ಹುಬ್ಬಳ್ಳಿ ಗ್ಯಾಸ್ ಸಿಲಿಂಡರ್ ಸ್ಫೋಟ | ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಸಾವು ; ಮೃತರ ಸಂಖ್ಯೆ 8ಕ್ಕೆ ಏರಿಕೆ

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕೆಲವು ದಿನಗಳ ಹಿಂದೆ ಸಂಭವಿಸಿದ ಭೀಕರ ಸಿಲಿಂಡರ್ ಸ್ಫೋಟದಲ್ಲಿ ಗಂಭೀರವಾಗಿ (Gas Cylinder Blast) ಗಾಯಗೊಂಡಿದ್ದ ಮತ್ತೊಬ್ಬರು ಮಂಗಳವಾರ ಬೆಳಗ್ಗೆ ಮೃತಪಟ್ಟಿದ್ದು, ಈ ಘಟನೆಯಿಂದ ಮೃತಪಟ್ಟವರ ಸಂಖ್ಯೆ 8ಕ್ಕೆ ಏರಿದೆ.
ಸಿಲಿಂಡರ್ ಸ್ಫೋಟದಿಂದ ಒಂಬತ್ತು ಮಂದಿ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಚಿಕಿತ್ಸೆ ಫಲಿಸದೆ ಒಬ್ಬೊಬ್ಬರೇ ಮೃತಪಟ್ಟಿದ್ದರು. ಮಂಗಳವಾರ ಗಂಭೀರವಾಗಿ ಗಾಯಗೊಂಡಿದ್ದ ಪ್ರಕಾಶ ಬಾರಕೇರ (42) ಕಿಮ್ಸ್​​ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮೃತ ಪ್ರಕಾಶ ಬಾರಕೇರ, ಹುಬ್ಬಳ್ಳಿಯ ಉಣಕಲ್ ನಿವಾಸಿಯಾಗಿದ್ದಾರೆ.
ಸೋಮವಾರ ರಾತ್ರಿಯಷ್ಟೇ ಅಯ್ಯಪ್ಪ ಮಾಲಾಧಾರಿ ತೇಜಸ್ವರ್ (27)​​ ಮೃತಪಟ್ಟಿದ್ದರು. ಇದರೊಂದಿಗೆ ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ. 9 ಗಾಯಾಳುಗಳ ಪೈಕಿ ಕಿಮ್ಸ್​​ನಲ್ಲಿ ಓರ್ವ ಗಾಯಾಳುವಿಗೆ ಚಿಕಿತ್ಸೆ ಮುಂದುವರಿದಿದೆ.
ಹುಬ್ಬಳ್ಳಿಯ ಅಚ್ಚವ್ವನ ಕಾಲೋನಿಯ ಅಯ್ಯಪ್ಪನ ಸನ್ನಿಧಿಯಲ್ಲಿ ಡಿಸೆಂಬರ್ 22ರಂದು ಸಂಭವಿಸಿದ್ದ ಭೀಕರ ಸಿಲಿಂಡರ್ ಸ್ಫೋಟ ಎಲ್ಲರನ್ನೂ ಬೆಚ್ಚಿಬೀಳಿಸಿದೆ. 9 ಮಂದಿ ಅಯ್ಯಪ್ಪ ಮಾಲಾಧಾರಿಗಳು ಬೆಂಕಿಯಲ್ಲಿ ಬೆಂದು ಕಿಮ್ಸ್​ ಆಸ್ಪತ್ರೆ ಸೇರಿದ್ದರು. ತಜ್ಞ ವೈದ್ಯರಿಂದ ಚಿಕಿತ್ಸೆ ಕೊಡಿಸಿದರೂ ಗಾಯಾಳುಗಳನ್ನು ಉಳಿಸಿಕೊಳ್ಳಲು ಆಗಿಲ್ಲ. ಇದೀಗ ಒಬ್ಬ ಗಾಯಾಳು ಮಾತ್ರ ಬದುಕುಳಿದಿದ್ದಾರೆ. ಅವರಿಗೆ ಚಿಕಿತ್ಸೆ ಮುಂದುವರಿದಿದೆ. ಈ ಘಟನೆಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಾಗಲೇ 2 ಲಕ್ಷ ರೂ ಪರಿಹಾರ ಘೋಷಿಸಿದ್ದಾರೆ.

ಪ್ರಮುಖ ಸುದ್ದಿ :-   ವೀಡಿಯೊ..| ಆಡಳಿತ ಸಂಪೂರ್ಣ ವಿಫಲ ; ಬಿ.ಆರ್.​ ಪಾಟೀಲ ಬೆನ್ನಲ್ಲೇ ತಮ್ಮ ಸರ್ಕಾರದ ವಿರುದ್ಧವೇ ಸಿಡಿದೆದ್ದ ಮತ್ತೊಬ್ಬ ಕಾಂಗ್ರೆಸ್ ಶಾಸಕ ; ರಾಜೀನಾಮೆ ಮಾತು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement