ಬೆಳ್ಳಂಬೆಳಿಗ್ಗೆ ರಾಜ್ಯದ 8 ಕಡೆಗಳಲ್ಲಿ ಲೋಕಾಯುಕ್ತ ದಾಳಿ

ಬೆಂಗಳೂರು: ಇಂದು, ಬುಧವಾರ ಬೆಳ್ಳಂ ಬೆಳಗ್ಗೆ ಬೆಂಗಳೂರು ಸೇರಿ ರಾಜ್ಯದ 8 ಕಡೆಗಳಲ್ಲಿ ಲೋಕಾಯುಕ್ತ ದಾಳಿ (Lokayukta Raid) ನಡೆದಿದೆ. ಆಗಿದ್ದು, ಅಕ್ರಮ ಆಸ್ತಿ ಗಳಿಕೆ ಆರೋಪ ಎದುರಿಸುತ್ತಿರುವ ಅಧಿಕಾರಿಗಳ ಸೇರಿದ ಮನೆ, ಆಸ್ತಿ, ಕಚೇರಿಗಳ ಮೇಲೆ ಏಕಕಾಲಕ್ಕೆ ದಾಳಿ ನಡೆದಿದ್ದು, ಲೋಕಾಯುಕ್ತ ಅಧಿಕಾರಿಗಳು ದಾಖಲೆಗಳನ್ನ ಪರಿಶೀಲಿಸುತ್ತಿದ್ದಾರೆ.
ಬೆಂಗಳೂರು, ಬೆಳಗಾವಿ, ರಾಯಚೂರು, ಚಿಕ್ಕಮಗಳೂರು, ಬೀದರ, ಗದಗ, ಬಳ್ಳಾರಿ ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ ನಡೆದಿದೆ. ಬೆಂಗಳೂರು ಟ್ರಾನ್ಸ್ ಪೋರ್ಟ್ ಡಿಪಾರ್ಟ್ಮೆಂಟ್ ಜಂಟಿ ನಿರ್ದೇಶಕರಾದ ಶೋಭಾ, ಚಿಕ್ಕಮಗಳೂರು ಜಿಲ್ಲೆ ಕಡೂರಿನ ಕುಟುಂಬ ಕಲ್ಯಾಣ ಇಲಾಖೆಯ ಡಾ. ಎಸ್‌ ಎನ್ ಉಮೇಶ, ಬೀದರ ಜಿಲ್ಲೆಯ ಸಣ್ಣ ನೀರಾವರಿ ಇಲಾಖೆ ಇನ್ಸ್‌ಪೆಕ್ಟರ್ ರವೀಂದ್ರ , ಬೆಳಗಾವಿ ಜಿಲ್ಲೆಯ ಖಾನಾಪುರ ತಹಶಿಲ್ದಾರ ಪ್ರಕಾಶ ಶ್ರೀಧರ , ರಾಯಚೂರು ಜಿಲ್ಲೆಯ ಬೆಸ್ಕಾಂ ಜೂ. ಇಂಜಿನಿಯರ್ ಹುಲಿರಾಜ್, ತುಮಕೂರು ಜಿಲ್ಲೆಯ ನಿವೃತ್ತ ಆರ್ ಟಿಓ ಅಧಿಕಾರಿ ಮನೆ, ಬಳ್ಳಾರಿ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಆರ್ ಹೆಚ್ ಲೋಕೇಶ್ ಸೇರಿದಂತೆ ಎಂಟು ಜಿಲ್ಲೆಯ ಅಧಿಕಾರಿಗಳ ಮನೆ ಮತ್ತು ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಪ್ರಮುಖ ಸುದ್ದಿ :-   ಇನ್ಮುಂದೆ ಸ್ವಾಧೀನಾನುಭವ ಪ್ರಮಾಣಪತ್ರ ಪಡೆದರೆ ಮಾತ್ರ ಕಟ್ಟಡಗಳಿಗೆ ವಿದ್ಯುತ್‌, ನೀರಿನ ಸಂಪರ್ಕ; ಬಿಬಿಎಂಪಿ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement