ತರಬೇತಿ ವೇಳೆ ಕರಾವಳಿ ಪಡೆಯ ಹೆಲಿಕಾಪ್ಟರ್‌ ಪತನ; ಮೂವರು ಸಾವು

ಪೋರಬಂದರ್‌ : ತರಬೇತಿ ಹಾರಾಟ ನಡೆಸುತ್ತಿದ್ದಾಗ ಭಾರತೀಯ ಕೋಸ್ಟ್ ಗಾರ್ಡ್ ಎಎಲ್ ಎಚ್ ಧ್ರುವ ಹೆಲಿಕಾಪ್ಟರ್ ಭಾನುವಾರ ಗುಜರಾತಿನ ಪೋರಬಂದರ್‌ನಲ್ಲಿ ಅಪಘಾತಕ್ಕೀಡಾಗಿದ್ದು, ಅದರಲ್ಲಿದ್ದ ಮೂವರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ.
ಹೆಲಿಕಾಪ್ಟರ್‌ನಲ್ಲಿ ಇಬ್ಬರು ಪೈಲಟ್‌ಗಳು ಸೇರಿದಂತೆ ಮೂವರು ಸಿಬ್ಬಂದಿ ಇದ್ದರು. ಘಟನೆಯಲ್ಲಿ ಮೂವರೂ ಪ್ರಾಣ ಕಳೆದುಕೊಂಡಿದ್ದಾರೆ’’ ಎಂದು ಕೋಸ್ಟ್ ಗಾರ್ಡ್ ಅಧಿಕಾರಿಗಳು ಸುದ್ದಿ ಸಂಸ್ಥೆಗಳಿಗೆ ತಿಳಿಸಿದ್ದಾರೆ. ಈ ಘಟನೆ ಮಧ್ಯಾಹ್ನ 12:10ಕ್ಕೆ ನಡೆದಿದೆ ಎಂದು ಪೋರಬಂದರ್ ಪೊಲೀಸ್ ವರಿಷ್ಠಾಧಿಕಾರಿ ಭಗೀರಥಸಿಂಗ್ ಜಡೇಜಾ ಸುದ್ದಿ ಸಂಸ್ಥೆಗಳಿಗೆ ತಿಳಿಸಿದ್ದಾರೆ.
ಸಿಬ್ಬಂದಿಯನ್ನು ಹೆಲಿಕಾಪ್ಟರ್‌ನಿಂದ ಹೊರತೆಗೆದು ತೀವ್ರವಾಗಿ ಸುಟ್ಟ ಸ್ಥಿತಿಯಲ್ಲಿ ಪೋರಬಂದರ್‌ನ ಭಾವಸಿಂಹಜಿ ಸಿವಿಲ್ ಆಸ್ಪತ್ರೆಗೆ ಸಾಗಿಸಲಾಯಿತು. ಮೂವರು ಸಿಬ್ಬಂದಿಗಳು ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾರೆ ಎಂದು ಕಮಲಾ ಬಾಗ್ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ರಾಜೇಶ್ ಕಾನ್ಮಿಯಾ ತಿಳಿಸಿದ್ದಾರೆ.
ಸಶಸ್ತ್ರ ಪಡೆಗಳಿಂದ ನಿರ್ವಹಿಸಲ್ಪಡುವ ಎಎಲ್ ಎಚ್ ಧ್ರುವ, ತೆರೆದ ಮೈದಾನದಲ್ಲಿ ಬಿತ್ತು ಮತ್ತು ಬೆಂಕಿ ಹೊತ್ತಿಕೊಂಡಿತು. ಅಪಘಾತದ ಹಿಂದಿನ ಕಾರಣ ಇನ್ನೂ ತಿಳಿದುಬಂದಿಲ್ಲ ಮತ್ತು ತನಿಖೆಯನ್ನು ಪ್ರಾರಂಭಿಸಲಾಗಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement