಆಯೋಗಕ್ಕೆ ಮಹಾಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಲಾಗಿತ್ತು.
ಸ್ವತಂತ್ರ ಭಾರತದ ಆರ್ಥಿಕ ಇತಿಹಾಸದಲ್ಲಿ ಒಂದು ಮಹತ್ವದ ತಿರುವು ಪಡೆಯಿತು. 1991ರಿಂದ 1996ರ ವರೆಗೆ ಡಾ. ಸಿಂಗ್ ಅವರು ಭಾರತದ ಹಣಕಾಸು ಸಚಿವರಾಗಿ ಸೇವೆ ಸಲ್ಲಿಸಿದ್ದರು. ಅವರು ಆಗ ಮಾಡಿದ ಆರ್ಥಿಕ ಸುಧಾರಣೆಗಳಿಗೆ ಈಗಲೂ ವಿಶ್ವದ ಮನ್ನಣೆ ಇದೆ. ಜನಪ್ರಿಯದೃಷ್ಟಿಕೋನದಿಂದ ನೋಡುವುದಾದರೆ ಭಾರತದ ಅಂದಿನ ದಿನಗಳು ಡಾ. ಸಿಂಗ್ ಅವರ ವ್ಯಕ್ತಿತ್ವವನ್ನು ಬಿಂಬಿಸುತ್ತವೆ. ಡಾ. ಸಿಂಗ್ ಅವರು ಸಾಮಾಜಿಕ ಕ್ಷೇತ್ರದ ತಮ್ಮ ಅದ್ವಿತೀಯ ಸಾಧನೆಗಾಗಿ ಹತ್ತು ಹಲವು ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.
ಅವರ ಕೃತಿ ಭಾರತದ ರಫ್ತು ಸ್ಥಿತಿ ಮತ್ತು ಸ್ವಾವಲಂಬಿ ಸುಸ್ಥಿರ ಪ್ರಗತಿಯಲ್ಲಿ ಅದರ ಭವಿಷ್ಯ “India’s Export Trends and Prospects for Self-Sustained Growth” [Clarendon Press, Oxford, 1964] ಭಾರತದ ಆಂತರಿಕ ಆಧಾರಿತ ವ್ಯಾಪಾರ ನೀತಿಯ ಆರಂಭಿಕ ವಿಮರ್ಶೆಯಾಗಿತ್ತು.

ಪ್ರಮುಖ ಸುದ್ದಿ :-   ಬೆಟ್ಟಿಂಗ್ ಆ್ಯಪ್‌ ಪ್ರಚಾರ : ನಟರಾದ ರಾಣಾ ದಗ್ಗುಬಾಟಿ, ವಿಜಯ ದೇವರಕೊಂಡ, ಪ್ರಕಾಶರಾಜ ಸೇರಿ 25 ಸೆಲೆಬ್ರಿಟಿಗಳ ವಿರುದ್ಧ ಪ್ರಕರಣ ದಾಖಲು

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement