ಬೆಂಗಳೂರಿನ ಇಬ್ಬರು ಮಕ್ಕಳಲ್ಲಿ ಎಚ್‌ಎಂಪಿ ವೈರಸ್‌ ಸೋಂಕು ಪತ್ತೆ ; ಮಾರ್ಗಸೂಚಿ ಪ್ರಕಟಿಸಿದ ಸರ್ಕಾರ

ಬೆಂಗಳೂರು: ಚೀನಾದಲ್ಲಿ ಹರಡುತ್ತಿರುವ ಹ್ಯೂಮನ್ ಮೆಟಾನ್ಯೂಮೋ ವೈರಸ್ (HMPV virus) ಸೋಂಕು ಭಾರತಕ್ಕೂ ಕಾಲಿಟ್ಟಿದೆ. ಬೆಂಗಳೂರಿನ ಇಬ್ಬರು ಮಕ್ಕಳಲ್ಲಿ ಎಚ್‌ಎಂಪಿವಿ ಸೋಂಕು ಪತ್ತೆಯಾಗಿದ್ದು, ಈ ಬಗ್ಗೆ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ದೃಢಪಡಿಸಿದೆ.
3 ತಿಂಗಳ ಶಿಶು ಹಾಗೂ 8 ತಿಂಗಳ ಶಿಶುವಿನಲ್ಲಿ ಎಚ್‌ಎಂಪಿವಿ ಸೋಂಕು ಪತ್ತೆಯಾಗಿದ್ದುಸೂಕ್ತ ಚಿಕಿತ್ಸೆ ನಂತರ ಮೂರು ತಿಂಗಳ ಶಿಶುವನ್ನು ಮಗುವನ್ನು ಡಿಸ್ಚಾರ್ಜ್‌ ಮಾಡಲಾಗಿದೆ ಎಂದು ವರದಿಯಾಗಿದೆ. ಈ ಬಗ್ಗೆ ಭಯಪಡುವ ಅಗತ್ಯವಿಲ್ಲ ಎಂದು ತಜ್ಞರು ತಿಳಿಸಿದ್ದಾರೆ. ಏಕೆಂದರೆ ಈ ವೈರಸ್ ಕೋವಿಡ್-19 ರಂತೆ ಹರಡುವುದಿಲ್ಲ ಎಂದು ಸೋಮವಾರ ರಾಜ್ಯ ಸರ್ಕಾರ ತಿಳಿಸಿದೆ.
ಏತನ್ಮಧ್ಯೆ ಸರ್ಕಾರ ಸೋಂಕು ಹರಡುವುದನ್ನು ಮೊದಲೇ ತಡೆಗಟ್ಟುವ ನಿಟ್ಟಿನಲ್ಲಿ ಮಾರ್ಗಸೂಚಿಯನ್ನು ಪ್ರಕಟಿಸಿದೆ.
ಮಾರ್ಗಸೂಚಿಗಳು…
ಕೆಮ್ಮುವಾಗ ಅಥವಾ ಸೀನುವಾಗ ನಿಮ್ಮ ಬಾಯಿ ಮತ್ತು ಮೂಗನ್ನು ಕರವಸ್ತ್ರ ಅಥವಾ ಟಿಶ್ಯೂ ಪೇಪರ್‌ನಿಂದ ಮುಚ್ಚಿಕೊಳ್ಳಬೇಕು.
ಕೈಗಳನ್ನು ಸಾಬೂನು ಮತ್ತು ನೀರು ಅಥವಾ ಆಲ್ಕೋಹಾಲ್ ಆಧಾರಿತ ಸ್ಯಾನಿಟೈಜರ್‌ನಿಂದ ತೊಳೆಯಬೇಕು.
ಜನಸಂದಣಿ ಇರುವ ಸ್ಥಳಗಳಿಗೆ ಹೋಗುವುದರಿಂದ ದೂರವಿರಬೇಕು.
ಜ್ವರ, ಕೆಮ್ಮು ಮತ್ತು ಸೀನುವಿಕೆ ಇದ್ದಲ್ಲಿ ಸಾರ್ವಜನಿಕ ಸ್ಥಳಗಳಿಗೆ ಹೋಗುವುದು ಬೇಡ. ಮನೆಯಲ್ಲಿಯೇ ಇರಿ ಮತ್ತು ಅನಾರೋಗ್ಯದಿಂದ ಬಳಲುತ್ತಿದ್ದರೆ ಇತರರೊಂದಿಗೆ ಸಂಪರ್ಕವನ್ನು ಮಿತಿಗೊಳಿಸಬೇಕು.
ಸಾಕಷ್ಟು ನೀರು ಕುಡಿಯಬೇಕು ಮತ್ತು ಪೌಷ್ಟಿಕ ಆಹಾರವನ್ನು ಸೇವಿಸಬೇಕು,
ವೈರಸ್‌ ಹರಡುವಿಕೆ ತಡೆಯಲು ಏನು ಮಾಡಬಾರದು?
ಟಿಶ್ಯೂ ಪೇಪರ್ ಮತ್ತು ಕೈ ಕರ್ಚೀಫ್ ಮರುಬಳಕೆ ಮಾಡಬೇಡಿ
ಸೋಂಕಿನ ಲಕ್ಷಣ ಇರುವವರೊಂದಿಗೆ ನಿಕಟ ಸಂಪರ್ಕ ಬೇಡ, ಟವೆಲ್‌, ಬಟ್ಟೆ ಇತ್ಯಾದಿಗಳನ್ನು ಹಂಚಿಕೊಳ್ಳಬೇಡಿ
ಕಣ್ಣು, ಮೂಗು ಮತ್ತು ಬಾಯಿಯನ್ನು ಆಗಾಗ್ಗೆ ಸ್ಪರ್ಶಿಸುವುದು ಬೇಡ
ಸಾರ್ವಜನಿಕ ಸ್ಥಳಗಳಲ್ಲಿ ಉಗುಳದಿರಿ
ವೈದ್ಯರನ್ನು ಸಂಪರ್ಕಿಸದೆ ಔಷಧಿ ತೆಗೆದುಕೊಳ್ಳಬೇಡಿ

ಪ್ರಮುಖ ಸುದ್ದಿ :-   ಚಿನ್ನ ಕಳ್ಳಸಾಗಣೆ ಪ್ರಕರಣ: ನಟಿ ರನ್ಯಾ ಮಲತಂದೆ ಡಿಜಿಪಿ ರಾಮಚಂದ್ರ ರಾವ್‍ಗೆ 'ಕಡ್ಡಾಯ ರಜೆ' ನೀಡಿದ ಸರ್ಕಾರ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement