ಅನರ್ಹರ ಬಿಪಿಎಲ್​ ಕಾರ್ಡ್​ ರದ್ದು ಮಾಡಿ ; ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು : ಅನರ್ಹ ಬಿಪಿಎಲ್ ಪಡಿತರ ಚೀಟಿದಾರರನ್ನು ಗುರುತಿಸಿ ಅಂತಹ ಕಾರ್ಡ್‌ಗಳನ್ನು ಹಂತ ಹಂತವಾಗಿ ರದ್ದು ಮಾಡಿ. ಆದರೆ, ಈ ವೇಳೆ ಯಾವುದೇ ಅರ್ಹರ ಬಿಪಿಎಲ್ ಕಾರ್ಡ್ ರದ್ದು ಮಾಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು, ಗ್ರಾಹಕರ ವ್ಯವಹಾರಗಳು ಮತ್ತು ಕಾನೂನು ಮಾಪನಶಾಸ್ತ್ರ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು ಅಧಿಕಾರಿಗಳಿಗೆ ಈ ಸೂಚನೆ ನೀಡಿದ್ದಾರೆ.
ಅನರ್ಹ ಬಿಪಿಎಲ್ ಕಾರ್ಡುದಾರರು ಸ್ವಯಂ ಪ್ರೇರಿತವಾಗಿ ತಮ್ಮ ಕಾರ್ಡ್‍ಗಳನ್ನು ಹಿಂತಿರುಗಿಸಲು ಅವಕಾಶ ನೀಡಬೇಕು. ಅದಾದ ನಂತರ ಆಗಲೂ ಅವರು ಹಿಂತಿರುಗಿಸದಿದ್ದರೆ ಅಂಥವರಿಗೆ ನೊಟೀಸ್ ನೀಡಿ ಬಿಪಿಎಲ್ ಕಾರ್ಡುಗಳನ್ನು ರದ್ದುಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಸಿದ್ದರಾಮಯ್ಯ ಸೂಚಿಸಿದ್ದಾರೆ.
ಕನಿಷ್ಠ ಬೆಂಬಲ ಬೆಲೆ ಅಡಿ ಆಹಾರ ಧಾನ್ಯ ಸಂಗ್ರಹಿಸಲು ಎಲ್ಲಾ ವ್ಯವಸ್ಥೆ ಮಾಡಬೇಕು. ರೈತರಿಗೆ ಸಮಸ್ಯೆಯಾಗದಂತೆ

ತ್ವರಿತವಾಗಿ ಎಲ್ಲ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಬೇಕು. ರಾಜ್ಯದಲ್ಲಿ 1,53,69,945 ಪಡಿತರ ಚೀಟಿಗಳಿದ್ದು, 5,30,88,636 ಫಲಾನುಭವಿಗಳಿದ್ದಾರೆ. ಇಲಾಖೆಯಲ್ಲಿ ಒಟ್ಟು 709 ಹುದ್ದೆಗಳು ಖಾಲಿಯಿವೆ. ಒಂದು ರಾಷ್ಟ್ರ ಒಂದು ಪಡಿತರ ಚೀಟಿ ಯೋಜನೆಯಡಿ ಕರ್ನಾಟಕದಲ್ಲಿ ಬೇರೆ ರಾಜ್ಯಗಳ 13,383 ಫಲಾನುಭವಿಗಳು ಪಡಿತರ ಸೌಲಭ್ಯ ಪಡೆಯುತ್ತಿದ್ದಾರೆ ಎಂದು ಮಾಹಿತಿ ನೀಡಲಾಯಿತು.
ಕುಟುಂಬದಲ್ಲಿ ಒಬ್ಬರೇ ಇರುವ, 80 ವರ್ಷ ದಾಟಿದವರಿಗೆ ಮನೆ ಬಾಗಿಲಿಗೆ ಆಹಾರ ಧಾನ್ಯ ಒದಗಿಸುವ ಅನ್ನ-ಸುವಿಧಾ ಯೋಜನೆಯನ್ನು ಜಾರಿಗೊಳಿಸಲಾಗಿದೆ. 8,500 ಪಡಿತರ ಚೀಟಿದಾರರು ಯೋಜನೆಯಡಿ ಪ್ರಯೋಜನ ಪಡೆಯುತ್ತಿದ್ದಾರೆ ಎಂದು ತಿಳಿಸಲಾಯಿತು.

ಪ್ರಮುಖ ಸುದ್ದಿ :-   ಬೆಂಗಳೂರು | ತನ್ನ ಒಪ್ಪಿಗೆಯಿಲ್ಲದೆ ಇನ್‌ಸ್ಟಾಗ್ರಾಮ್ ವೀಡಿಯೊ ಪೋಸ್ಟ್ ; ಮಹಿಳೆಯ ದೂರಿನ ನಂತರ ವ್ಯಕ್ತಿಯ ಬಂಧನ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement