ವೇದಿಕೆಯಿಂದ ಕೆಳಗೆ ಬಿದ್ದು ಗಾಯಗೊಂಡ ಕಾಂಗ್ರೆಸ್‌ ಶಾಸಕಿ ಸ್ಥಿತಿ ಗಂಭೀರ

ಕೊಚ್ಚಿ: ಕಾರ್ಯಕ್ರಮದ ವೇದಿಕೆಯಿಂದ ಕೆಳಗೆ ಬಿದ್ದು ಕಾಂಗ್ರೆಸ್‌ ಶಾಸಕಿಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಕೇರಳದ ಕೊಚ್ಚಿ ಜವಾಹರ್​ಲಾಲ್ ನೆಹರು ಸ್ಟೇಡಿಯಂನಲ್ಲಿ ನಡೆದಿದೆ. ಶಾಸಕಿ ಉಮಾಥಾಮಸ್ ಅವರು ಗಂಭೀರ ಸ್ಥಿತಿಯಲ್ಲಿದ್ದು, ಅವರಿಗೆ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಕೊಚ್ಚಿಯ ಜವಾಹರ್​ಲಾಲ್ ನೆಹರು ಸ್ಟೇಡಿಯಂನಲ್ಲಿ ನಡೆಯುತ್ತಿದ್ದ ಸಾಂಸ್ಕೃತಿಕ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ಕಾಂಗ್ರೆಸ್​ ಶಾಸಕಿ ಉಮಾ ಥಾಮಸ್ ಅಲ್ಲಿಂದ ಕೆಳಗೆ ಬಿದ್ದಿದ್ದು, ಗಂಭೀರವಾಗಿ ಗಾಯಗೊಂಡ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತು, ವೆಂಟಿಲೇಟರ್​ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವೇ
ವೇದಿಕೆಯಲ್ಲಿ ನೃತ್ಯ ಪ್ರದರ್ಶನ ನಡೆಯುತ್ತಿತ್ತು. ಸಂಸ್ಕೃತಿ ಸಚಿವ ಸಾಜಿ ಚೆರಿಯನ್ ಅವರನ್ನು ಸ್ವಾಗತಿಸಿದ ನಂತರ, ಶಾಸಕಿ ಥಾಮಸ್ ವಿಐಪಿ ಪೆವಿಲಿಯನ್‌ನಲ್ಲಿ ತಮ್ಮ ಆಸನದ ಕಡೆಗೆ ಹೋಗುತ್ತಿದ್ದರು. ಈ ವೇಳೆ ಬ್ಯಾರಿಕೇಡ್‌ಗೆ ಡಿಕ್ಕಿ ಹೊಡೆದು ವೇದಿಕೆಯಿಂದ 15 ಅಡಿ ಕೆಳಗೆ ಬಿದ್ದಿದ್ದಾರೆ. ಸ್ಥಳದಲ್ಲಿದ್ದ ವೈದ್ಯಕೀಯ ತಂಡ ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ದಿದೆ. ಆಸ್ಪತ್ರೆಯ ಅಧಿಕಾರಿಗಳ ಪ್ರಕಾರ ಅವರ ಸ್ಥಿತಿ ಚಿಂತಾಜನಕವಾಗಿದೆ. ಉಮಾ ತಲೆಗೆ ಗಾಯವಾಗಿದ್ದು, ಮೂಳೆ ಮುರಿತಗಳಾಗಿವೆ. ಮುಂದಿನ 24 ಗಂಟೆಗಳ ಕಾಲ ಅವರನ್ನು ನಿಗಾ ಇಡಬೇಕಾಗಿದೆ. ನಾವು ಎಲ್ಲಾ ವೈದ್ಯಕೀಯ ನೆರವು ನೀಡುತ್ತಿದ್ದೇವೆ ಎಂದು ಕಾಂಗ್ರೆಸ್ ನಾಯಕ ವಿ.ಡಿ. ಸತೀಶನ್ ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಕರ್ನಾಟಕ ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ ಪ್ರಮಾಣ ವಚನ, 13 ಸಚಿವರಿಂದಲೂ ಪ್ರಮಾಣವಚನ ಸ್ವೀಕಾರ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement