ಮುಂಬೈ : ಮುಂಬೈ-ನಾಗ್ಪುರ ಸಮೃದ್ಧಿ ಹೆದ್ದಾರಿಯಲ್ಲಿ ರಸ್ತೆ ಮೇಲೆ ಬಿದ್ದ ಕಬ್ಬಿಣದ ಬೋರ್ಡ್ ಮೇಲೆ ಹಾದುಹೋದ ನಂತರ 50 ಕ್ಕೂ ಹೆಚ್ಚು ವಾಹನಗಳು ಪಂಕ್ಚರ್ ಆದ ಘಟನೆ ನಡೆದಿದ್ದು, ಇದರಿಂದ ಹೆದ್ದಾರಿಯಲ್ಲಿ ಸುದೀರ್ಘ ಟ್ರಾಫಿಕ್ ಜಾಮ್ ಉಂಟಾಗಿತ್ತು ಎಂದು ವರದಿಯಾಗಿದೆ.
ವರದಿಯೊಂದರ ಪ್ರಕಾರ, ಡಿಸೆಂಬರ್ 29 ರಂದು ರಾತ್ರಿ 10 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ವಾಶಿಮ್ ಜಿಲ್ಲೆಯ ಮಾಲೆಗಾಂವ್ ಮತ್ತು ವನೋಜಾ ಟೋಲ್ ಪ್ಲಾಜಾ ನಡುವೆ ಡಿಸೆಂಬರ್ 29 ರಂದು ರಾತ್ರಿ 10 ಗಂಟೆಯ ಸುಮಾರಿಗೆ ಈ ಘಟನೆ ಸಂಭವಿಸಿದ್ದು, ನಾಲ್ಕು ಚಕ್ರದ ವಾಹನಗಳು ಮತ್ತು ಸರಕು ಟ್ರಕ್ಗಳ ಮೇಲೆ ಇದು ಪರಿಣಾಮ ಬೀರಿತು. ಇದರಿಂದ ಹೆದ್ದಾರಿಯಲ್ಲಿ ಸುದೀರ್ಘ ಟ್ರಾಫಿಕ್ ಜಾಮ್ ಉಂಟಾಗಿತ್ತು.
ಬಹಳ ಸಮಯದಿಂದ ಯಾವುದೇ ಈ ಬಗ್ಗೆ ಯಾವುದೇ ಸಹಾಯ ಸಹಕಾರ ಸಿಗದ ಕಾರಣ ಪ್ರಯಾಣಿಕರು ರಾತ್ರಿಯಿಡೀ ಹೆದ್ದಾರಿಯಲ್ಲಿ ಸಿಲುಕಿಕೊಂಡರು. ಆಕಸ್ಮಿಕವಾಗಿ ಬೋರ್ಡ್ ಬಿದ್ದಿದೆಯೇ ಅಥವಾ ಉದ್ದೇಶಪೂರ್ವಕವಾಗಿ ಾದನ್ನು ಎಸೆಯಲಾಗಿದೆಯೇ ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ.
ಹೈಸ್ಪೀಡ್ ಕಾರಿಡಾರ್ನಲ್ಲಿನ ಸುರಕ್ಷತೆ ಬಗ್ಗೆ ಪ್ರಶ್ನಾಗಳು ಎದ್ದಿರುವ ಸಮಯದಲ್ಲಿ ಈ ಘಟನೆ ನಡೆದಿದೆ. ಜೂನ್ನಲ್ಲಿ, ಜಲ್ನಾ ಜಿಲ್ಲೆಯ ಸಮೃದ್ಧಿ ಹೆದ್ದಾರಿಯ ಕಡ್ವಾಂಚಿ ಗ್ರಾಮದ ಬಳಿ ಸಮೃದ್ಧಿ ಮಹಾಮಾರ್ಗದಲ್ಲಿ ಎರಡು ಕಾರುಗಳ ನಡುವೆ ಡಿಕ್ಕಿ ಸಂಭವಿಸಿ ಕನಿಷ್ಠ ಆರು ಜನರು ಸಾವಿಗೀಡಾಗಿದ್ದರು ಮತ್ತು ನಾಲ್ವರು ಗಾಯಗೊಂಡಿದ್ದರು.
ಸಮೃದ್ಧಿ ಮಹಾಮಾರ್ಗವು ಮಹಾರಾಷ್ಟ್ರದಲ್ಲಿ ಆರು-ಲೇನ್ ಮತ್ತು 701-ಕಿಮೀ ಉದ್ದದ ಪ್ರವೇಶ-ನಿಯಂತ್ರಿತ ಎಕ್ಸ್ಪ್ರೆಸ್ವೇ ಆಗಿದೆ. ಇದು ಮುಂಬೈ ಮತ್ತು ರಾಜ್ಯದ ಮೂರನೇ ಅತಿ ದೊಡ್ಡ ನಗರ ನಾಗ್ಪುರವನ್ನು ಸಂಪರ್ಕಿಸುವ ದೇಶದ ಅತಿ ಉದ್ದದ ಗ್ರೀನ್ಫೀಲ್ಡ್ ರಸ್ತೆ ಯೋಜನೆಗಳಲ್ಲಿ ಒಂದಾಗಿದೆ. 55,000 ಕೋಟಿ ವೆಚ್ಚದಲ್ಲಿ ಇದನ್ನು ನಿರ್ಮಿಸಲಾಗಿದೆ.


ನಿಮ್ಮ ಕಾಮೆಂಟ್ ಬರೆಯಿರಿ