ಸಿದ್ದಾಪುರ: ಪಿಗ್ಮಿ ಸಂಗ್ರಹಿಸುತ್ತಿದ್ದ ಒಂಟಿ ವೃದ್ಧೆಯ ಮನೆಯ ಮೇಲ್ಛಾವಣಿಯ ಹೆಂಚು ತೆಗೆದು ಒಳ ನುಗ್ಗಿ ಆಕೆಯ ಕತ್ತು ಹಿಸುಕಿ ಕೊಲೆ ಮಾಡಿ ಹಣ ದೋಚಿಕೊಂಡು ಹೋದ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ನಗರದ ಸೊರಬ ರಸ್ತೆಯ ಬಸವನಗಲ್ಲಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಎರಡ್ಮೂರು ದಿನಗಳ ನಂತರ ಘಟನೆ ಬೆಳಕಿಗೆ ಬಂದಿದೆ. ಸಹಕಾರಿ ಬ್ಯಾಂಕ್ ಒಂದರ ಪಿಗ್ಮಿ ಕಲೆಕ್ಟರ್ ಆಗಿ ಕೆಲಸ ಮಾಡುತ್ತಿದ್ದ ವೃದ್ಧೆ ಗೀತಾ ಹೂಂಡೆಕರ್ (72) ಎಂಬವರು ಪ್ರತಿ ನಿತ್ಯ ಐದರಿಂದ ಹತ್ತು ಸಾವಿರ ರೂಪಾಯಿ ವರೆಗೆ ಪಿಗ್ಮಿ ಸಂಗ್ರಹ ಮಾಡುತ್ತಿದ್ದರು. ಅವರಿಗೆ ಇಬ್ಬರು ಹೆಣ್ಮಕ್ಕಳಿದ್ದು, ಮದುವೆಯಾಗಿದೆ. ಪತಿ ಮೃತಪಟ್ಟ ನಂತರ ಕೆಲ ವರ್ಷಗಳಿಂದ ಮನೆಯಲ್ಲಿ ಒಬ್ಬಂಟಿಯಾಗಿ ವಾಸಿಸುತ್ತಿದ್ದರು. ಸೋಮವಾರ ರಾತ್ರಿ ಪಿಗ್ಮಿ ಸಂಹ್ರಹಿಸಿ ಮನೆಯ ಒಳಗೆ ಹೋದವಳು ಹೊರಗೆ ಬಂದಿರಲಿಲ್ಲ.
ಇದರಿಂದ ಅನುಮಾನಗೊಂಡ ಅಕ್ಕಪಕ್ಕದವರು ಅವರ ಮಗಳಿಗೆ ತಿಳಿಸಿದ್ದಾರೆ. ನಂತರ ಮಗಳು ಮತ್ತು ಅಳಿಯ ಮನೆಗೆ ಆಗಮಿಸಿ ಮನೆಬಾಗಿಲು ಒಡೆದು ನೋಡಿದಾಗ ಕೊಲೆಯಾದ ಘಟನೆ ಬೆಳಕಿಗೆ ಬಂದಿದೆ. ಕಳ್ಳರು ರಾತ್ರಿ ಹೊತ್ತು ಮನೆಯ ಮೇಲ್ಛಾವಣಿಯಿಂದ ಮನೆಗೆ ನುಗ್ಗಿ ಕತ್ತು ಹಿಸುಕಿ ಕೊಲೆ ಮಾಡಿ ಮನೆಯಲ್ಲಿದ್ದ ಪಿಗ್ಮಿ ಹಣವನ್ನು ಕದ್ದೊಯ್ದಿದ್ದಾರೆ. ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ