ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಅವರನ್ನು ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. 92 ವರ್ಷದ ಮಾಜಿ ಪ್ರಧಾನಿ ಮನಮೋಹನ ಸಿಂಗ್ ಅವರನ್ನು ರಾತ್ರಿ 8 ಗಂಟೆ ಸುಮಾರಿಗೆ ಆಸ್ಪತ್ರೆಯ ತುರ್ತು ಘಟಕಕ್ಕೆ ದಾಖಲಿಸಲಾಯಿತು ಎಂದು ಹೇಳಲಾಗಿದೆ.
ಅವರನ್ನು ಆಸ್ಪತ್ರೆಗೆ ದಾಖಲಿಸಿದ ಕಾರಣ ತಕ್ಷಣವೇ ತಿಳಿದುಬಂದಿಲ್ಲ. ಅವರ ಕುಟುಂಬ ಮತ್ತು ಹಿರಿಯ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಆಸ್ಪತ್ರೆಗೆ ತಲುಪಿದ್ದಾರೆ.
ಮನಮೋಹನ್ ಸಿಂಗ್ ಅವರು 1991-96ರ ಅವಧಿಯಲ್ಲಿ ಪಿ.ವಿ. ನರಸಿಂಹರಾವ್ ನೇತೃತ್ವದ ಸರ್ಕಾರದಲ್ಲಿ ದೇಶದ ಹಣಕಾಸು ಸಚಿವರಾಗಿ ಪ್ರಾಮುಖ್ಯತೆಯನ್ನು ಗಳಿಸಿದರು, ಆರ್ಥಿಕತೆ ವೇಗ ಹೆಚ್ಚಿಸುವ ನಿಟ್ಟಿನಲ್ಲಿ ವ್ಯಾಪಕ ಸುಧಾರಣೆಗಳನ್ನು ತಂದರು. ಯುಪಿಎಯ ಎರಡು ಅವಧಿಯ ಪ್ರಧಾನಿಯಾಗಿ, ಅವರು 2004ರಿಂದ 2014 ರಿಂದ ಪ್ರಧಾನಿಯಾಗಿದ್ದರು. ಈ ವರ್ಷದ ಆರಂಭದವರೆಗೆ ರಾಜ್ಯಸಭೆಯ ಸದಸ್ಯರಾಗಿದ್ದರು. ಅವರು ಏಪ್ರಿಲ್‌ನಲ್ಲಿ ರಾಜ್ಯಸಭೆಯಿಂದ ನಿವೃತ್ತರಾದರು.
ನಿಮ್ಮ ಕಾಮೆಂಟ್ ಬರೆಯಿರಿ