ಯುವತಿಯರಿಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ; ವೀಡಿಯೊ ಮಾಡಿ ಬೆದರಿಸುತ್ತಿದ್ದ ಆರೋಪಿಗಳ ಬಂಧನ

ಬೆಳಗಾವಿ: ಜಿಲ್ಲೆಯ ರಾಯಬಾಗ ತಾಲೂಕು ಹಾರೂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 17 ವರ್ಷದ ಯುವತಿಯರಿಬ್ಬರ ಮೇಲೆ ಮೂವರು ಯುವಕರು ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ನಡೆದಿದ್ದು, ಅತ್ಯಾಚಾರದ ವೀಡಿಯೊ ಚಿತ್ರೀಕರಿಸಿಕೊಂಡು ಬೆದರಿಕೆ ಹಾಕುತ್ತಿದ್ದ ಆರೋಪಿಗಳ ಪೈಕಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಅಭಿಷೇಕ ದೇವನೂರು, ಆದಿಲ್ ಶಾ ಬಂಧಿತರಾಗಿದ್ದಾರೆ. ಇನ್ನೊಬ್ಬ ಕೌತುಬ್ ಬಾಬುಸಾಬ್ ಬಡಿಗೇರ್ ತಲೆಮರೆಸಿಕೊಂಡಿದ್ದಾನೆ. ಮೂವರ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಭೀಮಶಂಕರ ಗುಳೇದ ಮಾಹಿತಿ ನೀಡಿದ್ದಾರೆ.
ಯುವತಿಯರಿಬ್ಬರೂ ಕಾಲೇಜಿನಲ್ಲಿ ಪಿಯುಸಿ ಓದುತ್ತಿದ್ದಾರೆ. ಅಭಿಷೇಕ ದೇವನೂರ ಎಂಬಾತ ಇನ್ಸ್ಟಾಗ್ರಾಂ(instagram)ನಲ್ಲಿ ಮೆಸೇಜ್ ಮಾಡಿ ಯುವತಿಯ ಪರಿಚಯ ಮಾಡಿಕೊಂಡಿದ್ದಾನೆ. ನಂತರ ಪ್ರತಿಕ್ರಿಯೆ ನೀಡಿದ ಯುವತಿಗೆ ಆರೋಪಿಯೊಂದಿಗೆ ಪರಿಚಯವಾಯಿತು. ಜನವರಿ ೩ರಂದು ಅಥಣಿ ತಾಲೂಕು ಕೊಕಟನೂರ ಜಾತ್ರೆಯಲ್ಲಿ ಇಬ್ಬರು ಭೇಟಿಯಾಗಿ ಪರಿಚಯ ಮಾಡಿಕೊಂಡಿದ್ದರು. ಎರಡನೇ ಭೇಟಿಯಲ್ಲಿ ಯುವತಿಯನ್ನು ಸವದತ್ತಿಯ ಯಲ್ಲಮ್ಮನ ಗುಡ್ಡಕ್ಕೆ ಹೋಗಿ ಬರೋಣ ಎಂದು ಅಭಿಷೇಕ ಪುಸಲಾಯಿಸಿದ್ದು, ಯುವತಿ ಬರುವಾಗ ತನ್ನ ಸ್ನೇಹಿತೆಯನ್ನು ಕರೆದುಕೊಂಡು ಬಂದಿದ್ದಳು. ಅಭಿಷೇಕ ತನ್ನ ಇಬ್ಬರು ಸ್ನೇಹಿತರಾದ ಆದಿಲ್ ಶಾ ಮತ್ತು ಕೌತುಬ್ ನನ್ನು ಕರೆದುಕೊಂಡು ಬಂದಿದ್ದಾನೆ. ಕಾರಿನಲ್ಲಿ ಎಲ್ಲರೂ ಪ್ರಯಾಣ ಬೆಳೆಸಿದ್ದರು. ಈ ಮೂರು ಯುವಕರು ಯುವತಿಯರನ್ನು ಸವಸುದ್ದಿ ಹೊರ ವಲಯದ ಗುಡ್ಡದ ಪ್ರದೇಶಕ್ಕೆ ಕರೆದುಕೊಂಡು ಹೋಗಿದ್ದಾರೆ. ಗುಡ್ಡದಲ್ಲಿ ಅಭಿಷೇಕ ಮತ್ತು ಆದಿಲ್ ಸೇರಿ ಒಬ್ಬ ಯುವತಿ ಮೇಲೆ ಅತ್ಯಾಚಾರ ಎಸಗಿದ್ದಾರೆ. ಕಾರಿನಲ್ಲಿ ಕೌತುಬ್ ಇನ್ನೊಬ್ಬ ಯುವತಿ ಮೇ ಅತ್ಯಾಚಾರ ಎಸಗಿದ್ದ ಎಂದು ಆರೋಪಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಅತ್ಯಾಚಾರದ ಕ್ಷಣಗಳನ್ನು ಯುವಕರು ತಮ್ಮ ಮೊಬೈಲ್ ನಲ್ಲಿ ಚಿತ್ರೀಕರಣ ಮಾಡಿಕೊಂಡಿದ್ದಾರೆ. ವೀಡಿಯೊ ಇಟ್ಟುಕೊಂಡು ಪದೇ ಪದೇ ಕರೆದಲ್ಲಿ ಬರುವಂತೆ ಬೆದರಿಕೆ ಹಾಕುತ್ತಿದ್ದರು. ಮುಂದಿನ ವಾರ ಎಲ್ಲರೂ ಗೋವಾಕ್ಕೆ ಹೋಗೋಣ, ಬರದೇ ಇದ್ದರೆ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವುದಾಗಿ ಬ್ಲಾಕ್ ಮೇಲ್ ಮಾಡಿದ್ದರು. ಇದರಿಂದ ಹೆದರಿದ ಯುವತಿ ಜನವರಿ 13ರಂದು ಹಾರೂಗೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದು, ಅಗ ಇಡೀ ಪ್ರಕರಣ ಬೆಳಕಿಗೆ ಬಂದಿದೆ ಎಂದು ಗುಳೇದ ಅವರು ತಿಳಿಸಿದರು.
ಅತ್ಯಾಚಾರ ಮತ್ತು ವೀಡಿಯೊ ಮಾಡಿದ ವಿಷಯವನ್ನು ಪೊಲೀಸರಿಗೆ ತಿಳಿಸಿದರೆ ಕೊಲೆ ಮಾಡುವುದಾಗಿ ಯುವತಿಯನ್ನು ಬೆದರಿಸಿದ್ದರು. ಹೀಗಾಗಿ ಯುವತಿಯರು ತಡವಾಗಿ ದೂರು ದಾಖಲು ಮಾಡಿದ್ದಾರೆ. ಇನ್ನೊಬ್ಬನಿಗೆ ಪೊಲೀಸರು ಶೋಧ ನಡೆಸಿದ್ದಾರೆ ಎಂದು ಅವರು ತಿಳಿಸಿದರು.

ಪ್ರಮುಖ ಸುದ್ದಿ :-   ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ 3 ದಿನ ಜೋರಾದ ಗಾಳಿ ಮಳೆಯ ಮುನ್ಸೂಚನೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement