ಹೊನ್ನಾವರ: ಲಾರಿಯೊಂದು ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 69ರ ಹೊನ್ನಾವರ – ಸಾಗರ ರಸ್ತೆಯ ಸುಳಿಮುರ್ಖಿ ತಿರುವಿನಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಕಬ್ಬಿಣದ ಆಟದ ಸಾಮಾನುಗಳನ್ನು ತುಂಬಿಕೊಂಡು ಸಾಗರ ಕಡೆಯಿಂದ ಹೊನ್ನಾವರದತ್ತ ಬರುತ್ತಿದ್ದ ಲಾರಿ ಸೋಮವಾರ (ಜ.6) ನಸುಕಿನ ವೇಳೆ ಪಲ್ಟಿಯಾಗಿದೆ ಎನ್ನಲಾಗಿದೆ. ಘಟನೆಯಲ್ಲಿ ಇಬ್ಬರು ಮೃತ ಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ. ಲಾರಿಯಲ್ಲಿ ಆರು ಜನರಿದ್ದರು ಎನ್ನಲಾಗಿದ್ದು, ಮೃತರು ಮತ್ತು ಗಾಯಳುಗಳು ಮೂಲತಃ ಬಿಹಾರ ರಾಜ್ಯದವರು ಎಂದು ಹೇಳಲಾಗಿದೆ. ಗಾಯಗೊಂಡವರನ್ನು ಹೊನ್ನಾವರ ಆಸ್ಪತ್ರೆಗೆ ದಾಖಲಿಸಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ