ಶಸ್ತ್ರಾಸ್ತ್ರ ತ್ಯಜಿಸಿ ಸಿಎಂ ಸಿದ್ದರಾಮಯ್ಯ ಎದುರು 6 ನಕ್ಸಲರು ಶರಣಾಗತಿ

ಬೆಂಗಳೂರು: ಬುಧವಾರ (ಜ. 8) 6 ಮಂದಿ ನಕ್ಸಲೀಯರು ಶಸ್ತ್ರಾಸ್ತ್ರಗಳನ್ನು ತ್ಯಜಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಂದೆ ಶರಣಾಗಿದ್ದಾರೆ.
ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ನಕ್ಸಲರಾದ ಮುಂಡಗಾರು ಲತಾ, ವನಜಾಕ್ಷಿ, ದಕ್ಷಿಣ ಕನ್ನಡ ಜಿಲ್ಲೆ ಕುಂತಲೂರು ಮೂಲದ ಸುಂದರಿ, ಮಾರಪ್ಪ ಅರೋಳಿ, ವನಜಾಕ್ಷಿ ಬಾಳೆಹೊಳೆ ಹಾಗೂ ಕೇರಳದ ವೈನಾಡಿನ ಎನ್. ಜೀಶಾ ಹಾಗೂ ತಮಿಳುನಾಡಿನ ಕೆ. ವಸಂತ ಅವರು ಕೆಂಪು ಬಾವುಟ ಕೆಳಗಿಟ್ಟು ಶರಣಾದರು. ಈ ವೇಳೆ ಗೃಹ ಸಚಿವ ಡಾ. ಜಿ. ಪರಮೇಶ್ವರ ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು. ಸರ್ಕಾರದ ಶರಣಾಗತಿ ಪ್ಯಾಕೇಜ್ ಒಪ್ಪಿಕೊಂಡು ಶರಣಾಗುವ ಮೂಲಕ ನಕ್ಸಲರು ಸಮಾಜದ ಮುಖ್ಯವಾಹಿನಿಗೆ ಮರಳಿದ್ದಾರೆ.

ಪೊಲೀಸರು ಶರಣಾದ ನಕ್ಸಲರನ್ನು ತಮ್ಮ ವಶಕ್ಕೆ ಪಡೆಯಲಿದ್ದು, ಕೋರ್ಟ್‌ಗೆ ಹಾಜರುಪಡಿಸಿ ಮುಂದಿನ ಪ್ರಕ್ರಿಯೆಗಳನ್ನು ಕೈಗೊಳ್ಳಲಿದ್ದಾರೆ. ಇದರೊಂದಿಗೆ ಹಲವು ದಶಕಗಳಿಂದ ಸರ್ಕಾರಕ್ಕೆ ತಲೆ ನೋವಾಗಿದ್ದ ನಕ್ಸಲ್ ಚಳವಳಿ ಬಹುತೇಕ ಅಂತ್ಯವಾಗಿದೆ. ಶರಣಾದ ನಕ್ಸಲರ ಪೈಕಿ ಮುಂಡಗಾರು ಲತಾ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿನ ಮುಂಡಗಾರು ಗ್ರಾಮದವರು. ಹಲವು ವರ್ಷಗಳಿಂದ ಇವರು ಕರ್ನಾಟಕದಲ್ಲಿ ನಕ್ಸಲ್ ಚಟುವಟಿಕೆಯಲ್ಲಿ ಸಕ್ರಿಯರಾಗಿದ್ದು, ಇವರ ವಿರುದ್ಧ 85 ಪ್ರಕರಣಗಳಿವೆ ಎನ್ನಲಾಗಿದೆ.
ನಕ್ಸಲರು ಕಳೆದ ಮೂರು ದಿನಗಳಿಂದ ಚಿಕ್ಕಮಗಳೂರು ಕಾಡಿನಲ್ಲಿ ನಾಗರಿಕ ವೇದಿಕೆ ಸದಸ್ಯರ ಜೊತೆ ಶರಣಾಗತಿ ಕುರಿತು ನಡೆಸಿದ್ದರು. ಅವರು ಶರಣಾಗಲು ಬುಧವಾರ ನಿಗದಿ ಮಾಡಲಾಯಿತು.

ಪ್ರಮುಖ ಸುದ್ದಿ :-   48 ನಾಯಕರ ಹನಿಟ್ರ್ಯಾಪ್ ಸಿಡಿ ಇದೆ, ನನ್ನ ಮೇಲೂ ಯತ್ನ; ಸಚಿವ ಕೆ.ಎನ್. ರಾಜಣ್ಣ ಸ್ಫೋಟಕ ಮಾಹಿತಿ

ಮೊದಲು ನಕ್ಸಲರು ಚಿಕ್ಕಮಗಳೂರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶರಣಾಗಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿತ್ತು. .ಆದರೆ ಬುಧವಾರ ಬೆಳಗ್ಗೆ ಪೊಲೀಸರ ಭದ್ರತೆಯಲ್ಲಿ ಬೆಂಗಳೂರಿಗೆ ಆಗಮಿಸಿದ ನಕ್ಸಲರು, ಮುಖ್ಯಮಂತ್ರಿಗಳ ಮುಂದೆ ಶರಣಾಗಿದ್ದಾರೆ. ಪೊಲೀಸರು ಅವರನ್ನು ವಶಕ್ಕೆ ಪಡೆದು ಮುಂದಿನ ಪ್ರಕ್ರಿಯೆ ಕೈಗೊಳ್ಳಲಿದ್ದಾರೆ. ನಕ್ಸಲರನ್ನು ಮೊದಲು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ, ನಂತರ ಕೋರ್ಟ್‌ ಮುಂದೆ ಹಾಜರುಪಡಿಸಬೇಕಿದೆ.
ಈ ಹಿಂದೆ ರಾಜ್ಯ ಸರ್ಕಾರ ಘೋಷಿಸಿದ್ದ ನಕ್ಸಲ್ ಶರಣಾಗತಿ ಪ್ಯಾಕೇಜ್ ಅಡಿ ಹಾಗಲಗಂಚಿ ವೆಂಕಟೇಶ, ಮಲ್ಲಿಕಾ, ಹೊರ್ಲೆ ಜಯ, ಸಿರಿಮನೆ ನಾಗರಾಜ, ನೂರು ಶ್ರೀಧರ, ನೀಲಗುಳಿ ಪದ್ಮನಾಭ, ಪರಶುರಾಮ, ಭಾರತಿ, ಕನ್ಯಾಕುಮಾರಿ, ಶಿವು, ಚನ್ನಮ್ಮು ಸೇರಿದಂತೆ ಒಟ್ಟು 14 ಮಂದಿ ನಕ್ಸಲೀಯರು ಸಮಾಜದ ಮುಖ್ಯ ವಾಹನಿಗೆ ಮರಳಿದ್ದರು.

ಪ್ರಮುಖ ಸುದ್ದಿ :-   ಭಾರತ ಸರ್ಕಾರ ವಿರುದ್ಧ ಹೈಕೋರ್ಟ್​​ನಲ್ಲಿ ಮೊಕದ್ದಮೆ ಹೂಡಿದ ಇಲಾನ್ ಮಸ್ಕ್ ಒಡೆತನದ ಎಕ್ಸ್‌

4 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement