ತುಮಕೂರು | ಪೊಲೀಸ್ ಠಾಣೆಯಲ್ಲಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ : ಡಿವೈಎಸ್ಪಿ ಬಂಧನ

ತುಮಕೂರು: ದೂರು ನೀಡಲು ಬಂದ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಸೇವೆಯಿಂದ ಅಮಾನತುಗೊಂಡಿರುವ ತುಮಕೂರು ಜಿಲ್ಲೆ ಮಧುಗಿರಿ ಉಪ ವಿಭಾಗದ ಡಿವೈಎಸ್‌ಪಿ ರಾಮಚಂದ್ರಪ್ಪ ಅವರನ್ನು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ದೂರು ನೀಡಲು ಬಂದ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯದ ಎಸಗಿದ್ದು ಎನ್ನಲಾದ ವೀಡಿಯೊ ವೈರಲ್ ಆಗುತ್ತಿದ್ದಂತೆಯೇ ರಾಮಚಂದ್ರಪ್ಪ ಅವರನ್ನು ಅಮಾನತು ಮಾಡಿ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ ಅವರು ಆದೇಶ ಹೊರಡಿಸಿದ್ದರು. ಇದರ ಬೆನ್ನಲ್ಲೇ ಇದೀಗ ಡಿವೈಎಸ್‌ಪಿ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಮಹಿಳೆ ನೀಡಿದ ದೂರಿನ ಮೇರೆಗೆ ಮಧುಗಿರಿ ಪೊಲೀಸ್ ಠಾಣೆಯಲ್ಲಿ ಸೆಕ್ಸನ್ 68, 75, 79 ಅತ್ಯಾಚಾರ ಪ್ರಕರಣ ದಾಖಲಾಗಿದ್ದು, ಮಧುಗಿರಿ ಉಪವಿಭಾಗ ಡಿವೈಎಸ್ ಪಿ ರಾಮಚಂದ್ರಪ್ಪ ಅವರನ್ನು ಬಂಧಿಸಲಾಗಿದೆ.

ಜಮೀನು ವ್ಯಾಜ್ಯದ ಬಗ್ಗೆ ಪಾವಗಡ ಮೂಲದ ಮಹಿಳೆಯೊಬ್ಬರು ದೂರು ನೀಡಿದ್ದರು. ಈ ಸಂಬಂಧ ವಿಚಾರಿಸುವ ಸಲುವಾಗಿ ಮಹಿಳೆಯನ್ನು ಪೊಲೀಸ್ ಠಾಣೆಗೆ ಕರೆಯಿಸಿದ ರಾಮಚಂದ್ರಪ್ಪ, ಆಕೆಯನ್ನು ತನ್ನ ಕಚೇರಿಯ ಶೌಚಾಲಯದ ಬಳಿ ಕರೆದುಕೊಂಡು ಲೈಂಗಿಕ ದೌರ್ಜನ್ಯ ಎಸಗಿದ್ದರು ಎಂದು ಆರೋಪಿಸಲಾಗಿದೆ. ವ್ಯಕ್ತಿಯೊಬ್ಬರು ಇದನ್ನು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದು, ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

ಪ್ರಮುಖ ಸುದ್ದಿ :-   ಏರ್ ಇಂಡಿಯಾ ವಿಮಾನದಲ್ಲಿ 7 ಮಂದಿ ಅಸ್ವಸ್ಥ

4.7 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement