ಲಕ್ನೋ: ತಮ್ಮ ಶಾಲೆಯಲ್ಲಿ ಓದುತ್ತಿರುವ ಒಂದೇ ಹುಡುಗನನ್ನು ತಾವಿಬ್ಬರೂ ಇಷ್ಟಪಡುತ್ತಿದ್ದೇವೆ ಎಂದು ತಿಳಿದ ನಂತರ ಇಬ್ಬರು ಹದಿಹರೆಯದ ಹುಡುಗಿಯರು ಜನನಿಬಿಡ ರಸ್ತೆಯಲ್ಲಿ ಪರಸ್ಪರ ಹೊಡೆದಾಡಿಕೊಂಡ ಘಟನೆ ಉತ್ತರ ಪ್ರದೇಶದ ಬಾಗ್‌ಪತ್‌ನಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಮಂಗಳವಾರ ಸಿಂಘ್ವಾಲಿ ಪೊಲೀಸ್ ಠಾಣೆ ವ್ಯಾಪ್ತಿಯ ಅಮೀನಗರ್ ಸರಾಯ್ ಟೌನ್‌ನಲ್ಲಿ ನಡೆದ ಈ ಘಟನೆಯ ವೀಡಿಯೊ ವೈರಲ್ ಆಗಿದೆ. ಈ ಘಟನೆ ಬಗ್ಗೆ ವಿವರವಾದ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ವೀಡಿಯೊದಲ್ಲಿ 10 ನೇ ತರಗತಿಯ ಹುಡುಗಿಯರಿಬ್ಬರೂ ಶಾಲಾ ಸಮವಸ್ತ್ರವನ್ನು ಧರಿಸಿ, ಹಿಂಸಾತ್ಮಕ ಜಗಳದಲ್ಲಿ ತೊಡಗಿರುವುದು ಕಂಡುಬಂದಿದೆ.
ಪರಸ್ಪರ ಗುದ್ದುವುದು, ಒದೆಯುವುದು ಮತ್ತು ಕೂದಲು ಹಿಡಿದು ಎಳೆಯುವುದು ಕಂಡುಬಂದಿದೆ. ಇತರ ವಿದ್ಯಾರ್ಥಿಗಳು ಮತ್ತು ದಾರಿಹೋಕರು ಮಧ್ಯಪ್ರವೇಶಿಸಿ ಅವರನ್ನು ಬೇರ್ಪಡಿಸಲು ಪ್ರಯತ್ನಿಸಿದ್ದಾರೆ.
ವರದಿಗಳ ಪ್ರಕಾರ, ಇಬ್ಬರು ಹುಡುಗಿಯರು ತಮ್ಮ ಶಾಲೆಯಲ್ಲಿ ಓದುತ್ತಿದ್ದ ಹುಡುಗನನ್ನು ಇಷ್ಟಪಟ್ಟಿದ್ದಾರೆ. ಅವರು ಹುಡುಗನೊಂದಿಗೆ ನಿಯಮಿತವಾಗಿ ಮಾತನಾಡುತ್ತಿದ್ದರು ಮತ್ತು ತಾವಿಬ್ಬರೂ ಒಂದೇ ಹುಡುಗನನ್ನು ಇಷ್ಟಪಡುತ್ತೇವೆ ಎಂದು ತಿಳಿದಾಗ ಅವರು ಶಾಲೆಯ ಹೊರಗೆ ಜಗಳವಾಡಿಕೊಂಡರು.
ಈ ವೀಡಿಯೊವನ್ನು ಗಮನದಲ್ಲಿಟ್ಟುಕೊಂಡು ಘಟನೆಯ ಕುರಿತು ತನಿಖೆ ನಡೆಸುವುದಾಗಿ ಪೊಲೀಸರು ತಿಳಿಸಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ