ವಿಜಯಪುರ: ಕೃಷಿ ಹೊಂಡಕ್ಕೆ ಆಕಸ್ಮಿಕವಾಗಿ ಬಿದ್ದು ತಾಯಿ ಮತ್ತು ಗಂಡು ಮಕ್ಕಳಿಬ್ಬರು ಸಾವಿಗೀಡಾದ ಘಟನೆ ವಿಜಯಪುರ (vijayapura ) ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಹರನಾಳ ಬಳಿ ನಡೆದಿದೆ ಎಂದು ವರದಿಯಾಗಿದೆ.
ಮೃತರನ್ನು ಗೀತಾ ಬಡಗಿ (28), ಮಕ್ಕಳಾದ ಶ್ರವಣ (6) ಮತ್ತು ಶರಣ (4) ಎಂದು ಗುರುತಿಸಲಾಗಿದೆ. ಗೀತಾ ತಂದೆ ರಾಮಪ್ಪ ನಾಯ್ಕೋಡಿಗೆ ಸೇರಿದ ಜಮೀನಿನಲ್ಲಿ ಘಟನೆ ನಡೆದಿದೆ ಎಂದು ಹೇಳಲಾಗಿದೆ. ಗೀತಾ ತನ್ನ ತಂದೆ ಮನೆಗೆ ಬಂದಿದ್ದಾಗ ಈ ಘಟನೆ ನಡೆದಿದೆ. ಮಕ್ಕಳ ಜತೆ ಕೃಷಿ ಹೊಂಡದ ಬಳಿ ಹೋಗಿದ್ದಾಗ ಕಾಲುಜಾರಿ ಬಿದ್ದು ಮೃತಪಟ್ಟಿದ್ದಾರೆ ಎನ್ನಲಾಗಿದೆ. ತಾಯಿ ಮತ್ತು ಗಂಡು ಮಕ್ಕಳಿಬ್ಬರ ಮೃತದೇಹಗಳನ್ನು ಸ್ಥಳೀಯರು ಕೃಷಿ ಹೊಂಡದಿಂದ ಹೊರಕ್ಕೆ ತೆಗೆದಿದ್ದಾರೆ. ದೇವರಹಿಪ್ಪರಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ನಿಮ್ಮ ಕಾಮೆಂಟ್ ಬರೆಯಿರಿ