ಬೈಕ್ ಕಳ್ಳತನದ ಶಂಕೆ : ವ್ಯಕ್ತಿಯನ್ನು ತಲೆಕೆಳಗಾಗಿ ನೇತುಹಾಕಿ ಥಳಿಸಿದ ಗುಂಪು

ಬಾರ್ಮರ್ : ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ಬೈಕ್ ಕಳ್ಳತನದ ಶಂಕೆಯ ಮೇಲೆ ಜನರ ಗುಂಪೊಂದು ವ್ಯಕ್ತಿಯೊಬ್ಬನನ್ನು ಮರಕ್ಕೆ ತಲೆಕೆಳಗಾಗಿ ನೇತುಹಾಕಿ ಕ್ರೂರವಾಗಿ ಥಳಿಸಿದ ಘಟನೆ ನಡೆದಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ಶುಕ್ರವಾರ ಗುಢಾ ಮಲಾನಿ ಪ್ರದೇಶದ ಭಖರ್ಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಶ್ರವಣಕುಮಾರ ಎಂಬಾತ ಪ್ರತ್ಯೇಕ ಕಳ್ಳತನ ಪ್ರಕರಣದಲ್ಲಿ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದ.
ಡಿಸೆಂಬರ್ 29 ರಂದು ಸ್ಥಳೀಯ ಜಾತ್ರೆಯಲ್ಲಿ ಬೈಕ್ ಕದ್ದಿದ್ದಾಗಿ ಕಂಡುಬಂದ ನಂತರ ಶ್ರವಣಕುಮಾರನನ್ನು ಬಂಧಿಸಲಾಗಿತ್ತು ಎಂದು ಬಾರ್ಮರ್ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ನರೇಂದ್ರ ಸಿಂಗ್ ಮೀನಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಕೆಲವು ದಿನಗಳ ಹಿಂದೆ ಆತ ಜಾಮೀನಿನ ಮೇಲೆ ಬಿಡುಗಡೆಯಾದ ನಂತರ, ಗ್ರಾಮಸ್ಥರು ಆತ ಮತ್ತೊಂದು ಬೈಕ್ ಕದ್ದಿದ್ದಾರೆ ಎಂದು ಆರೋಪಿಸಿದ್ದಾರೆ. ಆದಾಗ್ಯೂ, ಆ ವ್ಯಕ್ತಿ ತನ್ನ ವಿರುದ್ಧದ ಬೈಕ್‌ ಕದ್ದ ಈ ಹೊಸ ಆರೋಪವನ್ನು ನಿರಾಕರಿಸಿದ್ದಾನೆ.

ಶುಕ್ರವಾರ, ಗ್ರಾಮಸ್ಥರು ಆತನನ್ನು ಹಿಡಿದು, ಕೈಗಳನ್ನು ಕಟ್ಟಿ, ಮರಕ್ಕೆ ತಲೆಕೆಳಗಾಗಿ ನೇತು ಹಾಕಿದರು. ನಂತರ ಗ್ರಾಮಸ್ಥರು ಆ ವ್ಯಕ್ತಿಯನ್ನು ಥಳಿಸಿದರು. ಅವರು ಹಲ್ಲೆ ಮಾಡಿದ ವೀಡಿಯೊ ವೈರಲ್ ಆಗಿದೆ” ಎಂದು ಮೂಲವೊಂದು ತಿಳಿಸಿದೆ.
ಗುಡಮಲನಿ ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿಎಸ್‌ಪಿ) ಸುಖರಾಮ್ ಬಿಷ್ಣೋಯ್ ಮಾತನಾಡಿ, ಸಂತ್ರಸ್ತನ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಪೊಲೀಸರು 53 ಸೆಕೆಂಡುಗಳ ವೀಡಿಯೊವನ್ನು ಗಮನದಲ್ಲಿಟ್ಟುಕೊಂಡಿದ್ದಾರೆ.
“ಕಳ್ಳತನದ ಶಂಕೆಯ ಮೇಲೆ ಶುಕ್ರವಾರ ಶ್ರವಣಕುಮಾರ ಮೇಲೆ ಗ್ರಾಮಸ್ಥರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಹಿಂದೆ ಆತನ ಮೇಲೆ ಮತ್ತೊಂದು ಕಳ್ಳತನ ಪ್ರಕರಣ ದಾಖಲಾಗಿತ್ತು. ಸಂತ್ರಸ್ತನ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದ್ದು, ವಿವರವಾದ ತನಿಖೆ ನಡೆಯುತ್ತಿದೆ” ಎಂದು ಬಿಷ್ಣೋಯ್ ಹೇಳಿದ್ದಾರೆ.

ಪ್ರಮುಖ ಸುದ್ದಿ :-   ಗಂಟಲಲ್ಲಿ ಪಿಸ್ತಾ ಸಿಪ್ಪೆ ಸಿಲುಕಿ 2 ವರ್ಷದ ಮಗು ಸಾವು

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement