ಬೇರೆಯವರ ಮೇಲೆ ಸೇಡು ತೀರಿಸಿಕೊಳ್ಳಲು ಹುಸಿ ಬಾಂಬ್‌ ಬೆದರಿಕೆ ಕರೆ ; ಆರೋಪಿ ಬಂಧನ

ಬೆಂಗಳೂರು: ರಾಮೇಶ್ವರಂ ಕೆಫೆ ಸ್ಫೋಟದ (Rameshwaram Cafe) ರೀತಿಯಲ್ಲಿ ಗಣರಾಜ್ಯೋತ್ಸವದಂದು 6 ಗಣ್ಯರ ಮನೆ ಸ್ಫೋಟಿಸುವುದಾಗಿ ಬೆದರಿಕೆ ಕರೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ವ್ಯಕ್ತಿಯೊಬ್ಬನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿಚಾರಣೆ ವೇಳೆ ಐದು ಜನರ ಮೇಲೆ ಸೇಡು ತೀರಿಸಿಕೊಳ್ಳಲು ಹುಸಿ ಬಾಂಬ್‌ ಬೆದರಿಕೆ (Hoax Homb threat) ಹಾಕಿರುವುದಾಗಿ ಆರೋಪಿ ಹೇಳಿದ್ದಾನೆ.
ಕಳೆದ ವರ್ಷ ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಬಾಂಬ್ ಸ್ಪೋಟಿಸಿದಂತೆ ಬೆಂಗಳೂರಿನ ವಿವಿಧೆಡೆ ಬಾಂಬ್‌ ಸ್ಫೋಟ ನಡೆಸುವುದಾಗಿ ಬೆದರಿಕೆ ಕರೆ ಬಂದ ಹಿನ್ನೆಲೆಯಲ್ಲಿ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದಕ್ಕೆ ಸಂಬಂಧಿಸಿ ಇದೀಗ ವ್ಯಕ್ತಿಯೊಬ್ಬನನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಗಣರಾಜೋತ್ಸವದ ಸಂದರ್ಭದಲ್ಲಿ ನಗರದ ವಿವಿಧೆಡೆ ಬಾಂಬ್ ಸ್ಫೋಟವಾಗಲಿದೆ ಎಂದು ಜನವರಿ 9ರಂದು ಸಂಜೆ 5:30ರ ಸುಮಾರಿಗೆ ಬೆಂಗಳೂರು ಪೊಲೀಸ್ ಆಯುಕ್ತರ ಕಚೇರಿಯಲ್ಲಿರುವ ಕಂಟ್ರೊಲ್ ರೂಮ್‌ಗೆ ಅಪರಿಚಿತನೊಬ್ಬ ಕರೆ ಮಾಡಿದ್ದ. ಈತ 6 ಜನರ ಹೆಸರು ಹಾಗೂ ವಿಳಾಸಗಳನ್ನು ತಿಳಿಸಿ ರಾಮೇಶ್ವರಂ ಕೆಫೆಯಲ್ಲಿ ಈ ಹಿಂದೆ ಬಾಂಬ್ ಸ್ಫೋಟವಾದಂತೆ ಆರು ಜನರು ಮನೆಗಳಲ್ಲಿ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದ. ಅಲ್ಲದೆ, ಆರು ಜನರು ಇದಕ್ಕೆ ಸಂಚು ರೂಪಿಸಿದ್ದಾಗಿ ಹೇಳಿ ಅವರ ಹೆಸರನ್ನೂ ಹೇಳಿದ್ದ ಎನ್ನಲಾಗಿದೆ.

ಪ್ರಮುಖ ಸುದ್ದಿ :-   19 ಸಾಧಕರಿಗೆ 2024-25ನೇ ಸಾಲಿನ ವಿವಿಧ ಪ್ರಶಸ್ತಿ ಪ್ರಕಟಿಸಿದ ರಾಜ್ಯ ಸರ್ಕಾರ ; ವಿವೇಕ ರೈಗೆ ಪಂಪ ಪ್ರಶಸ್ತಿ, ಡಾ. ಗುಂಜಾಳಗೆ ಬಸವ ಪುರಸ್ಕಾರ

ಪೊಲೀಸ್ ಕಂಟ್ರೋಲ್ ರೂಮ್ ಪಿಎಸ್ಐ ನೀಡಿರುವ ದೂರಿನನ್ವಯ ಅಪರಿಚಿತನ ವಿರುದ್ಧ ವಿಧಾನಸೌಧ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ನಂತರ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸೈಯದ್ ಎಂಬಾತನನ್ನು ವಶಕ್ಕೆ ಪಡೆಯಲಾಯಿತು, ತಾನು ಸೇಡು ತೀರಿಸಿಕೊಳ್ಳಲು ಈ ರೀತಿ ಹುಸಿ ಬಾಂಬ್ ಕರೆ ಮಾಡಿದ್ದಾಗಿ ಪೊಲೀಸರ ವಿಚಾರಣೆ ವೇಳೆ ಹೇಳಿದ್ದಾನೆ ಎನ್ನಲಾಗಿದೆ. ಪ್ರಾಥಮಿಕ ತನಿಖೆಯಲ್ಲಿ ವ್ಯವಹಾರದಲ್ಲಿ ನಷ್ಟ ಆಗಿದ್ದಕ್ಕೆ ಬಾಂಬ್ ಬೆದರಿಕೆ ಕರೆ ಮಾಡಿದ್ದಾನೆ ಎಂಬ ವಿಚಾರ ಬೆಳಕಿಗೆ ಬಂದಿದೆ. ವಿಚಾರಣೆ ವೇಳೆ ಆರು ಜನರ ಮೇಲೆ ಸೇಡು ತೀರಿಸಿಕೊಳ್ಳಲು ಸುಳ್ಳು ಪ್ರಕರಣದಲ್ಲಿ ಸಿಲುಕಿಸಲು ಪ್ರಯತ್ನಿಸಿದ್ದಾಗಿ ಹೇಳಿಕೆ ನೀಡಿದ್ದಾನೆ ಎನ್ನಲಾಗಿದೆ.

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement