ಮಂಗಳೂರು: ಹೊಸಬೆಟ್ಟು ಬೀಚ್ ಬಳಿ ಸಮುದ್ರದಲೆಗೆ ಕೊಚ್ಚಿಹೋದ ಮೂವರು ವೈದ್ಯಕೀಯ ವಿದ್ಯಾರ್ಥಿಗಳು!
ಮಂಗಳೂರು : ಸಮುದ್ರದಲ್ಲಿ ಈಜಲು ತೆರಳಿದ್ದ ಮೂವರು ನೀರುಪಾಲಾದ ಘಟನೆ ಮಂಗಳೂರು ಹೊರವಲಯದ ಸುರತ್ಕಲ್ನ ಕುಳಾಯಿ ಜೆಟ್ಟಿ ಬಳಿಯ ಹೊಸಬೆಟ್ಟು ಸಮುದ್ರ ತೀರದಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಮೃತರನ್ನು ಬೆಂಗಳೂರಿನ ಎಎಂಸಿ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಾದ ಮಂಜುನಾಥ, ಶಿವಕುಮಾರ ಹಾಗೂ ಸತ್ಯವೇಲು ಎಂದು ಗುರುತಿಸಲಾಗಿದೆ. ಮಂಗಳೂರಿಗೆ ಪ್ರವಾಸಕ್ಕೆಂದು ಬಂದಿದ್ದ ನಾಲ್ವರು ಸಮುದ್ರಕ್ಕೆ ಇಳಿದಿದ್ದರು. ಅವರಲ್ಲಿ ಬೀದರ ಜಿಲ್ಲೆಯ ಪರಮೇಶ್ವರ ಚಿತ್ರದುರ್ಗ ಜಿಲ್ಲೆಯ ಉಪ್ಪರಿಗೇನಹಳ್ಳಿಯ ಮಂಜುನಾಥ ಹಾಗೂ ಶಿವಮೊಗ್ಗದ ಶಿವಕುಮಾರ ಎಂಬವರು ಸಮುದ್ರ ತೆರೆಗಳ ಹೊಡೆತಕ್ಕೆ ಕೊಚ್ಚಿ ಹೋಗಿದ್ದಾರೆ ಎಂದು ಹೇಳಲಾಗಿದೆ. ಬೆಂಗಳೂರಿನ ಸತ್ಯವೇಲು ಎಂಬವರನ್ನು ರಕ್ಷಿಸಲಾಗಿದೆ ರಂದು ವರದಿಗಳು ತಿಳಿಸಿವೆ. ಈಜಾಡಲು ನೀರಿಗೆ ಇಳಿದಿದ್ದಾರೆ. ಮೃತದೇಹಗಳನ್ನು ನಗರದ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.
ಇವರೆಲ್ಲರೂ ಬೆಂಗಳೂರಿನ ಎಎಂಸಿ ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳು ಎಂದು ತಿಳಿದುಬಂದಿದೆ. ಬೆಂಗಳೂರಿನಿಂದ ನಾಲ್ವರು ಪ್ರವಾಸಕ್ಕೆಂದು ಬಂದಿದ್ದರು ಎನ್ನಲಾಗಿದೆ. ಸುರತ್ಕಲ್ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಬಂದಿದ್ದು, ಪರಿಶೀಲನೆ ಮಾಡಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ