ದೆಹಲಿ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟಿಸಿದ ಚುನಾವಣಾ ಆಯೋಗ; ಒಂದೇ ಹಂತದಲ್ಲಿ ಮತದಾನ

ನವದೆಹಲಿ: ದೆಹಲಿಯಲ್ಲಿ ವಿಧಾನಸಭೆ ಚುನಾವಣೆ ದಿನಾಂಕವನ್ನು ಚುನಾವಣಾ ಆಯೋಗವು ಪ್ರಕಟಿಸಿದ್ದು, ಫೆಬ್ರವರಿ 5 ರಂದು ಒಂದೇ ಹಂತದಲ್ಲಿ ನಡೆಯಲಿದೆ ಎಂದು ಮಂಗಳವಾರ ತಿಳಿಸಿದೆ. ಫೆಬ್ರವರಿ 8 ರಂದು ಮತ ಎಣಿಕೆ ನಡೆಯಲಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ ಚುನಾವಣಾ ಆಯುಕ್ತ ರಾಜೀವಕುಮಾರ ಅವರು, “ನಾವು ಶೀಘ್ರದಲ್ಲೇ ಒಂದು ಶತಕೋಟಿ ಮತದಾರರ ಹೊಸ ದಾಖಲೆ ಮಾಡಲಿದ್ದೇವೆ” ಎಂದು ಅವರು ಹೇಳಿದರು.
ಮಾದರಿ ನೀತಿ ಸಂಹಿತೆ (ಎಂಸಿಸಿ) ಜಾರಿಗೆ ಬಂದಿದೆ. ಚುನಾವಣಾ ಆಯೋಗ ಪ್ರಕಟಿಸಿರುವ ವೇಳಾಪಟ್ಟಿಯ ಪ್ರಕಾರ ಫೆಬ್ರವರಿ 5 ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ನಾಮಪತ್ರ ಸಲ್ಲಿಸಲು ಜನವರಿ 17 ಕೊನೆಯ ದಿನವಾಗಿದ್ದು, ನಾಮಪತ್ರ ಹಿಂಪಡೆಯಲು ಜನವರಿ 20 ಕೊನೆಯ ದಿನವಾಗಿದೆ.

ದೆಹಲಿ 70 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿದ್ದು, ಅವುಗಳಲ್ಲಿ 12 ಮೀಸಲು ಕ್ಷೇತ್ರವಾಗಿದೆ. ಒಟ್ಟು 13,033 ಮತಗಟ್ಟೆಗಳನ್ನು ಸ್ಥಾಪಿಸಲಾಗುತ್ತದೆ. ಈ ಚುನಾವಣೆಯಲ್ಲಿ 2 ಲಕ್ಷಕ್ಕೂ ಹೆಚ್ಚು ಯುವಕರು ಮೊದಲ ಬಾರಿಗೆ ಮತ ಚಲಾಯಿಸಲಿದ್ದಾರೆ. ಮತದಾನ ಸುಗಮಗೊಳಿಸಲು ಹಲವಾರು ಉಪಕ್ರಮಗಳನ್ನು ಘೋಷಿಸಿದ ಚುನಾವಣಾ ಸಂಸ್ಥೆ ಮುಖ್ಯಸ್ಥ ರಾಜೀವಕುಮಾರ, ವೃದ್ಧರು ಮತ್ತು ಅಂಗವಿಕಲರಿಗೆ ತೊಂದರೆಯಿಲ್ಲದೆ ಮತಗಟ್ಟೆಗೆ ಪ್ರವೇಶಿಸಲು ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದರು. 85 ವರ್ಷ ಮೇಲ್ಪಟ್ಟವರು ಮನೆಯಲ್ಲಿಯೇ ಮತ ಚಲಾಯಿಸಬಹುದು ಎಂದರು.

ಪ್ರಮುಖ ಸುದ್ದಿ :-   ವೀಡಿಯೊ...| ವಂದೇ ಭಾರತ ರೈಲಿನಲ್ಲಿ ಬಿಜೆಪಿ ಶಾಸಕನ ಜೊತೆ ತನ್ನ ಸೀಟು ಬದಲಾಯಿಸಿಕೊಳ್ಳಲು ಒಪ್ಪದ ಪ್ರಯಾಣಿಕನ ಮೇಲೆ ಹಲ್ಲೆ

ಆಡಳಿತಾರೂಢ ಎಎಪಿ ಹ್ಯಾಟ್ರಿಕ್ ಗೆಲುವಿನ ಮೇಲೆ ಕಣ್ಣಿಟ್ಟಿದೆ. 70 ಸ್ಥಾನಗಳ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಅರವಿಂದ್ ಕೇಜ್ರಿವಾಲ ನೇತೃತ್ವದ ಪಕ್ಷವು 2015 ಮತ್ತು 2020 ರ ಚುನಾವಣೆಗಳಲ್ಲಿ ಕ್ರಮವಾಗಿ 67 ಮತ್ತು 62 ಸ್ಥಾನಗಳನ್ನು ಗಳಿಸಿತ್ತು.
ಕಳೆದ ಎರಡು ಚುನಾವಣೆಗಳಲ್ಲಿ ಕೇವಲ ಒಂದೇ ಅಂಕೆಗೆ ಇಳಿದ ಬಿಜೆಪಿ, 26 ವರ್ಷಗಳ ವಿರಾಮದ ನಂತರ ರಾಷ್ಟ್ರ ರಾಜಧಾನಿಯಲ್ಲಿ ಚುಕ್ಕಾಣಿ ಹಿಡಿಯುವ ಪ್ರಯತ್ನದಲ್ಲಿದೆ. 15 ವರ್ಷಗಳ ಕಾಲ ದೆಹಲಿಯನ್ನು ಆಳಿದ ಕಾಂಗ್ರೆಸ್, 2024 ರ ಲೋಕಸಭಾ ಚುನಾವಣೆಗೆ ಎಎಪಿ ಜೊತೆ ಮೈತ್ರಿ ಮಾಡಿಕೊಂಡ ನಂತರ ವಿಧಾನಸಭೆಗೆ ಏಕಾಂಗಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸಲಿದೆ.

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement